ಕೋವಿಡ್; ವಿಡಿಯೋ ಕಾನ್ಫರೆನ್ಸ್ ಮೂಲಕ ಹೈಕೋರ್ಟ್ ಕಲಾಪ

ಬೆಂಗಳೂರು, ಜನವರಿ 05; ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಹೈಕೋರ್ಟ್ ಪ್ರಧಾನ ಪೀಠದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾಪ ನಡೆಯಲಿದೆ.

ಮಂಗಳವಾರ ಈ ಕುರಿತು ರಿಜಿಸ್ಟ್ರಾರ್ ಜನರಲ್ ಟಿ. ಜಿ. ಶಿವಶಂಕರೇಗೌಡ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಪ್ರಧಾನ ಪೀಠದಲ್ಲಿ ಜನವರಿ 5ರ ಬುಧವಾರದಿಂದ ಜನವರಿ 14ರ ತನಕ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಪ್ರಕರಣಗಳ ವಿಚಾರಣೆ ನಡೆಸಲಾಗುತ್ತದೆ.

ಬೆಂಗಳೂರು ಪೀಠ ಮತ್ತು ಎಲ್ಲಾ ವಿಚಾರಣಾ ನ್ಯಾಯಾಲಯಗಳಿಗೆ ಪ್ರತ್ಯೇಕ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವಾಗ ತುರ್ತು ಪ್ರಕರಣಗಳಿಗೆ ಆದ್ಯತೆ ನೀಡಲಾಗುತ್ತದೆ.

Karnataka High Court Hearings Through Virtual Mode From January 5 To 14

ಕರ್ನಾಟಕ ಹೈಕೋರ್ಟ್‌ ಧಾರವಾಡ ಮತ್ತು ಕಲಬುರಗಿ ಪೀಠದಲ್ಲಿ ಭೌತಿಕ ವಿಚಾರಣೆ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಹ ಕಲಾಪ ನಡೆಯಲಿದೆ. ಮುಂದಿನ ಆದೇಶದ ತನಕ ಇದು ಜಾರಿಯಲ್ಲಿರುತ್ತದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಅಗತ್ಯ ಲಿಂಕ್‌ಗಳನ್ನು ಒದಗಿಸಲಾಗುತ್ತದೆ. ಜನವರಿ 14ರಂದು ಪರಿಸ್ಥಿತಿ ನೋಡಿಕೊಂಡು ಮುಂದಿನ ಆದೇಶವನ್ನು ಹೊರಡಿಸಲಾಗುತ್ತದೆ.

ನ್ಯಾಯಾಲಯಕ್ಕೆ ಆಗಮಿಸುವ ಸಿಬ್ಬಂದಿ, ಪೊಲೀಸರು ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಎಲ್ಲರನ್ನೂ ಥರ್ಮಲ್ ಸ್ಕ್ಯಾನಿಂಗ್‌ಗೆ ಒಳಪಡಿಸಬೇಕು. ವಕೀಲರು ವಿಡಿಯೋ ಕಾನ್ಫರೆನ್ಸ್ ವಿಧಾನ ಬಳಕೆ ಮಾಡಬೇಕು. ಇ-ಫೈಲಿಂಗ್ ಮೂಲಕ ಕೇಸುಗಳನ್ನು ಫೈಲ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಧಾರವಾಡ ಮತ್ತು ಕಲಬುರಗಿ ಪೀಠದಲ್ಲಿ ಭೌತಿಕ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಹ ಕಲಾಪ ನಡೆಯಲಿದೆ. ಆದರೆ ಪ್ರಕರಣ ವಿಚಾರಣೆಗೆ ಜನರು ಭೌತಿಕವಾಗಿ ಹಾಜರಾಗುವಂತಿಲ್ಲ. ಆನ್‌ಲೈನ್ ಮೂಲಕ ಮಾತ್ರ ಹಾಜರಾಗಬೇಕಿದೆ.

ಕೋವಿಡ್ ಪ್ರಕರಣ ಹೆಚ್ಚಳ; ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗಿದೆ. ಡಿಸೆಂಬರ್ 27ರಂದು 289 ಹೊಸ ಪ್ರಕರಣ ರಾಜ್ಯದಲ್ಲಿ ದಾಖಲಾಗಿತ್ತು. ಮಂಗಳವಾರ 3000ಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಿದೆ.

ಮಂಗಳವಾರ ಒಂದೇ ದಿನ ಬೆಂಗಳೂರು ನಗರದಲ್ಲಿ 3048 ಹೊಸ ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಬುಧವಾರ ರಾತ್ರಿ 10 ಗಂಟೆಯಿಂದ ಮಾರ್ಗಸೂಚಿ ಜಾರಿಗೆ ಬರಲಿದೆ.

ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಫ್ಯೂ ವಿಸ್ತರಣೆ, ವಾರಾಂತ್ಯದ ಕರ್ಫ್ಯೂ ಜಾರಿ, ಶಾಲೆಗಳು ಬಂದ್, ಶೇ 50ರಷ್ಟು ಸೀಟು ಭರ್ತಿ ನಿಯಮ, ರಾಜಕೀಯ ಸಭೆ-ಸಮಾರಂಭ, ಪ್ರತಿಭಟನಾ ಜಾಥಾಗಳನ್ನು ಸರ್ಕಾರ ನಿರ್ಬಂಧಿಸಿದೆ.

ಬೆಂಗಳೂರು ನಗರದಲ್ಲಿ ಗುರುವಾರದಿಂದ ಶಾಲೆಗಳು ಬಂದ್ ಆಗಲಿವೆ. 10, 11 ಮತ್ತು 12ನೇ ತರಗತಿಗಳು ಮಾತ್ರ ಭೌತಿಕವಾಗಿ ನಡೆಯಲಿವೆ. 1 ರಿಂದ 9ನೇ ತರಗತಿಗೆ ಮತ್ತೆ ಆನ್‌ಲೈನ್ ಕ್ಲಾಸ್ ಆರಂಭವಾಗಲಿದೆ.

ವಾರದ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿಯೂ ಶೇ 50ರಷ್ಟು ಸಿಬ್ಬಂದಿ ಹಾಜರಾತಿಗೆ ಅವಕಾಶ ನೀಡಲಾಗಿದೆ. ಚಿತ್ರಮಂದಿರ, ಬಾರ್, ಪಬ್, ರೆಸ್ಟೋರೆಂಟ್‌ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ 50ರಷ್ಟು ಆಸನಗಳನ್ನು ಮಾತ್ರ ಭರ್ತಿ ಮಾಡಲು ಸೂಚನೆ ನೀಡಲಾಗಿದೆ.

ಸರ್ಕಾರದ ಮಾರ್ಗಸೂಚಿ ಪ್ರಕಾರ ಶುಕ್ರವಾರ ರಾತ್ರಿ 10 ರಿಂದ ಶನಿವಾರ ಮುಂಜಾನೆ 5 ಗಂಟೆಯ ತನಕ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ.

ದಿನಸಿ, ತರಕಾರಿ, ಹಾಲು, ಔಷಧಿ, ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳು ದೊರೆಯಲಿವೆ. ವಾರದ ದಿನಗಳಲ್ಲಿ ಮೆಟ್ರೋ, ಬಸ್ ಸಂಚಾರಕ್ಕೆ ಯಾವುದೇ ಅಡಚಣೆ ಇಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+