ಸದನಕ್ಕೆ ಸುಳ್ಳು ಹೇಳಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು, ಫೆಬ್ರವರಿ 20: ಸದನಕ್ಕೆ ಸುಳ್ಳು ಮಾಹಿತಿ ನೀಡಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಿಕ್ಕಿಬಿದ್ದಿದ್ದಾರೆ.
ಸದನದಲ್ಲಿ ಬೆಂಗಳೂರಲ್ಲಿ ಡಿಸೆಂಬರ್ 18 ರಂದು 144 ಸೆಕ್ಷನ್ ಸಮಯದಲ್ಲಿ ನಡೆದ ಪ್ರತಿಭಟನೆ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ, ಅಂದು ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಅವರನ್ನು ಪೊಲೀಸರು ಬಲವಂತದಿಂದ ಎಳೆದೊಯ್ದ ಘಟನೆ ಬಗ್ಗೆ ಪ್ರಸ್ತಾಪವಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, 'ರಾಮಚಂದ್ರ ಗುಹಾ ಅವರನ್ನು ಎಳೆದಾಡಬಾರದಿತ್ತು, ಘಟನೆ ನಂತರ ನಾನೇ ಗುಹಾ ಅವರಿಗೆ ಕರೆ ಮಾಡಿ ಕ್ಷಮೆ ಕೋರಿದ್ದೇನೆ' ಎಂದರು.

ಆದರೆ ಈ ಬಗ್ಗೆ ಟ್ವಿಟ್ಟರ್ನಲ್ಲಿ ಸ್ಪಷ್ಟನೆ ಕೊಟ್ಟಿರುವ ರಾಮಚಂದ್ರ ಗುಹಾ, 'ಕರ್ನಾಟಕದ ಗೃಹ ಮಂತ್ರಿಗಳು ನನಗೆ ಯಾವುದೇ ಫೋನ್ ಕರೆ ಮಾಡಿಲ್ಲ, ಒಂದೊಮ್ಮೆ ಅವರು ಫೋನ್ ಕರೆ ಮಾಡಿ ಕ್ಷಮೆ ಕೋರಿದ್ದರೂ ಸಹ ನಾನು ಅವರ ಕ್ಷಮೆಯನ್ನು ಮನ್ನಿಸುತ್ತಿರಲಿಲ್ಲ' ಎಂದಿದ್ದಾರೆ.
''144 ಸೆಕ್ಷನ್ ಅನ್ನು ಕಾನೂನು ಬಾಹಿರವಾಗಿ ಹೇರಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಾಗಾಗಿ ನಾನು ಅಂದು ಸರ್ಕಾರದ ಕ್ರಮದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಿದ ಸಾವಿರಾರು ಮಂದಿಯಲ್ಲಿ ಒಬ್ಬ ಎನಿಸಿಕೊಳ್ಳುವುದಕ್ಕೆ ಹೆಮ್ಮೆ ಪಡುತ್ತೀನಿ'' ಎಂದಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications