ಕಸ ಸಮಸ್ಯೆ; ಬಿಬಿಎಂಪಿ ವಿಸರ್ಜಿಸುವುದಾಗಿ ಎಚ್ಚರಿಸಿದ ಹೈಕೋರ್ಟ್‌

ಬೆಂಗಳೂರು, ಜನವರಿ 30: ಬೆಂಗಳೂರಿನ ಕಸದ ಸಮಸ್ಯೆಯ ಬಗ್ಗೆ ಕರ್ನಾಟಕ ಹೈಕೋರ್ಟ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಲೆ ತೀವ್ರ ಕಿಡಿ ಕಾರಿದೆ.

ಈ ಕುರಿತು ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯ ಪೀಠ, ''ಘನತ್ಯಾಜ್ಯ ವಿಲೇವಾರಿಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ. ಈ ವಿಚಾರದಲ್ಲಿ ನಾವು ಕಠಿಣ ತೀರ್ಮಾನ ತೆಗೆದುಕೊಳ್ಳದೇ ಅನ್ಯ ಮಾರ್ಗವಿಲ್ಲ. ಇಲ್ಲದಿದ್ದರೆ, ವರ್ಷಗಳೇ ಗತಿಸಿದರೂ ಇದಕ್ಕೆ ಪರಿಹಾರ ಸಿಗುವುದಿಲ್ಲ'' ಎಂದು ಎಚ್ಚರಿಸಿದೆ.

''ತ್ಯಾಜ್ಯ ವಿಲೇವಾರಿಯಲ್ಲಿ ವಿಫಲವಾಗಿರುವ ಪಾಲಿಕೆಯನ್ನು ವಿಸರ್ಜಿಸಿ ಆಡಳಿತಾಧಿಕಾರಿ ನೇಮಿಸಬೇಕು. ಇಲ್ಲವೇ ನಗರದಲ್ಲಿ ನಿರ್ಮಾಣ ಕಾಮಗಾರಿಗಳನ್ನು ಸ್ಥಗಿತಗೊಳಿಸಬೇಕು. ಈ ಬಗ್ಗೆ ಸರ್ಕಾರ ಒಂದು ತೀರ್ಮಾನಕ್ಕೆ ಬರಬೇಕು' ಎಂದು ಪೀಠ ಬಿಬಿಎಂಪಿಗೆ ಚಾಟಿ ಬೀಸಿದೆ.

Karnataka Highcourt Takes Charge Against BBMP About Garbage Issue

''ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಸಂಬಂಧ ರಾಜ್ಯ ಸರ್ಕಾರ ಮಧ್ಯ ಪ್ರವೇಶ ಮಾಡಲಿದ್ದು, ಕ್ರಮ ಕೈಗೊಳ್ಳಲು 2 ವಾರ ಕಾಲಾವಕಾಶ ನೀಡುವಂತೆ ಅಡ್ವೋಕೇಟ್ ಜನರಲ್ ಮನವಿ ಮಾಡಿದ ಹಿನ್ನೆಲೆಯಲ್ಲಿ, ಕೋರ್ಟ್ ಯಾವುದೇ ಕಠಿಣ ಆದೇಶ ನೀಡಲು ಬಯಸುವುದಿಲ್ಲ'' ಎಂದು ನ್ಯಾಯಮೂರ್ತಿ ಪ್ರಭುಲಿಂಗ ನಾವಡಗಿ ನೇತೃತ್ವದ ಪೀಠ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+