21 ಶಾಸಕರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್

high court
ಬೆಂಗಳೂರು, ಸೆ.27 : ಸಂವಿಧಾನ ಬಾಹಿರವಾಗಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಸಿದ್ದರಾಮಯ್ಯ ಸಚಿವ ಸಂಪುಟದ ಇಬ್ಬರು ಸಚಿವರು ಸೇರಿದಂತೆ 23 ಶಾಸಕರಿಗೆ ಶುಕ್ರವಾರ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.

ಸಂವಿಧಾನ ಬಾಹಿರವಾಗಿ ವ್ಯಕ್ತಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರಿಗೆ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ನೀಡಬಾರದು ಎಂದು ಕೋರಿ ವಕೀಲ ಧರ್ಮಪಾಲ್ ಹಾಗೂ ಜೈಕುಮಾರ್ ಹಿರೇಮಠ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸಚಿವರಾದ ಎಸ್.ಆರ್.ಪಾಟೀಲ್ ಹಾಗೂ ಎಚ್.ಆಂಜನೇಯ ಸೇರಿದಂತೆ 23 ಶಾಸಕರಿಗೆ ನೋಟಿಸ್ ಜಾರಿಗೊಳಿಸಿದೆ. ಸ್ಪೀಕರ್ ಕಾಗೋಡು ತಿಮ್ಮಪ್ಪ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ನೋಟಿಸ್ ನೀಡಲಾಗಿದೆ.

ಅರ್ಜಿಯ ವಿಚಾರಣೆ ವೇಳೆ ಶಾಸಕರ ತಮಗಿಷ್ಟ ಬಂದಂತೆ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ. ಈ ನೋಟಿಸ್ ನಿಂದಾಗಿ ಶಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಸ್.ಆರ್.ಪಾಟೀಲ್ ಸಚಿವರಾಗಿ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಯಾವುದೇ ಜನಪ್ರತಿನಿಧಿಗಳು, ವ್ಯಕ್ತಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವಂತಿಲ್ಲ, ಅಲ್ಲದೇ ಪ್ರಾದೇಶಿಕ ಭಾಷೆ, ರಾಷ್ಟ್ರೀಯ ಭಾಷೆಯನ್ನು ಹೊರತುಪಡಿಸಿ ಅನ್ಯ ಭಾಷೆಗಳಲ್ಲಿ ಪ್ರಮಾಣವಚನ ಸ್ವೀಕರಿಸುವಂತಿಲ್ಲ.

2013ರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಹಲವು ಶಾಸಕರು, ವ್ಯಕ್ತಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇನ್ನೂ ಕೆಲವು ಶಾಸಕರು, ತುಳು,ಮರಾಠಿ, ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಮುಂದಾಗಿದ್ದರು ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+