• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

H1N1 ಪರೀಕ್ಷೆಗೆ ಖಾಸಗಿ ಆಸ್ಪತ್ರೆಯಲ್ಲಿ 2,500ಕ್ಕಿಂತ ಹೆಚ್ಚು ದರ ವಿಧಿಸುವಂತಿಲ್ಲ

|

ಬೆಂಗಳೂರು, ಅಕ್ಟೋಬರ್ 12: ಕರ್ನಾಟಕದಲ್ಲಿ H1N1 ಪ್ರಕರಣಗಳಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಖಾಸಗಿ ಆಸ್ಪತ್ರೆಗಳಿಗೆ ಸೂಚನೆಯೊಂದನ್ನು ನೀಡಿದೆ. ಅದರ ಪ್ರಕಾರ, ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ H1N1 ಪರೀಕ್ಷೆಗೆ 2,500 ರುಪಾಯಿಗಿಂತ ಹೆಚ್ಚು ದರ ವಿಧಿಸುವಂತಿಲ್ಲ ಎಂದು ತಿಳಿಸಿದೆ.

ಸರಕಾರಿ ಆಸ್ಪತ್ರೆಗಳಲ್ಲಿ H1N1 ಪರೀಕ್ಷೆ ಸಂಪೂರ್ಣ ಉಚಿತವಾಗಿದೆ. ಈ ವರ್ಷ 441ರಷ್ಟು H1N1 ಪ್ರಕರಣಗಳು ರಾಜ್ಯದಲ್ಲಿ ಕಂಡುಬಂದಿವೆ. ಆ ಪೈಕಿ 99 ಪ್ರಕರಣ ಬೆಂಗಳೂರಿನಲ್ಲೇ ವರದಿಯಾಗಿವೆ. ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ 4 ಸಾವಿರಕ್ಕಿಂತ ಹೆಚ್ಚಿನ ಮೊತ್ತವನ್ನು H1N1 ಪರೀಕ್ಷೆಗಾಗಿ ವಿಧಿಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಘೋಷಣೆ ಮಾಡಿದೆ.

ಹಂದಿಜ್ವರ ನಿಯಂತ್ರಣಕ್ಕೆ ಎಲ್ಲಾ ಆಸ್ಪತ್ರೆಗಳಲ್ಲಿ ಮಾತ್ರೆ ಲಭ್ಯಹಂದಿಜ್ವರ ನಿಯಂತ್ರಣಕ್ಕೆ ಎಲ್ಲಾ ಆಸ್ಪತ್ರೆಗಳಲ್ಲಿ ಮಾತ್ರೆ ಲಭ್ಯ

ಸಾರ್ವಜನಿಕ ಹಾಗೂ ಖಾಸಗಿ ವೈದ್ಯಕೀಯ ಸಿಬ್ಬಂದಿ ಮೊದಲಿಗೆ ಈ ವೈರಲ್ ಸೋಂಕಿನ ವಿರುದ್ಧದ ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸಲಹೆ ಮಾಡಿದೆ. ಕೆಲವು ಪ್ರಕರಣದಲ್ಲಿ ಆಯಾ ಕಾಲಕ್ಕೆ ಕಾಣಿಸಿಕೊಳ್ಳುವ ವೈರಲ್ ಸೋಂಕುಗಳು ಕಂಡುಬಂದಿದ್ದರೆ, ವೈರಲ್ ಜ್ವರದ ಪ್ರಕರಣಗಳು ಸಹ ವರದಿಯಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಬಿಬಿಎಂಪಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಟಾಮಿ ಫ್ಲೂ ಮಾತ್ರೆಗಳ ಅಗತ್ಯ ಪ್ರಮಾಣದ ದಾಸ್ತಾನು ಇರಿಸಿಕೊಳ್ಳಬೇಕು. H1N1ಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಬಗ್ಗೆ ತಿಳಿಸುವ ಕರಪತ್ರ ಹಂಚಬೇಕು. ಯಾವುದೇ ರೋಗಿಗೆ ಕಾಯಿಲೆಯ ಲಕ್ಷಣಗಳಿದ್ದಲ್ಲಿ, ಅಗತ್ಯ ಬಂದರೆ ಅವರ ಮನೆಗೇ ಹೋಗಿ ಪರೀಕ್ಷೆ ಮಾಡಬೇಕು ಎಂದು ತಿಳಿಸಲಾಗಿದೆ.

ಬೆಂಗಳೂರಲ್ಲಿ ಎಚ್‌1ಎನ್1ನಿಂದ ನಾಲ್ವರ ಸಾವು: ಹೆಚ್ಚಿದ ಆತಂಕಬೆಂಗಳೂರಲ್ಲಿ ಎಚ್‌1ಎನ್1ನಿಂದ ನಾಲ್ವರ ಸಾವು: ಹೆಚ್ಚಿದ ಆತಂಕ

H1N1ನಿಂದಾಗಿ ಕಳೆದ ಆಗಸ್ಟ್ ನಿಂದ ಈಚೆಗೆ ರಾಜೀವ್ ಗಾಂಧಿ ಹೃದ್ರೋಗ ಕೇಂದ್ರದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಆದರೆ ಆರೋಗ್ಯ ಇಲಾಖೆಯಿಂದ H1N1ಗೆ ಯಾವುದೇ ಸಾವು ಸಂಭವಿಸಿದ ಬಗ್ಗೆ ಘೋಷಣೆ ಆಗಿಲ್ಲ. ಈ ಪ್ರಕರಣಗಳಲ್ಲಿ ಸಾವಿಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

English summary
With Karnataka reporting an alarming rise in Influenza A (H1N1) cases, the state health department on Thursday directed private hospitals not to charge more than Rs 2,500 for the throat swab test. The test is done for free at government hospitals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X