DK Shivakumar CBI Case: ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ವಿಸ್ತರಿಸಿ ಹೈಕೋರ್ಟ್ ಆದೇಶ
DK Shivakumar CBI Case: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಹೈಕೋರ್ಟ್ ಆದೇಶದಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನಿರಾಳವಾದಂತಾಗಿದೆ. ಈ ಪ್ರಕಣರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹೈಕೋರ್ಟ್ ಸಿಬಿಐ ತನಿಖೆಗೆ ಮೇ ಅಂತ್ಯದವರೆಗೂ ತಡೆಯಾಜ್ಞೆ ನೀಡಿತ್ತು. ಈಗ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿರುವುದು ಡಿಕೆ ಶಿವಕುಮಾರ್ ಅವರಿಗೆ ಆರಂಭಿಕ ಗೆಲುವು ಸಿಕ್ಕಂತಾಗಿದೆ.

ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ ಅಧಿಕಾರಿಗಳೂ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದರು. ತಮ್ಮ ಮೇಲಿನ ಪ್ರಕರಣವನ್ನು ರದ್ದು ಮಾಡುವಂತೆ ಡಿಕೆ ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಚುನಾವಣೆ ಸಂದರ್ಭದಲ್ಲಿ ಡಿಕೆ ಹೈಕೋರ್ಟ್ ಸಿಬಿಐ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈಗ ಆದೇಶವನ್ನು ವಿಸ್ತರಣೆ ಮಾಡಿದೆ.












Click it and Unblock the Notifications