Siddaramaiah: ಸಿಎಂ ಸಿದ್ದರಾಮಯ್ಯಗೆ 10,000 ದಂಡ ವಿಧಿಸಿದ ಹೈಕೋರ್ಟ್!

ಬೆಂಗಳೂರು, ಫೆಬ್ರವರಿ 06: 2022 ರ ಏಪ್ರಿಲ್‌ನಲ್ಲಿ ನಡೆದ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ರಾಜ್ಯ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಸಹೋದ್ಯೋಗಿಗಳಾದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಪ್ರತಿನಿಧಿಗಳ ನ್ಯಾಯಾಲಯ 10,000 ದಂಡ ವಿಧಿಸಿದೆ.

 Karnataka High Court fines CM Siddaramaiah rs 10,000 over illegal protest

ವಿಚಾರಣೆ ಹಾಜರಾಗಲು ಸಿದ್ದರಾಮಯ್ಯಗೆ ಸಮನ್ಸ್

ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮಾರ್ಚ್ 11 ರಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಆರ್ ಎಸ್ ಸುರ್ಜೇವಾಲಾ ಮತ್ತು ಮಾರ್ಚ್ 15 ರಂದು ಎಂ ಬಿ ಪಾಟೀಲ್ ಅವರು ನ್ಯಾಯಾಲಯಕ್ಕೆ ಹಾಜರಗಬೇಕು ಎಂದು ಸಮನ್ಸ್ ನೀಡಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪನವರ ಕೈವಾಡವಿದೆ ಎಂದು ಆರೋಪಿಸಿದ್ದ ಅಂದಿನ ವಿರೋಧ ಪಕ್ಷದ ನಾಯಕರು, ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು. ಇದಲ್ಲದೇ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದತ್ತ ಅಕ್ರಮವಾಗಿ ಮೆರವಣಿಗೆ ನಡೆಸಿದ್ದರು ಎಂದು ಆರೋಪಗಳಿವೆ.

 Karnataka High Court fines CM Siddaramaiah rs 10,000 over illegal protest

ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ರದ್ದುಪಡಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಜೊತೆಗೆ ವಿಚಾರಣೆಗೆ ಹಾಜರಾಗುವಂತೆ ಎಲ್ಲರಿಗೂ ಸಮನ್ಸ್ ಜಾರಿ ಮಾಡಿದೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ

2022ರ ಏಪ್ರಿಲ್‌ನಲ್ಲಿ ಉಡುಪಿಯ ಲಾಡ್ಜ್‌ವೊಂದರಲ್ಲಿ ಸಿವಿಲ್‌ ವರ್ಕ್‌ ಗುತ್ತಿಗೆದಾರ ಸಂತೋಷ್ ಪಾಟೀಲ್ ಶವವಾಗಿ ಪತ್ತೆಯಾಗಿದ್ದರು. ಈಶ್ವರಪ್ಪ ಅವರು ಪ್ರತಿ ಗುತ್ತಿಗೆಯಲ್ಲೂ ಶೇ.40ರಷ್ಟು ಕಮಿಷನ್‌ ಕೇಳುತ್ತಿದ್ದಾರೆ ಎಂದು ಆರೋಪಿಸಿ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಈ ಸಮಯದಲ್ಲಿ ಈಶ್ವರಪ್ಪ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಉಸ್ತುವಾರಿ ವಹಿಸಿದ್ದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ನಂತರ ರಾಜೀನಾಮೆ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+