ಹಿಜಾಬ್ ವಿವಾದ: ಸುಪ್ರೀಂ ಕೋರ್ಟ್‌ಗೆ ಹೋಗುವವರು ಹೋಗಲಿ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಬೆಂಗಳೂರು, ಫೆಬ್ರವರಿ 11: ಕರ್ನಾಟಕದ ಉಡುಪಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕರ್ನಾಟಕದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಅಲ್ಲದೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳ ನಡುವೆ ಶುರುವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿದೆ.
ಹಿಜಾಬ್- ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗುವವರು ಹೋಗಲಿ. ನಮ್ಮದೇನು ಅಭ್ಯಂತರ ಇಲ್ಲ. ಕೋರ್ಟ್ ಏನು ತೀರ್ಮಾನ ಮಾಡುತ್ತದೋ ಕಾದು ನೋಡೋಣ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಲಾಯರ್‌ಗಳನ್ನು ಇಟ್ಟು ಕೋರ್ಟ್‌ನಲ್ಲಿ ವಾದ ಮಾಡುವ ಶಕ್ತಿ ನನಗಂತೂ ಇಲ್ಲ, ಕಾಲೇಜಿನ ಆ ವಿದ್ಯಾರ್ಥಿನಿಯರಿಗೂ ಆ ಶಕ್ತಿ ಇರಲ್ಲ. ಆದರೆ ಯಾರೋ ಈ ವಿದ್ಯಾರ್ಥಿನಿಯರ ಹಿಂದೆ ಇದ್ದಾರೆ ಎಂದು ಸಚಿವರು ಶಂಕೆ ವ್ಯಕ್ತಪಡಿಸಿದರು.

ಇಡೀ ಹಿಜಾಬ್ ವಿವಾದ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಅನ್ನಿಸುತ್ತಿದೆ. ಅವರು ಹೀಗೆಲ್ಲಾ ಮಾಡಿಸುತ್ತಾ ಇದ್ದಾರೆ. ಸುಪ್ರೀಂ ಕೋರ್ಟ್‌ಗೆ ಹೋಗುವವರು ಹೋಗಲಿ, ನಮ್ಮದೇನು ಅಭ್ಯಂತರ ಇಲ್ಲ. ಕೋರ್ಟ್ ಏನು ತೀರ್ಮಾನ ಮಾಡುತ್ತದೋ ನೋಡೋಣ. ಸರ್ಕಾರದ ಆದೇಶ ಪಾಲನೆ ಮಾಡಿದರೆ ಮಾತ್ರ ಕಾಲೇಜಿಗೆ ಪ್ರವೇಶ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದರು.
ಸಿಎಫ್‍ಐ ಸಂಘಟನೆಯ ಅಜೆಂಡಾ ಈಡೇರಿದ ಹಾಗೆ ಇಲ್ಲ. ಹೀಗಾಗಿ ಕೋರ್ಟ್ ಆದೇಶವನ್ನು ವಿರೋಧ ಮಾಡುತ್ತಿದ್ದಾರೆ. ಈ ಸಂಘಟನೆಯೇ ಇದರ ಹಿಂದೆ ಇದ್ದು ಕೆಲಸ ಮಾಡುತ್ತಿದೆ. ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆ ಬಾಗಲೇಬೇಕು ಎಂದು ಹೇಳಿದರು.
ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ವಿಚಾರಣೆಯನ್ನು ಆರಂಭಿಸಿದ ಹೈಕೋರ್ಟ್ ವಿಸ್ತೃತ ನ್ಯಾಯಪೀಠ, ಹಿಜಾಬ್ ಮತ್ತು ಕೇಸರಿ ಶಾಲು ಸೇರಿದಂತೆ ಯಾವುದೇ ಧರ್ಮವನ್ನು ಸೂಚಿಸುವ ವಸ್ತ್ರವನ್ನು ಧರಿಸಲು ಯಾವ ವಿದ್ಯಾರ್ಥಿ ಮೇಲೂ ಒತ್ತಡ ಹೇರಬಾರದು ಎಂದು ಮೌಖಿಕವಾಗಿ ಹೇಳಿದೆ. ಆ ಕುರಿತು ಆದೇಶ ನೀಡುವುದಾಗಿ ಹೇಳಿರುವ ನ್ಯಾಯಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮಧ್ಯಾಹ್ನಕ್ಕೆ ಮುಂದೂಡಿದೆ.
ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನೀಸಾ ಅವರಿದ್ದ ತ್ರಿಸದಸ್ಯ ಪೀಠ ಸುಮಾರು ಎರಡು ಗಂಟೆಗಳ ಕಾಲ ವಾದ- ಪ್ರತಿವಾದವನ್ನು ಆಲಿಸಿತು.
ಬಳಿಕ "ಶಾಲಾ-ಕಾಲೇಜುಗಳು ಆರಂಭವಾಗಲಿ, ವಿಷಯ ನ್ಯಾಯಾಲಯದ ಮುಂದಿದೆ, ಕೋರ್ಟ್ ಆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಅಲ್ಲಿಯವರೆರೆಗೆ ಹಿಜಾಬ್ ಆಗಲಿ ಅಥವಾ ಕೇಸರಿ ಶಾಲು ಆಗಲಿ ಯಾವುದೇ ಧರ್ಮಕ್ಕೆ ಸಂಬಂಧಿಸಿದ ವಸ್ತುಗಳನ್ನು ಧರಿಸುವಂತಿಲ್ಲ ಮತ್ತು ಆ ಕುರಿತು ಯಾರೂ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದು. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಮರಳಬೇಕು ಎಂಬುದು ಕೋರ್ಟ್ ಆಶಯವಾಗಿದೆ,'' ಎಂದು ಮೌಖಿಕವಾಗಿ ಆದೇಶಿಸಿತು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications