ರಾಘವೇಶ್ವರಶ್ರೀಗಳಿಗೆ ಸದ್ಯಕ್ಕೆ ಬಂಧನ ಭೀತಿ ಇಲ್ಲ

ಬೆಂಗಳೂರು, ಸೆ.9: ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳು ಬಂಧನ ಭೀತಿಯಿಂದ ತಾತ್ಕಾಲಿಕ ಮುಕ್ತಿ ಪಡೆದಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಬೆದರಿಕೆ ಪ್ರಕರಣದ ಆರೋಪ ಎದುರಿಸುತ್ತಿರುವ ರಾಘವೇಶ್ವರ ಭಾರತಿಗಳ ತನಿಖೆಗೆ ಹೈಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಆರೋಪ ಸಂಬಂಧ ಪ್ರೇಮಲತಾ ಮತ್ತು ದಿವಾಕರ್‌ ಶಾಸ್ತ್ರಿ ಎಂಬುವರ ಪರವಾಗಿ ಅವರ ಪುತ್ರಿ ಅಂಶುಮತಿ ಎಂಬುವರು ರಾಘವೇಶ್ವರ ಸ್ವಾಮೀಜಿ ವಿರುದ್ಧ ದೂರು ನೀಡಿದ್ದರು. ದೂರು ಸ್ವೀಕರಿಸಿದ್ದ ಗಿರಿನಗರ ಪೊಲೀಸರು ರಾಘವೇಶ್ವರ ಭಾರತಿಗಳ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿತ್ತು.

Karnataka High Court today stayed CID probe against Raghaveshwara Bharati

ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಸ್ವಾಮೀಜಿ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು. ಜೊತೆಗೆ ಈ ಅರ್ಜಿ ಇತ್ಯರ್ಥದವರೆಗೆ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿದ್ದರು. ಸರ್ಕಾರಿ ಅಭಿಯೋಜಕರು ವಾದಿಸಿ, ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಬಾರದು ಎಂದು ನ್ಯಾಯಮೂರ್ತಿಗಳನ್ನು ಕೋರಿದರು. ವಿಚಾರಣೆ ನಡೆಸಿದ ನ್ಯಾ.ಕೆ.ಎನ್‌. ಫ‌ಣೀಂದ್ರ ಅವರಿದ್ದ ಏಕ ಸದಸ್ಯ ಪೀಠ, ತನಿಖೆಗೆ ಒಂದುವಾರಗಳ ಕಾಲ ತಡೆಯಾಜ್ಞೆ ನೀಡಿದೆ.[ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ]

ಒಂದು ವಾರಗಳ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಗಿರಿನಗರ ಪೊಲೀಸರಾಗಲಿ, ಸಿಐಡಿ ತಂಡವಾಗಲಿ ಶ್ರೀಗಳನ್ನು ಬಂಧಿಸುವಂತಿಲ್ಲ ವಿಚಾರಣೆ ಮಾಡುವಂತಿಲ್ಲ ಎಂದು ಏಕಸದಸ್ಯ ಪೀಠ ಸೂಚಿಸಿದೆ.

ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಗಾಯಕಿ ಪ್ರೇಮಲತಾ ಅವರ ಪುತ್ರಿ ಅಂಶುಮತಿ ನೀಡಿದ ದೂರಿನ ಅನ್ವಯ ಈ ಪ್ರಕರಣವನ್ನು ಸೋಮವಾರ ರಾತ್ರಿ ದಾಖಲಿಸಲಾಗಿದೆ. ರಾಮಚಂದ್ರಾಪುರ ಮಠದ ರಾಮಕಥಾ ಕಲಾವಿದೆ ಪ್ರೇಮಲತಾ ಅವರ ಮಗಳು ಅಂಶುಮತಿ ನೀಡಿರುವ ದೂರಿಗೆ ಸಂಬಂಧಿಸಿದಂತೆ ರಾಘವೇಶ್ವರ ಭಾರತಿ ಸ್ವಾಮೀಜಿಗಳಿಗೆ ಬೆಂಗಳೂರಿನ ಗಿರಿನಗರ ಪೋಲೀಸರು ಇತ್ತೀಚೆಗೆ ನೋಟಿಸ್ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+