ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನ್‌ಲೈನ್‌ ಜೂಜಾಟ ಪ್ರಶ್ನಿಸಿದ್ದ ಮನವಿ ವಜಾ ಮಾಡಿದ ಕರ್ನಾಟಕ ಹೈಕೋರ್ಟ್‌

|
Google Oneindia Kannada News

ಬೆಂಗಳೂರು, ಅಕ್ಟೋಬರ್ 27: ರಾಜ್ಯದಲ್ಲಿ ಎಲ್ಲಾ ಬಗೆಯ ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ನಿಷೇಧಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಕಾಯಿದೆಗೆ ತಿದ್ದುಪಡಿ ತರಲಾಗಿದೆ ಎಂದು ಮಂಗಳವಾರ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಆನ್‌ಲೈನ್ ಜೂಜಿನಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಅವುಗಳನ್ನು ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ದಾವಣಗೆರೆಯ ಡಿ.ಆರ್. ಶಾರದಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಸರ್ಕಾರದ ಪರ ವಕೀಲರು "ರಾಜ್ಯದಲ್ಲಿ ಎಲ್ಲಾ ರೀತಿಯ ಆನ್‌ಲೈನ್ ಗ್ಯಾಂಬ್ಲಿಂಗ್ ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಲುವಾಗಿ ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯಿದೆ- 2021 ಜಾರಿಗೆ ತರಲಾಗಿದೆ. ಅರ್ಜಿದಾರರ ಮನವಿ ಈಡೇರಿರುವುದರಿಂದ ಅರ್ಜಿಯು ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ," ಎಂದು ಪೀಠಕ್ಕೆ ತಿಳಿಸಿದರು.

Karnataka High Court Dismisses Plea Challenging Online Gambling


ಅರ್ಜಿದಾರರ ಪರ ವಕೀಲ ಶ್ರೀಧರ ಪ್ರಭು, "ಕರ್ನಾಟಕ ಪೊಲೀಸ್ ಕಾಯಿದೆಗೆ ಸರ್ಕಾರ ತಿದ್ದುಪಡಿ ತಂದಿದೆಯಾದರೂ, ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ನಿಷೇಧಕ್ಕೆ ಸೂಕ್ತ ವ್ಯವಸ್ಥೆ ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಬೇಕಿದೆ. ಅದಾಗ್ಯೂ ನಮ್ಮ ಮನವಿಯನ್ನು ಸರ್ಕಾರ ಪರಿಗಣಿಸಿರುವ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣಾ ಮಾನ್ಯತೆ ಕಳೆದುಕೊಂಡಿದ್ದು, ಅದನ್ನು ಇತ್ಯರ್ಥಪಡಿಸಬಹುದು," ಎಂದರು.

ಈಗಾಗಲೇ ಸರ್ಕಾರ ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸಿದೆ. ಅರ್ಜಿದಾರರ ಮನವಿ ಈಡೇರಿರುವ ಕಾರಣ ಅರ್ಜಿ ವಿಚಾರಣಾ ಮಾನ್ಯತೆ ಕಳೆದುಕೊಂಡಿದ್ದು, ಅರ್ಜಿದಾರರೂ ಅದನ್ನು ಒಪ್ಪಿಕೊಂಡಿದ್ದಾರೆ. ವಿಚಾರಣಾ ಮಾನ್ಯತೆ ಕಳೆದುಕೊಂಡ ಅರ್ಜಿಯನ್ನು ಇತ್ಯರ್ಥಪಡಿಸಲು ಸಾಧ್ಯವಿಲ್ಲ. ಅದನ್ನು ವಜಾಗಳಿಸಬೇಕಾಗುತ್ತದೆ ಎಂದು ತಿಳಿಸಿದ ನ್ಯಾಯಾಯಲವು ಅರ್ಜಿ ವಜಾಗೊಳಿಸಿ ಆದೇಶಿಸಿತು.

ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಕೆ
ಕರ್ನಾಟದಲ್ಲಿ ಆನ್‌ಲೈನ್ ಗೇಮಿಂಗ್ ಬ್ಯಾನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಗೇಮಿಂಗ್ ಕಂಪನಿಗಳು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿವೆ.

ಕ್ರಿಮಿನಲ್‌ ಕೇಸ್ ಭೀತಿ ಎದುರಿಸುತ್ತಿದ್ದ ಆನ್‌ಲೈನ್ ಗೇಮಿಂಗ್ ಕಂಪನಿಗಳಿಂದ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೋರಿವೆ. ಈ ಬಗ್ಗೆ ಹೈಕೋರ್ಟ್‌ಗೆ ಎಜಿ ಪ್ರಭುಲಿಂಗ ನಾವಡಗಿ ಮನವಿ ಸಲ್ಲಿಸಿದ್ದು, ಮಧ್ಯಂತರ ಆದೇಶ ಸಂಬಂಧ ಅ.27ಕ್ಕೆ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ.

ರಾಜ್ಯದಲ್ಲಿ ಎಲ್ಲಾ ಬಗೆಯ ಆನ್‌ಲೈನ್ ಗೇಮಿಂಗ್, ಗ್ಯಾಂಬ್ಲಿಂಗ್ ನಿಷೇಧಿಸುವ ರಾಜ್ಯ ಸರ್ಕಾರ ಆದೇಶವನ್ನು ಇದೀಗ ಕಂಪೆನಿಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಆಲ್‌ ಇಂಡಿಯಾ ಗೇಮಿಂಗ್ ಫೆಡರೇಷನ್, ಗ್ಯಾಲಕ್ಟಸ್ ಪೊನ್ ವೇರ್ ಟೆಕ್ನಾಲಜೀಸ್ ಸೇರಿದಂತೆ ಹಲವು ಕಂಪೆನಿಗಳು ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರದ ನಿರ್ಧಾರ ಸಂವಿಧಾನ ಬಾಹಿರ ಎಂದು ವಾದಿಸಿವೆ.

ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಆದೇಶ ಹೊರಡಿಸಿದ್ದು, ಇದರಿಂದ ತುಂಬಾ ನಷ್ಟವಾಗಿದೆ. ಅನಗತ್ಯವಾಗಿ ಪೊಲೀಸ್ ಕೇಸ್ ಎದುರಿಸುವಂತಾಗಿದೆ.‌ ತನಿಖೆಯ ನೆಪದಲ್ಲಿ ಪೊಲೀಸರಿಂದ ತೊಂದರೆಯಾಗಬಾರದು.‌ ಹೀಗಾಗಿ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕೆಂದೂ ಮನವಿ ಮಾಡಲಾಗಿದೆ.

ರಾಜ್ಯ ಸರ್ಕಾರಕ್ಕೆ ಆನ್‌ಲೈನ್ ಗೇಮಿಂಗ್ ಮತ್ತು ಆನ್‌ಲೈನ್ ಗ್ಯಾಂಬ್ಲಿಂಗ್ ಅನ್ನು ನಿಷೇಧಿಸುವ ಅಧಿಕಾರ ಇಲ್ಲ. ಹೀಗಾಗಿ ಸರ್ಕಾರದ ಆದೇಶ ರದ್ದುಪಡಿಸುವಂತೆ ಕಂಪನಿಗಳ ಪರ ಹಿರಿಯ ವಕೀಲ ಅರವಿಂದ್ ದಾತಾರ್, ಸಜನ್ ಪೂವಯ್ಯ, ಡಿಎಲ್‌ಎನ್ ರಾವ್ ಸೇರಿ ಹಲವರು ವಾದ ಮಂಡಿಸಿದ್ದಾರೆ.

ಇದಕ್ಕೆ ರಾಜ್ಯ ಸರ್ಕಾರದ ಪರ ಅಟಾರ್ನಿ ಜನರಲ್ ಪ್ರಭುಲಿಂಗ ನಾವಡಗಿ ಆಕ್ಷೇಪ ಎತ್ತಿದ್ದು, ರಿಟ್ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ವಿವರವಾದ ವಿಚಾರಣೆ ಅಗತ್ಯವಿರುವುದರಿಂದ ಹೈಕೋರ್ಟ್ ವಿಚಾರಣೆಯನ್ನು ಅ.27ಕ್ಕೆ ಮುಂದೂಡಿದೆ.

ಕಂಪೆನಿಗಳು ರಾಜ್ಯ ಸರ್ಕಾರದ ಆನ್‌ಲೈನ್ ಗೇಮಿಂಗ್ ನಿರ್ಬಂಧ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆಯೂ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗಳ ಬಗ್ಗೆಯೂ ಹೈಕೋರ್ಟ್ ಅ.27 ರಂದು ತೀರ್ಮಾನಿಸಲಿದೆ.

ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ನಿಷೇಧಿಸಿದ ಸರ್ಕಾರ
ಆನ್‌ಲೈನ್ ಜೂಜುಕೋರರಿಗೆ ಕರ್ನಾಟಕ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ರಾಜ್ಯದಲ್ಲಿ ಆನ್‌ಲೈನ್ ಗ್ಯಾಂಬ್ಲಿಂಗ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಈ ಕುರಿತು ಕಳೆದ ವಿಧಾನಸಭೆ ಅಧಿವೇಶನದಲ್ಲಿ ಕಾಯ್ದೆ ರೂಪಿಸಿದೆ.

ಡ್ರೀಮ್ ಇಲೆವೆನ್, ಪೇ ಟೀಂ ಫಸ್ಟ್, ಗೇಮ್​ಜಿ ಆ್ಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಅ್ಯಪ್​ಗಳನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆನ್‌ಲೈನ್ ಗೇಮ್‌, ಆನ್‌ಲೈನ್ ಜೂಜು, ಆನ್‌ಲೈನ್‌ ಬೆಟ್ಟಿಂಗ್‌ಗೆ ನಿಷೇಧ ಹೇರಿತ್ತು. ಇದೀಗ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶುಕ್ರವಾರದಿಂದ ಆನ್‌ಲೈನ್ ಜೂಜು ನಿಷೇಧದ ಆದೇಶ ಅಧಿಕೃತವಾಗಿ ಹೊರಬಿದ್ದಿದೆ.

Recommended Video

ಒಂದು ವೇಳೆ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸೋತ್ರೆ ಅಷ್ಟೆ ಕಥೆ!! | Oneindia Kannada

English summary
The government has already banned online Gambling The Karnataka High Court has said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X