ನಾಳೆ ಯಡಿಯೂರಪ್ಪ ರಾಜಕೀಯ ಭವಿಷ್ಯ ನಿರ್ಧಾರ?

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯ ಆಗಸ್ಟ್ 30ರಂದು ನಿರ್ಧಾರ. ಅವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆ ನಡೆಸಲಿರುವ ಹೈಕೋರ್ಟ್. ಅಂದು ಹೊರಬೀಳುವ ತೀರ್ಪಿನ ಮೇಲೆ ಯಡಿಯೂರಪ್ಪ ಅವರ ಮುಂದಿನ ನಡೆ ಅವಲಂಬಿತ.

Recommended Video

      B S Yeddyurappa gets temporary relief from De notification case

      ಬೆಂಗಳೂರು, ಆಗಸ್ಟ್ 29: ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕೈಗೊಂಡಿರುವ ತನಿಖೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಆಗಸ್ಟ್ 30ರಂದು ಮತ್ತೆ ವಿಚಾರಣೆಗೆ ಬರಲಿದೆ.

      ಇದೇ ತಿಂಗಳ 17ರಂದು ಎಸಿಬಿಯು ಯಡಿಯೂರಪ್ಪ ವಿರುದ್ಧ ಮೂರು ಎಫ್ಐಆರ್ ಗಳನ್ನು ದಾಖಲಿಸಿತ್ತು. ಇದರ ವಿರುದ್ಧ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಹೀಗಾಗಿ, ಆಗಸ್ಟ್ 23ರಂದು ಎಸಿಬಿಗೆ ನಿರ್ದೇಶನ ನೀಡಿದ್ದ ಹೈಕೋರ್ಟ್, ಯಡಿಯೂರಪ್ಪ ವಿರುದ್ಧದ ತನಿಖೆಗೆ ಆಗಸ್ಟ್ 28ರವರೆಗೆ ತಾತ್ಕಾಲಿಕ ತಡೆ ನೀಡಿತ್ತು.

      Karnataka High Court extends stay on action against B S Yeddyurappa

      ಆದರೆ, ಆಗಸ್ಟ್ 28ರಂದು ಮತ್ತೆ ಇದರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠ, ವಿಚಾರಣೆಯನ್ನು ಆಗಸ್ಟ್ 30ಕ್ಕೆ ಮುಂದೂಡಿದೆ. ಹೀಗಾಗಿ, ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯ ಆಗಸ್ಟ್ 30ರಂದು ಗೊತ್ತಾಗಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+