ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

RSS ರುದ್ರೇಶ್ ಹತ್ಯೆ ಪ್ರಕರಣ: ಎನ್ಐಎ ತನಿಖೆಗೆ ಹೈಕೋರ್ಟ್ ಬ್ರೇಕ್

ಆರ್‌ಎಸ್‌ಎಸ್‌ ಮುಖಂಡ ರುದ್ರೇಶ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ(ಎನ್‌ಐಎ)ತನಿಖೆಯನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ರದ್ದುಗೊಳಿಸಿದೆ.

|
Google Oneindia Kannada News

ಬೆಂಗಳೂರು, ಮಾರ್ಚ್. 21 : ಶಿವಾಜಿನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್‌) ಮುಖಂಡ ರುದ್ರೇಶ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ತನಿಖೆಯನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ರದ್ದುಗೊಳಿಸಿದೆ.

ತಮ್ಮ ವಿರುದ್ಧದ ಎನ್ಐಎ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಇರ್ಫಾನ್ ಪಾಷಾ ಸೇರಿ ಇತರ ಐವರು ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠ, ತಾಂತ್ರಿಕ ಕಾರಣಗಳಿಂದಾಗಿ ಎನ್ ಐಎ ತನಿಖೆಯನ್ನು ರದ್ದುಗೊಳಿಸುತ್ತಿರುವುದಾಗಿ ಹೇಳಿದೆ. [ರುದ್ರೇಶ್ ಹತ್ಯೆ ಪ್ರಕರಣ, ತನಿಖೆ ಆರಂಭಿಸಿದ ಎನ್ಐಎ]

Karnataka high court cancels nia probe into rss activist Rudresh’s murder case

ಈ ಪ್ರಕರಣಕ್ಕೆ ಮಾರ್ಚ್ 10ರಂದು ಸಂಬಂಧಿಸಿದಂತೆ ಅಂತಿಮವಾಗಿ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ಮೈಕಲ್‌ ಡಿ. ಕುನ್ಹಾ ಅವರು ತೀರ್ಪನ್ನು ಮಾರ್ಚ್ 21ಕ್ಕೆ ಕಾಯ್ದಿರಿಸಿದ್ದರು.

2016ರ ಅಕ್ಟೋಬರ್‌ನಲ್ಲಿ ಆರೆಸ್ಸೆಸ್ ಪಥ ಸಂಚಲನ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ರುದ್ರೇಶ್‌ ಅವರನ್ನು ಶಿವಾಜಿನಗರದ ಬಳಿ ಕೊಲೆ ಮಾಡಲಾಗಿತ್ತು.

ಈ ಪ್ರಕರಣದ ಆರೋಪಿಗಳಿಗೂ ಇಂಡಿಯನ್ ಮುಜಾಹಿದೀನ್ ಉಗ್ರರಿಗೂ ಸಂಪರ್ಕ ಇರುವ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್ಐಎ ಸ್ವಯಂ ಪ್ರೇರಿತವಾಗಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿತ್ತು. ಆದರೆ, ಇದಕ್ಕೆ ಆರೋಪಿಗಳು ವಿರೋಧ ವ್ಯಕ್ತಪಡಿಸಿ ಕೋರ್ಟ್ ಮೆಟ್ಟಿಲೇರಿದ್ದರು.

ಮೊದಲಿಗೆ ಪ್ರಕರಣದ ತನಿಖೆ ನಡೆಸಿದ್ದ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಐವರನ್ನು ಬಂಧಿಸಿದ್ದರು. ಆರೋಪಿಗಳೆಲ್ಲರೂ ಪಾಪುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರು ಎಂದು ವಿಚಾರಣೆ ವೇಳೆ ತಿಳಿದು ಬಂದಿತ್ತು.

English summary
The Karnataka High Court cancels National Investigation Agency (NIA) probe into Rashtriya Swayamsevak Sangh worker Rudresh’s murder case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X