• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶರಾಗಿ 7 ಮಂದಿ ಪ್ರಮಾಣ ವಚನ

|

ಬೆಂಗಳೂರು, ನವೆಂಬರ್ 3: ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಏಳು ಮಂದಿ ಹಾಗೂ ಹೆಚ್ಚುವರಿ ನ್ಯಾಯಾಧೀಶರಾಗಿ ಐದು ಮಂದಿ ರಾಜಭವನದಲ್ಲಿ ರಾಜ್ಯಪಾಲರೆದುರು ಪ್ರಮಾಣವಚನ ಸ್ವೀಕಾರ ಮಾಡಿದರು.

ದೀಪಾವಳಿ ವಿಶೇಷ ಪುರವಣಿ

ಕರ್ನಾಟಕ ಹೈಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಕೆಂಪಯ್ಯ ಸೋಮಶೇಖರ್, ಕೊಟ್ರವ್ವ ಸೋಮಪ್ಪ ಮುದುಗಲ್, ಶ್ರೀನಿವಾಸ್ ಹರೀಶ್ ಕುಮಾರ್, ಜಾನ್ ಮೈಕೇಲ್ ಕುನ್ನಾ, ಬಸವರಾಜ್ ಅಂದನಗೌಡ ಪಾಟೀಲ್, ನಂಗಲಿ ಕೃಷ್ಣರಾವ್ ಸುಧೀಂದ್ರ ರಾವ್ ಮತ್ತು ಹೊಸೂರ್ ಭುಜಂಗರಾಯ ಪ್ರಭಾಕರ್ ಶಾಸ್ತ್ರಿ ಅವರನ್ನು ಒಳಗೊಂಡಂತೆ ಏಳು ಮಂದಿ ಹೈಕೋರ್ಟ್ ನ್ಯಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಶೋಕ್ ಗೋಲಪ್ಪ ನಿಜಗಣ್ಣನವರ್, ಹೇತೂರ್ ಪುಟ್ಟಸ್ವಾಮಿ ಸಂದೇಶ್, ಕೃಷ್ಣನ್ ನಟರಾಜನ್, ಪ್ರಹ್ಲಾದರಾವ್ ಗೋವಿಂದರಾವ್ ಮುತಾಲಿಕ್ ಪಾಟೀಲ್ ಮತ್ತು ಅಪ್ಪಾ ಸಾಹೇಬ್ ಶಾಂತಪ್ಪ ಬೆಳ್ಳುಂಕೆ ಅವರು ಸೇರಿದಂತೆ ಒಟ್ಟು ಐದು ಮಂದಿ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸುಪ್ರೀಂ, ಹೈಕೋರ್ಟ್‌ ಜಡ್ಜ್‌ಗಳ ನಿವೃತ್ತಿ ವಯೋಮಿತಿ ಹೆಚ್ಚಳ ಸಾಧ್ಯತೆ

ರಾಜ್ಯಪಾಲ ವಜುಭಾಯಿ ವಾಲ ಅವರು ಪದವಿ ಅಧಿಕಾರ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಸಚಿವ ಕೃಷ್ಣ ಬೈರೇಗೌಡ, ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ಹಾಗೂ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ ಭಾಸ್ಕರ್ ಪಾಲ್ಗೊಂಡಿದ್ದರು.

English summary
The President of India has appointed 7 judges and five additional judges to the Karnataka High Court They have taken oath at Rajbhavan on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X