ಕರ್ನಾಟಕದಲ್ಲಿ ಕೊರೊನಾ ವೈರಸ್ ನೂತನ ಸಹಾಯವಾಣಿ
ಬೆಂಗಳೂರು, ಮಾರ್ಚ್ 19: ಕರ್ನಾಟಕ ಆರೋಗ್ಯ ಇಲಾಖೆಯು ಕೊರೊನಾ ವೈರಸ್ ನೂತನ ಸಹಾಯವಾಣಿಯನ್ನು ಆರಂಭಿಸಿದೆ.
ಬೆಂಗಳೂರಿನಲ್ಲೂ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
Karnataka Health Dept - 080-46848600.
ರಾಜ್ಯ ಸಹಾಯವಾಣಿ - 104
Helpline - 080-6669200
ರಾಷ್ಟ್ರೀಯ ಸಹಾಯವಾಣಿ - 1075
ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಆಸ್ಪತ್ರೆ, ಮಣಿಪಾಲ ಆಸ್ಪತ್ರೆ, ನಾರಾಯಣ ಆಸ್ಪತ್ರೆ, ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿರಲಿದೆ.

ನೂತನ ಸಹಾಯವಾಣಿ ಕುರಿತು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಕೊರೊನಾ ಬಗ್ಗೆ ಯಾವುದೇ ಮಾಹಿತಿ ಬೇಕಿದ್ದರೂ 080-46848600ಕ್ಕೆ ಕರೆ ಮಾಡಿ ಅಥವಾ ರಾಷ್ಟ್ರೀಯ ಸಹಾಯವಾಣಿ 1075 ರಾಜ್ಯ ಸಹಾಯವಾಣಿ 104 ಕ್ಕೆ ಕರೆ ಮಾಡಿ ಮಾಹಿತಿ ಪಡಯಬಹುದಾಗಿದೆ ಎಂದು ತಿಳಿಸಿದ್ದಾರೆ.
Dear citizens, it has rained in many parts of #Bengaluru today. For any complaints, pls call the 24/7 Control Room. For #COVID19 related queries, call state helpline on 104 or the other numbers listed.#BBMP #HelpUsToHelpYou #LetsBreakTheChain #CoronavirusOutbreakindia pic.twitter.com/Lj7qb877HA
— B.H.Anil Kumar,IAS (@BBMPCOMM) March 20, 2020
ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಮತ್ತೆ ಮೂವರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಮಾರ್ಚ್ 6 ರಂದು ಬೆಂಗಳೂರು ಮೂಲದ 56 ವರ್ಷದ ವ್ಯಕ್ತಿಯೊಬ್ಬರು ಅಮೆರಿಕಾದಿಂದ ವಾಪಸ್ ಆಗಿದ್ದರು. ಇವರಲ್ಲಿ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. ಸ್ಪೇನ್‌ನಿಂದ ವಾಪಸ್ ಆದ ಇನ್ನೋರ್ವ 25 ವರ್ಷದ ಮಹಿಳೆಗೂ ಸೋಂಕು ಇರುವುದು ದೃಢಪಟ್ಟಿದೆ. ಇಬ್ಬರಿಗೂ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಟ್ಟೀಟ್ ಮಾಡಿದ್ದಾರೆ.












Click it and Unblock the Notifications