Corruption Case: ಮಾಡಾಳ್ ವಿರೂಪಾಕ್ಷಪ್ಪಗೆ ಕೆಎಸ್‌ಡಿಎಲ್ ಕಚೇರಿ ಪ್ರವೇಶ ರದ್ದು
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕೋರ್ಟ್ ಅಥವಾ ಸರ್ಕಾರದ ಅನುಮತಿ ಇಲ್ಲದೆ ಕೆಎಸ್‌ಡಿಎಲ್ ಕಚೇರಿಗೆ ಪ್ರವೇಶಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಭ್ರಷ್ಟಾಚಾರ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಮಾಡಾಳ್ ವಿರೂಪಾಕ್ಷಪ್ಪ ಅವರು ಕೋರ್ಟ್ ಅಥವಾ ಸರ್ಕಾರದ ಅನುಮತಿ ಇಲ್ಲದೆ ಕೆಎಸ್‌ಡಿಎಲ್ ಕಚೇರಿಗೆ ಪ್ರವೇಶಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಹೇಳಿ ಜಾಮೀನು ನೀಡಿದೆ.
ರಾಜ್ಯ ಲೋಕಾಯುಕ್ತ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಿಂದ ಮುಕ್ತಿ ಕೋರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೋಮವಾರ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದು ಇಂದು(ಮಾರ್ಚ್ 7) ಅದರ ವಿಚಾರಣೆ ನಡೆಸಿತು. ಈ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಅವರು ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪುತ್ರನ ಲಂಚ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಕೆಎಸ್‌ಡಿಎಸ್ ಮಾಜಿ ಚೇರ್ಮನ್ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಜಾಮೀನು ಸಿಕ್ಕಿದೆ. ನ್ಯಾಯಮೂರ್ತಿ ನಡರಾಜನ್ ಅವರು ಮಾಡಳ್ ವಿರೂಪಕ್ಷಪ್ಪಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ.
ಲೋಕಯುಕ್ತ ಪೊಲೀಸರು ದಾಖಲೆ ಸಲ್ಲಿಸುವವರೆಗೆ ಹೈಕೋರ್ಟ್ ಏಕಸದಸ್ಯ ಪೀಠ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ನೀಡಿದೆ. ಜೊತೆಗೆ ಐದು ಲಕ್ಷ ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ನೀಡುವಂತೆ ಕೆ. ನಟರಾಜನ್ ಹೇಳಿದ್ದು, ಆದೇಶ ತಲುಪಿದ 48 ಗಂಟೆಯಲ್ಲಿ ತನಿಖೆಗೆ ಹಾಜರಾಗಬೇಕು ಎಂದು ಖಡಕ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದೆ.

ಶಾಸಕರ ಪರ ಹಿರಿಯ ವಕೀಲ ಕೆ.ಸುಮನ್ ವಾದ ಮಂಡಿಸಿದ್ದು, ಎಫ್‌ಐಆರ್‌ನಲ್ಲಿ ಯಾವುದೇ ಆರೋಪಗಳಿಲ್ಲ, ಪುತ್ರ ಲಂಚ ಪಡೆದಿರುವುದಕ್ಕೆ ಯಾವುದೇ ನೇರ ಸಾಕ್ಷಿ ಇಲ್ಲ ಎಂದು ವಾದಿಸಿದ್ದಾರೆ.
ಭಾರೀ ಕುತೂಹಲವನ್ನು ಹುಟ್ಟುಹಾಕಿದ ಮುಂದಿನ ಚುನಾವಣೆ
ಈ ಮಧ್ಯೆ ದಾವಣಗೆರೆಯ ಚನ್ನಗಿರಿಯಲ್ಲಿ ವಿರೂಪಾಕ್ಷಪ್ಪನವರ ಬೆಂಬಲಿಗರ ಪ್ರತಿಭಟನೆ, ತಮ್ಮ ನಾಯಕನನ್ನು ರಕ್ಷಿಸುವ ಪ್ರಯತ್ನ ಮುಂದುವರಿದಿದೆ. ಲಂಚ, ಭ್ರಷ್ಟಾಚಾರ ಪ್ರಕರಣದಲ್ಲಿ ಮಾಡಾಳ್ ಸಿಲುಕಿರುವುದರಿಂದ ಚನ್ನಗಿರಿಯಲ್ಲಿ ಈ ಬಾರಿ ಬಿಜೆಪಿಯ ಟಿಕೆಟ್ ಕೈತಪ್ಪಿ ಬೇರೆಯವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಲಿದೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ.
ಮಾಡಾಳ್ಗೆ ಟಿಕೆಟ್ ತಪ್ಪುತ್ತೆ ಎನ್ನುವ ಹಿನ್ನೆಲೆಯಲ್ಲಿ ನಿನ್ನೆಯಿಂದ ಕ್ಷೇತ್ರದಲ್ಲಿ ಬೆಂಬಲಿಗರು ಮಹತ್ವದ ಸಭೆ ನಡೆಸುತ್ತಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಮಾಡಾಳ್ ಅಭಿಮಾನಿಗಳೂ ನಿನ್ನೆ ಭಾಗಿಯಾಗಿದ್ದರು. ಚನ್ನಗಿರಿ ಬಿಜೆಪಿ ಕಚೇರಿಯಲ್ಲಿ ನಿನ್ನೆ ನಡೆದಿರುವ ಸಭೆಯಾಗಿದೆ. ಮಾಡಾಳ್ ಪರ ನಿಲ್ಲಬೇಕು ಎಂದು ಕೆಲವು ಬೆಂಬಲಿಗರು ವಾದ ನಡೆಸಿದ್ದಾರೆ.
ಎಲೆಕ್ಷನ್ ಹೊತ್ತಿನಲ್ಲಿ ಸಂಕಷ್ಟಕ್ಕೆ ಮಾಡಾಳ್ ಸಿಲುಕಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಹುಟ್ಟುತ್ತಲೇ ಆಗರ್ಭ ಶ್ರೀಮಂತರು, ಅಡಿಕೆ ಸೇರಿದಂತೆ ಹಲವಾರು ವ್ಯವಹಾರಗಳಿವೆ, ಇದು ಕಾಂಗ್ರೆಸ್ ಷಡ್ಯಂತ್ರ ಎಂದು ಕೆಲವು ಬೆಂಬಲಿಗರ ವಾದ ನಡೆಸಿದ್ದಾರೆ. ಹೀಗಾಗಿ ಮುಂದಿನ ಚುನಾವಣೆ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ.
ಮಾಡಾಳ್ ಪುತ್ರ ಪ್ರಶಾಂತ್ ಟ್ರ್ಯಾಪ್ ಪ್ರಕರಣದಲ್ಲಿ ತನಿಖಾಧಿಕಾರಿಗಳ ಬದಲಾವಣೆಯಾಗಿದೆ. ಟ್ರ್ಯಾಪ್ ತನಿಖಾಧಿಕಾರಿಗಳಿಬ್ಬರ ಬದಲಾವಣೆ ಮಾಡಲಾಗಿದೆ. ಡಿವೈಎಸ್ಪಿ ಪ್ರಮೋದ್ ಕುಮಾರ್, ಇನ್ಸ್ಪೆಕ್ಟರ್ ಕುಮಾರಸ್ವಾಮಿ ಚೇಂಜ್ ಆಗಿದ್ದು, ನೂತನ ತನಿಖಾಧಿಕಾರಿಯಾಗಿ ಡಿವೈಎಸ್ಪಿ ಆಂಥೋಣಿ ಜಾನ್, ಇನ್ಸ್ಪೆಕ್ಟರ್ ಬಾಲಾಜಿಬಾಬು ತನಿಖಾಧಿಕಾರಿಗಳಾಗಿ ನೇಮಕವಾಗಿದ್ದಾರೆ. ತನಿಖಾಧಿಕಾರಿಗಳ ಬದಲಾವಣೆ ಭಾರೀ ಕುತೂಹಲ ಕೆರಳಿಸಿದೆ.












Click it and Unblock the Notifications