ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಬೆಂಗಳೂರು ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್‌ ಗ್ರೀನ್ ಸಿಗ್ನಲ್

|
Google Oneindia Kannada News

ಬೆಂಗಳೂರು, ಆಗಸ್ಟ್ 26: ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಸಂಬಂಧ ಅರ್ಜಿಗಳನ್ನು ಪರಿಶೀಲಿಸಿ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಆಗಸ್ಟ್ 31ರಿಂದ ನಿರ್ದಿಷ್ಟ ಅವಧಿಗೆ ನ್ಯಾಯಾಲಯ ಅನುಮತಿ ನೀಡಿದೆ.

ಈದ್ಗಾ ಮೈದಾನ ಅಥವಾ ಚಾಮರಾಜಪೇಟೆ ಆಟದ ಮೈದಾನ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್‌ ಅನ್ನು ನೀಡಿದೆ. ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಿರ್ಧಿಷ್ಟ ಅವಧಿಗೆ ಅನುಮತಿಯನ್ನು ನೀಡಬಹುದು ಎಂದು ಹೈಕೋರ್ಟ್ ಅನುಮತಿ ನೀಡಬಹುದು ಎಂದು ಹೇಳಿದೆ.

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಯಥಾಸ್ಥಿತಿಗೆ ಹೈಕೋರ್ಟ್ ಆದೇಶಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಯಥಾಸ್ಥಿತಿಗೆ ಹೈಕೋರ್ಟ್ ಆದೇಶ

ಚಾಮರಾಜಪೇಟೆ ಆಟದ ಮೈದಾನ ಕಂದಾಯ ಇಲಾಖೆಗೆ ಸೇರಿದ್ದ ಎಂದು ಬಿಬಿಎಂಪಿ ತಿಳಿಸಿದ ಮೇಲೆ ಮೈದಾನವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಸುಪರ್ಧಿಗೆ ಪಡೆದಿತ್ತು. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಕಂದಾಯ ಇಲಾಲೆಯ ಅಧಿಕಾರಿಗಳ ಭಾರಿ ಭದ್ರತೆಯಲ್ಲಿ ನಡೆಸಿತ್ತು.

Karnataka High Court Gives Nod to Celebrate Ganesh Chaturthi At Chamrajpet Idgah Maidan

ಗಣೇಶೋತ್ಸವಕ್ಕೆ ಅನುಮತಿಯನ್ನು ನೀಡುವ ವಿಚಾರದಲ್ಲಿ ಸಾಕಷ್ಟು ಗೊಂದಲ ಉಂಟಾಗಿತ್ತು. ಹೈಕೋರ್ಟ್‌ ಆಗಸ್ಟ್ 25 ರಂದು ಮಹತ್ವದ ಆದೇಶವನ್ನು ನೀಡಿತ್ತು. ಗಣೇಶೋತ್ಸವಕ್ಕೆ ಅನುಮತಿಯನ್ನು ನಿರಾಕರಿಸಿತ್ತು. ಆಟದ ಮೈದಾನವಾಗಿಯೇ ಉಳಿಯಬೇಕು. ಮುಸ್ಲಿಮರು ವರ್ಷದಲ್ಲಿ ಎರಡು ಸಲ ಪ್ರಾರ್ಥನೆ ಸಲ್ಲಿಸಬಹುದು ಎಂದು ತಿಳಿಸಿತ್ತು.

Karnataka High Court Gives Nod to Celebrate Ganesh Chaturthi At Chamrajpet Idgah Maidan

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸಿತ್ತು. ಇಂದೇ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸುವುದಾಗಿ ಸಲ್ಲಿಸಿದ್ದ ಹೈಕೋರ್ಟ್‌ ಅರ್ಜಿ ವಿಚಾರಣೆಯನ್ನು ನಡೆಸಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ರಾಜ್ಯ ಸರ್ಕಾರ ಮತ್ತು ಹಿಂದೂ ಪರ ಸಂಘಟನೆಗಳ ಹೋರಾಟಕ್ಕೆ ಪ್ರಾಥಮಿಕ ಗೆಲುವು ಸಿಕ್ಕಂತಾಗಿದೆ.

ಈದ್ಗಾ ಮೈದಾನ ಬಗ್ಗೆ ಹೈಕೋರ್ಟ್ ಆದೇಶ, ಬೊಮ್ಮಾಯಿ ಪ್ರತಿಕ್ರಿಯೆ ಏನು? ಈದ್ಗಾ ಮೈದಾನ ಬಗ್ಗೆ ಹೈಕೋರ್ಟ್ ಆದೇಶ, ಬೊಮ್ಮಾಯಿ ಪ್ರತಿಕ್ರಿಯೆ ಏನು?

ಹೈಕೋರ್ಟ್‌ ಮೈದಾನದಲ್ಲಿ ಗಣೇಶೋತ್ಸವ ಸೇರಿದಂತೆ ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಅರ್ಜಿಯನ್ನು ಪರಿಶೀಲಿಸಿ ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು. ಆ.31 ರಿಂದ ನಿರ್ದಿಷ್ಟ ಅವಧಿಗೆ ಅನುಮತಿ ಎಂದು ಹೇಳಿದೆ.

English summary
Ganesh Chaturthi at Idgah Maidan: Karnataka High Court ordered the state government to review the applications and grant permission to celebrate Ganeshotsav at Chamarajpet Eidgah Maidan. The court granted permission for a certain period from August 31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X