ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ, ಹೈಕೋರ್ಟ್ ಒಪ್ಪಿಗೆ
ಬೆಂಗಳೂರು, ಅಕ್ಟೋಬರ್ 31: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಕರ್ನಾಟಕದ ಹೈಕೋರ್ಟ್ ಒಪ್ಪಿಗೆ ನೀಡಿದೆ. ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಪಿಐಎಲ್ ಸಲ್ಲಿಕೆಯಾಗಿತ್ತು.
ಮಂಗಳವಾರ ಕರ್ನಾಟಕ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಿದೆ. ನವೆಂಬರ್ 1 ರಿಂದ 3 ರ ತನಕ ಕನ್ನಡ ರಾಜ್ಯೋತ್ಸವ, ಸಾಂಸ್ಕೃತಿ ಕಾರ್ಯಕ್ರಮ ನಡೆಸಬಹುದು. ಆದರೆ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂಥ ಕಾರ್ಯಕ್ರಮ ನಡೆಸಬಾರದು ಎಂದು ಸೂಚನೆ ನೀಡಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಿದೆ. ಈ ಕುರಿತು ಬೆಂಗಳೂರು ನಗರ ಜಿಲ್ಲಾಡಳಿತ ಹಾಗೂ ಇನ್ನಿತರ ಪ್ರಾಧಿಕಾರಗಳಿಗೆ ಕೋರ್ಟ್ ಸೂಚನೆ ನೀಡಿದೆ.
ರಾಜ್ಯದ ಧ್ವಜ ಮಾತ್ರ ಹಾರಾಟ; ಚಾಮರಾಜಪೇಟೆ ನಾಗರಿಕ ಒಕ್ಕೂಟ ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ರಾಜ್ಯದ ಧ್ವಜ ಮಾತ್ರ ಹಾರಿಸಲಾಗುತ್ತದೆ ಎಂದು ಅರ್ಜಿದಾರರು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದ್ದರಿಂದ ಕನ್ನಡ ರಾಜ್ಯೋತ್ಸವ ಆಚರಣೆ ಅನುಮತಿ ನೀಡಬೇಕು ಎಂದು ಮನವಿ ಅರ್ಜಿಯಲ್ಲಿ ಮನವಿ ಮಾಡಿತ್ತು.
ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಬೇಕು ಎಂದು ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿತ್ತು. ಆದರೆ ಅವರು ಅದನ್ನು ತಿರಸ್ಕಾರ ಮಾಡಿದ್ದರು. ಆದ್ದರಿಂದ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು.
ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಬೇಕು ಎಂದು ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿತ್ತು. ಆದರೆ ಅವರು ಅದನ್ನು ತಿರಸ್ಕಾರ ಮಾಡಿದ್ದರು. ಆದ್ದರಿಂದ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ ಮಾಡಲಾಗಿತ್ತು.
ಈದ್ಗಾ ಮೈದಾನದ ಮಾಲೀಕತ್ವದ ವಿವಾದದ ಬಳಿಕ ಈದ್ಗಾ ಮೈದಾನ ಯಾರಿಗೆ ಸೇರಿದ್ದು ಎಂಬ ಚರ್ಚೆ ಆರಂಭವಾಗಿತ್ತು. ಆಗಲೇ ಅಲ್ಲಿ ಸ್ವಾತಂತ್ರ ದಿನಾಚರಣೆ ಮಾಡಲು ಅನುಮತಿ ಕೇಳಿ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಹಿಂದೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡಲು ಸಹ ಅನುಮತಿ ನೀಡಲಾಗಿತ್ತು. ಸ್ವಾತಂತ್ರ್ಯ ದಿನಾಚರಣೆಯಂದು ಸಹ ಮೈದಾನದಲ್ಲಿ ಧ್ವಜಾರೋಹಣ ಮಾಡಲಾಗಿತ್ತು.
ಎಲ್ಲ ಧರ್ಮದವರಿಂದ ಆಚರಣೆ: ಕರ್ನಾಟಕ ರಾಜ್ಯ ರಚನೆ ಮತ್ತು ಕರ್ನಾಟಕ ರಾಜ್ಯೋತ್ಸವವನ್ನು ಇಡೀ ರಾಜ್ಯದ ಜನತೆ ಆಚರಣೆ ಮಾಡಬೇಕಾಗಿದ್ದು, ಎಲ್ಲ ಧರ್ಮದವರು ಸೇರಿ ಮೂರು ದಿನಗಳ ಕಾಲ ಆಚರಣೆ ಮಾಡಬಹುದಾಗಿದೆ ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಕನ್ನಡ ನಾಡು, ನುಡಿಗೆ ಸಂಬಂಧಿಸಿದಂತೆ ಕೇವಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲಾಗುವುದು. ಜತೆಗೆ, ರಾಜ್ಯ ಭಾವುಟವನ್ನು ಮಾತ್ರ ಧ್ವಜಾರೋಹಣ ಮಾಡಿ, ಇತರೆ ಯಾವುದೇ ಭಾವುಟವನ್ನು ಅಳವಡಿಸುವುದಿಲ್ಲ ಎಂದು ಅರ್ಜಿದಾರರ ಪರ ವಕೀಲರು ನೀಡಿದ ಮುಚ್ಚಳಿಕೆಯನ್ನು ದಾಖಲಿಸಿಕೊಂಡು ನ್ಯಾಯಪೀಠ, ಷರತ್ತುಬದ್ದ ಅನುಮತಿ ನೀಡಿ, ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ.
ಡಿಸಿ ಕ್ರಮಕ್ಕೆ ಬೇಸರ: ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನ್ಯಾಯಪೀಠದ ಮುಂದೆ ವಿಷಯವನ್ನು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಇದು ಕರ್ನಾಟಕ ರಚನೆಯಾದ ದಿನದ ಪ್ರಯುಕ್ತ ರಾಜ್ಯ ಉತ್ಸವ ಆಚರಣೆ ಮಾಡಲಾಗುತ್ತದೆ. ಇದು ಧಾರ್ಮಿಕ ಕಾರ್ಯಕ್ರಮ ಅಲ್ಲ. ಎಲ್ಲಾ ಧರ್ಮದವರು ಸೇರಿ ಆಚರಣೆ ಮಾಡಬೇಕಾದ ಕಾರ್ಯಕ್ರಮ. ಹಬ್ಬದ ರೀತಿ ಸಂಭ್ರಮ ಮಾಡಬೇಕಿದೆ. ಅಂತಹ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವುದಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿತು.












Click it and Unblock the Notifications