Breaking: ಮೇಕೆದಾಟು ಪಾದಯಾತ್ರೆ; ಸರ್ಕಾರ, ಕಾಂಗ್ರೆಸ್‌ಗೆ ಚಾಟಿ ಬೀಸಿದ ಹೈಕೋರ್ಟ್
ಬೆಂಗಳೂರು, ಜನವರಿ 12: ರಾಜ್ಯದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಧಿಕ್ಕರಿಸಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.
ವಕೀಲ ಶ್ರೀಧರ್ ಪ್ರಭು ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಬುಧವಾರ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ರೂಪಾಂತರಿ ಮತ್ತು ಕೊರೊನಾ ಮೂರನೇ ಅಲೆಗೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೇ ವೇಳೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಸಾವಿರಾರು ಜನರು ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದೆ.

ವರದಿ ನೀಡುವಂತೆ ಸರ್ಕಾರಕ್ಕೆ ಡೆಡ್‌ಲೈನ್
ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಗ್ಗೆ ಮಾಹಿತಿ ನೀಡಲು ಕೆಪಿಸಿಸಿಗೆ ಸೂಚಿನೆ ನೀಡಿದೆ. ಇದೇ ವೇಳೆ ಪಾದಯಾತ್ರೆ ಸಂದರ್ಭದಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿರುವ ಕುರಿತು ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಒಂದು ದಿನದೊಳಗೆ ತಿಳಿಸಲು ರಾಜ್ಯ ಸರ್ಕಾರಕ್ಕೂ ಸೂಚಿಸಿದೆ.
ಮೇಕೆದಾಟು ಪಾದಯಾತ್ರೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಮೆರವಣಿಗೆಗಳನ್ನು ವಿಶೇಷವಾಗಿ ಕಾಂಗ್ರೆಸ್ ನಡೆಸುವ ಪಾದಯಾತ್ರೆಯನ್ನು ಹೇಗೆ ಮತ್ತು ಏಕೆ ಮುಂದುವರಿಸಲು ಅನುಮತಿ ನೀಡಲಾಗುತ್ತಿದೆ ಮತ್ತು ಅಂತಹ ಯಾವುದೇ ಚಟುವಟಿಕೆಗಳಿಂದ ಕಾಂಗ್ರೆಸ್ ಅನ್ನು ತಡೆಯಲು ಏಕೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದನ್ನು ತಿಳಿಸುವಂತೆ ಕರ್ನಾಟಕ ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿದೆ. ವಿಚಾರಣೆಯನ್ನು ಇದೇ ಜ.14ಕ್ಕೆ ಮುಂದೂಡಲಾಗಿದೆ.
ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೆಂಡಾಮಂಡಲಗೊಂಡಿರುವ ಹೈಕೋರ್ಟ್, ಪಾದಯಾತ್ರೆ ತಡೆಯಲು ರಾಜ್ಯ ಸರ್ಕಾರ ಅಸಮರ್ಥವಾಗಿದೆಯೇ ಎಂದು ಪ್ರಶ್ನೆ ಮಾಡಿದೆ. ಸರ್ಕಾರ ಮತ್ತು ಕೆಪಿಸಿಸಿಗೆ ಕೋರ್ಟ್ ಒಂದು ದಿನದ ಗಡುವು ನೀಡಿ, ತಕ್ಷಣ ಉತ್ತರಿಸುವಂತೆ ಸೂಚಿಸಿದೆ.
ಕರ್ನಾಟಕ ಈಗಾಗಲೇ ಕೋವಿಡ್‌ನಿಂದ ತತ್ತರಿಸುತ್ತಿದೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ತೀವ್ರ ಅಸಮಾಧಾನ ಹೊರ ಹಾಕಿದ್ದು, ಸರ್ಕಾರದ ಮಾರ್ಗಸೂಚಿ ಪಾಲಿಸಲು ಕೆಪಿಸಿಸಿ ಏನು ಕ್ರಮ ಕೈಗೊಂಡಿದೆ ಎಂದೂ ಕಾಂಗ್ರೆಸ್ ಪಕ್ಷವನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ನೇತೃತ್ವದ ಪೀಠ ಪ್ರಶ್ನಿಸಿದೆ.
ಈ ವೇಳೆ ಸರ್ಕಾರದ ಪರ ಸಹಾಯಕ ಅಡ್ವೊಕೇಟ್ ಜನರಲ್ (ಎಎಜಿ) ಸುಬ್ರಮಣ್ಯ, ಈಗಾಗಲೇ ಪಾದಯಾತ್ರೆ ನಡೆಸುವವರ ಮೇಲೆ ಮೂರು ಎಫ್ಐಆರ್ ದಾಖಲಿಸಿರುವುದಾಗಿ ಹೈಕೋರ್ಟ್ಗೆ ಮಾಹಿತಿ ನೀಡಿದರು. ಅದಕ್ಕೆ ಸರ್ಕಾರ ಪಾದಯಾತ್ರೆ ತಡೆಯಲು ಅಸಮರ್ಥವಾಗಿದೆಯೇ? ಅನುಮತಿ ಕೊಟ್ಟಿಲ್ಲದಿದ್ದರೆ ಯಾರಿಗಾಗಿ ಕಾಯುತ್ತಿದ್ದೀರಿ? ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆಯೇ? ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಿದ್ದರೂ ಅನುಮತಿ ಹೇಗೆ ಸಿಕ್ಕಿತು? ಹೈಕೋರ್ಟ್ ಆದೇಶದವರೆಗೆ ನೀವು ಕ್ರಮ ಕೈಗೊಳ್ಳುವುದಿಲ್ಲವೇ? ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದೆ.
Recommended Video
ಗೃಹ ಸಚಿವ ಆರಗ ಜ್ಞಾನೇಂದ್ರ ತುರ್ತು ಸಭೆ
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದೇ ಸುಮ್ಮನೆ ಕುಳಿತಿರುವ ಬಗ್ಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿಕಾಸಸೌಧದಲ್ಲಿ ತುರ್ತು ಸಭೆ ಕರೆದಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಗೃಹ ಇಲಾಖೆ ಎಸಿಎಸ್ ಸಭೆಯಲ್ಲಿ ಭಾಗಿಯಾಗಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications