ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಕ್ಕೂರು ಬಳಿ ನಮ್ಮ ಮೆಟ್ರೋ ಕಾಮಗಾರಿಗೆ ಹೈಕೋರ್ಟ್ ತಡೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 30: ಜಕ್ಕೂರು ಏರೋಡ್ರೋಮ್ ಬಳಿ ನಮ್ಮ ಮೆಟ್ರೋ ಕಾಮಗಾರಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ಮಾರ್ಗ ಜಕ್ಕೂರು ಮೂಲಕ ಹಾದು ಹೋಗಲಿದೆ.

ವಕೀಲ ಅಜಯಕುಮಾರ್ ಪಾಟೀಲ ಅವರು ಸಲ್ಲಿಕೆ ಮಾಡಿದ್ದ ಪಿಐಎಲ್ ವಿಚಾರಣೆ ನಡೆಸಿದ ನ್ಯಾಯಾಲಯ ಏರೋಡ್ರೋಮ್ ಪಶ್ಚಿಮ ಭಾಗದಲ್ಲಿ ಎತ್ತರಿಸಿದ ಮೆಟ್ರೋ ಸೇರಿದಂತೆ ಯಾವುದೇ ನಿರ್ಮಾಣ ಚಟುವಟಿಕೆ ನಡೆಸದಂತೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್-2 ಪುನಾರಂಭ ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್-2 ಪುನಾರಂಭ

ನಿಷೇಧಿತ ವಲಯದಲ್ಲಿ ಯಾವುದೇ ನಿರ್ಮಾಣ ಮಾಡುವಂತಿಲ್ಲ ಎಂದು ಪಿಐಎಲ್‌ನಲ್ಲಿ ಮನವಿ ಮಾಡಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಕಾಮಗಾರಿಗೆ ತಡೆ ನೀಡಿದೆ.

ಅಕ್ಟೋಬರ್ 20ರ ತನಕ ಭಾರತಕ್ಕೆ ಲುಫ್ತಾನ್ಸಾ ವಿಮಾನ ಹಾರಾಟವಿಲ್ಲ! ಅಕ್ಟೋಬರ್ 20ರ ತನಕ ಭಾರತಕ್ಕೆ ಲುಫ್ತಾನ್ಸಾ ವಿಮಾನ ಹಾರಾಟವಿಲ್ಲ!

Karnataka High Court Stay For Namma Metro Work Near Jakkur Aerodrome

1934ರ ಏರ್ ಕ್ರಾಫ್ಟ್ ಕಾಯ್ದೆ ಪ್ರಕಾರ ಕಾಮಗಾರಿಗೂ ಮೊದಲು ಏರೋಡ್ರೋಮ್‌ನಿಂದ ಎನ್‌ಒಸಿ ಪಡೆಯಬೇಕು. ರನ್‌ ವೇ ಇಂದ 60 ಮೀಟರ್ ಅಂತರದಲ್ಲಿ ಯಾವುದೇ ನಿರ್ಮಾಣ ಕಾರ್ಯ ಮಾಡುವಂತಿಲ್ಲ. ಆದರೆ, ಪಸ್ತಾವಿತ ಮೆಟ್ರೋ ಮಾರ್ಗ ನಿಷೇಧಿತ ವಲಯದ ವ್ಯಾಪ್ತಿಯಲ್ಲಿಯೇ ಬರಲಿದೆ.

 ಕೆಐಎ ಸಂಪರ್ಕಿಸುವ ಮೆಟ್ರೋ ಕಾಮಗಾರಿಗೆ ರಸ್ತೆ ಅಗಲೀಕರಣದ ತೊಂದರೆ ಕೆಐಎ ಸಂಪರ್ಕಿಸುವ ಮೆಟ್ರೋ ಕಾಮಗಾರಿಗೆ ರಸ್ತೆ ಅಗಲೀಕರಣದ ತೊಂದರೆ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು 2013ರಲ್ಲಿ ಫ್ಲೈ ಓವರ್ ನಿರ್ಮಾಣ ಮಾಡುವಾಗಲೂ ಈ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ. ಏರೋಡ್ರೋಮ್ ಜಾಗವನ್ನು ಉಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಏರೋಡ್ರೋಮ್ ಜಾಗವನ್ನು ಒತ್ತುವರಿ ಮಾಡಲು ಹಿಂದೆಯೂ ಪ್ರಯತ್ನ ನಡೆದಿತ್ತು. ಅತ್ಯಂತ ಹಳೆಯ ಮತ್ತು ಬಡ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲವಾಗುವ ಏರೋಡ್ರೋಮ್ ಉಳಿಸಬೇಕು ಎಂದು ಅರ್ಜಿಯಲ್ಲಿ ಕೋರ್ಟ್‌ಗೆ ಮನವಿ ಮಾಡಲಾಗಿದೆ.

Recommended Video

Namma Metro ಸಿಬ್ಬಂದಿಗಳಿಗೆ ಕೊರೊನ ಸೋಂಕು | Oneindia Kannada

English summary
Karnataka high court issued stay order for Namma Metro work near Jakkur aerodrome. PIL submitted to court and requested to stop work.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X