ಗೋ ಹತ್ಯೆ ನಿಷೇಧ ಕಾಯ್ದೆ: ಹೈಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್
ಬೆಂಗಳೂರು,ಜನವರಿ12: ಗೋ ಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಈ ಬಗ್ಗೆ ಸ್ಪಷ್ಟನೆ ಕೇಳಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಸಚಿನ್ ಶಂಕರ್ ಮಗುದಂ ಅವರನ್ನು ಒಳಗೊಂಡ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಇತ್ತೀಚೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು. ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಹಾಗೆಯೇ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಜೀವನೋಪಾಯದ ಹಕ್ಕನ್ನು ಉಲ್ಲಂಘಿಸಿವೆ.
ಹಾಗೆಯೇ ಈ ಸುಗ್ರೀವಾಜ್ಞೆಯು ವ್ಯಾಪಾರ ಮತ್ತು ವ್ಯವಹಾರದ ಹಕ್ಕನ್ನು ಉಲ್ಲಂಘಿಸಿವೆ ಎಂದು ಅರ್ಜಿದಾರ ಮೊಹಮ್ಮದ್ ಆರಿಫ್ ತಮ್ಮ ಹೈಕೋರ್ಟ್ಗೆ ತಿಳಿಸಿದ್ದಾರೆ. ಈ ಹಿಂದೆ ವಿರೋಧ ಪಕ್ಷದ ವಿರೋಧದ ನಡುವೆಯು ಗೋಹತ್ಯೆ ನಿಷೇಧ ಕಾಯ್ದೆಯು ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು.

ಆದರೆ ವಿಧಾನಪರಿಷತ್‌ನಲ್ಲಿ ಮಂಡನೆ ಆಗಿರಲಿಲ್ಲ. ಇದೇ ವೇಳೆ ಸಭಾಪತಿ ಬದಲಾವಣೆ ಗೊಂದಲಗಳು ಉಂಟಾಗಿದ್ದವು. ಇದೇ ಕಾರಣದಿಂದ ಸುಗ್ರೀವಾಜ್ಞೆಯ ಮೂಲಕ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತು.
ದೇಶದಲ್ಲಿ ಪ್ರಾಣಿಗಳನ್ನು ವಧಿಸುವುದನ್ನು ನಿಷೇಧಿಸುವುದರಿಂದ ಮಾಂಸ ಮಾರಾಟಗಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹಾಗೆಯೇ ಈ ಕಾನೂನಿನಿಂದ ಅವರ ವ್ಯಾಪಾರದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಇದರೊಂದಿಗೆ ನಾಗರಿಕರು ತಮ್ಮ ಆಹಾರದ ಆಯ್ಕೆಯನ್ನು ಕಳೆದುಕೊಳ್ಳಲಿದ್ದಾರೆ.
ಈ ಕುರಿತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ ಫೆಬ್ರವರಿ 17 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications