ರಾಮಚಂದ್ರಾಪುರ ಮಠದ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ರಾಮಚಂದ್ರಾಪುರ ಮಠದ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೀಡಿದ್ದ ತನಿಖಾ ಆದೇಶ. ಅವ್ಯವಹಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆದೇಶ.
ಬೆಂಗಳೂರು, ಜುಲೈ 25: ರಾಮಚಂದ್ರಾಪುರ ಮಠದ ವಿರುದ್ಧದ ತನಿಖೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಠದಲ್ಲಿ ಹಲವಾರು ಆರ್ಥಿಕ ಅವ್ಯವಹಾರಗಳು ಕೇಳಿಬಂದಿದ್ದಿರಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ತನಿಖೆಗೆ ಆದೇಶ ನೀಡಿದ್ದರು. ಆದರೆ, ಇದರ ವಿರುದ್ಧ ಮಠದ ಆಡಳಿತ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಮಠದ ವತಿಯಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯದ ಏಕ ಸದಸ್ಯ ಪೀಠ, ಜುಲೈ 25ರಂದು ಮಧ್ಯಂತರ ಆದೇಶ ಹೊರಡಿಸಿ, ಮುಖ್ಯ ಕಾರ್ಯದರ್ಶಿ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.












Click it and Unblock the Notifications