ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

MBBS ಹೆಚ್ಚುವರಿ ಶುಲ್ಕ ವಾಪಸ್ ನೀಡುವಂತೆ ಆದೇಶ

|
Google Oneindia Kannada News

ಬೆಂಗಳೂರು, ಡಿಸೆಂಬರ್ 21: ಎಂಬಿಬಿಎಸ್ ವಿದ್ಯಾರ್ಥಿಗಳು ನೀಡಿರುವ ಹೆಚ್ಚುವರಿ ಶುಲ್ಕವನ್ನು ವಾಪಸ್ ನೀಡುವಂತೆ ಎರಡು ಕಾಲೇಜುಗಳಿಗೆ ಹೈಕೋರ್ಟ್ ಆದೇಶಿಸಿದೆ.

ಎಂಬಿಬಿಎಸ್ ಕೋರ್ಸ್‌ನ ಪ್ರವೇಶ ಪ್ರಕ್ರಿಯೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಸಂಗ್ರಹಿಸಿದ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗ ಈಸ್ಟ್ ಪಾಯಿಂಟ್ ವೈದ್ಯಕೀಯ ಕಾಲೇಜುಗಳು ಶೇ.6ರಷ್ಟು ಬಡ್ಡಿಯೊಂದಿಗೆ ಹೆಚ್ಚುವರಿ ಶುಲ್ಕ ಮರು ಪಾವತಿಸುವಂತೆ ಆದೇಶಿಸಲಾಗಿದೆ.

Karnataka HC ordered for pay back additional fees in Medical college

ರಾಜ್ಯ ಸರ್ಕಾರದಿಂದ ನೇಮಕವಾಗಿರುವ ನ್ಯಾ. ಬಿ ಮನೋಹರ್ ನೇತೃತ್ವದ ಪ್ರವೇಶ ಮೇಲ್ವಿಚಾರಣಾ ಸಮಿತಿ ಈ ಆದೇಶ ಹೊರಡಿಸಿದ್ದು, ಸಂಬಂಧಪಟ್ಟ ಕಾಲೇಜುಗಳು ಬಡ್ಡಿಯೊಂದಿಗೆ ಹೆಚ್ಚುವರಿ ಶುಲ್ಕ ಮರುಪಾವತಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಹಾಗೂ ರಾಜೀವ ಗಾಂಧಿ ವಿಜ್ಞಾನಿಗಳ ವಿಶ್ವವಿದ್ಯಾಲಯಕ್ಕೆ ಶಿಫಾರಸು ಮಾಡಿದೆ.

ವೈದ್ಯಕೀಯ ಶಿಕ್ಷಣ ಶುಲ್ಕವನ್ನು ಮೂರು ಪಟ್ಟು ಹೆಚ್ಚಿಸಿದ ಸರ್ಕಾರ ವೈದ್ಯಕೀಯ ಶಿಕ್ಷಣ ಶುಲ್ಕವನ್ನು ಮೂರು ಪಟ್ಟು ಹೆಚ್ಚಿಸಿದ ಸರ್ಕಾರ

ರಾಜ್ಯ ಸರ್ಕಾರ ರಚಿಸಿರುವ ಶುಲ್ಕ ನಿಯಂತ್ರಣಾ ಸಮಿತಿ ನಿಗದಿಪಡಿಸಿರುವ ಶುಲ್ಕಕ್ಕಿಂತ ಈ ಕಾಲೇಜುಗಳು ಹೆಚ್ಚುವರಿ ಶುಲ್ಕ ಸಂಗ್ರಹಿಸಿರುವ ಕುರಿತು 80 ದೂರುಗಳು ಪ್ರವೇಶ ಮೇಲ್ವಿಚಾರಣಾ ಸಮಿತಿಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಸಮಿತಿಯು ಹೆಚ್ಚುವರಿ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಬಡ್ಡಿಯೊಂದಿಗೆ ಮರು ಪಾವತಿಸಲು ಕ್ರಮ ಜರುಗಿಸುವಂತೆ ಸರ್ಕಾರ ಹಾಗೂ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಿಗಳ ವಿವಿಗೆ ಸಮಿತಿ ಸೂಚನೆ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹೈಕೋರ್ಟ್‌ನ ಮೆಟ್ಟಿಲೇರಿದ್ದಾರೆ.ನ್ಯಾಯಾಲಯದಲ್ಲಿರುವುದರಿಂದ ನ್ಯಾಯಾಂಗ ನಿಂದನೆಯಾಗಲಿರುವುದರಿಂದ ಯಾವುದೇ ಪ್ರಕ್ರಿಯೆ ನೀಡುವುದಿಲ್ಲ ಎಂದು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ಪ್ರಿನ್ಸಿಪಾಲ್ ಡಾ. ಎಸ್. ನವೀನ್ ಪ್ರತಿಕ್ರಿಯಿಸಿದ್ದಾರೆ.

English summary
One man committee of justice Manohar ordred to all medical college that they should pay back the additional fees taken from students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X