Industry: ಕೈಗಾರಿಕಾ ಕ್ಷೇತ್ರದಲ್ಲಿ 11 ತಿಂಗಳಲ್ಲಿ ₹4.71 ಲಕ್ಷ ಕೋಟಿ ನೈಜ ಹೂಡಿಕೆ: ಎಂಬಿ ಪಾಟೀಲ್
ಬೆಂಗಳೂರು: ಕರ್ನಾಟಕ ಸರ್ಕಾರ ಕೈಗಾರಿಕೆ ಬೆಳವಣಿಗಾಗಿ ಕೈಗಾರಿಕೆ ನೀತಿ ಜಾರಿಗೆ ತಂದಿದೆ. ಹೂಡಿಕೆ ಆಕರ್ಷಣೆಗೆ ಕೈಗಾರಿಕೆ ಸಚಿವರು ವಿದೇಶಿ ಪ್ರವಾಸ ಮಾಡಿದ್ದರು. ಕಳೆದ ವರ್ಷ 2025ರ ಫೆಬ್ರವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆದಿದ್ದು, ಅದರಲ್ಲಿ 10.27 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಖಾತ್ರಿ ಆಗಿತ್ತು. ಅದರಲ್ಲಿ ₹4.71 ಲಕ್ಷ ಕೋಟಿ ರೂ. ನೈಜ ಹೂಡಿಕೆ ಡಿಸೆಂಬರ್ ಹೊತ್ತಿಗೆ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಗುರುವಾರ ತಿಳಿಸಿದರು.
ದಾವೋಸ್ ನಲ್ಲಿ ಜನವರಿ 19ರಿಂದ 23ರವರೆಗೆ ವಿಶ್ವ ಮಟ್ಟದ ಆರ್ಥಿಕ ಶೃಂಗಸಭೆ ನಡೆಯಲಿದೆ. ಅಲ್ಲಿಗೆ ತೆರಳಲು ಸಿದ್ಧವಾಗುತ್ತಿರುವುದಕ್ಕೆ ಪೂರ್ವಭಾವಿಯಾಗಿ ಸಚಿವರು ಕಳೆದ ಕಳೆದೊಂದು ವರ್ಷದಲ್ಲಿ ರಾಜ್ಯದ ಕೈಗಾರಿಕಾ ಕ್ಷೇತ್ರದ ವಿವಿಧ ವಲಯಗಳಲ್ಲಿ ಆಗಿರುವ ಹೂಡಿಕೆ, ಅರ್ಜಿ ಸಲ್ಲಿಕೆ ಇತರ ಮಾಹಿತಿಯನ್ನು ವಿವರಿಸಿದರು.

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಒಪ್ಪಂದಗಳಡಿ ಶೇಕಡ 46ರಷ್ಟು ನೈಜ ಹೂಡಿಕೆ ರಾಜ್ಯದಲ್ಲಾಗಿದೆ. ಈ ಪೈಕಿ ತಯಾರಿಕಾ ವಲಯಕ್ಕೆ ₹5.66 ಲಕ್ಷ ಕೋಟಿ, ಹೂಡಿಕೆ ಖಾತ್ರಿಯಲ್ಲಿ ₹3.22 ಲಕ್ಷ ಕೋಟಿ ನೈಜ ಬಂಡವಾಳ ಹರಿದು ಬಂದಿದೆ. ಮರುಬಳಕೆ ಇಂಧನ ವಲಯದಲ್ಲಿ 4.25 ಲಕ್ಷ ಕೋಟಿ ರೂ. ಖಾತ್ರಿಯ ಪೈಕಿ 1.41 ಲಕ್ಷ ಕೋಟಿ ರೂ. ಹೂಡಿಕೆಯಾಗಿ ಹರಿದು ಬಂದಿದೆ. ಮೂಲ ಸೌಕರ್ಯ ಅಭಿವೃದ್ಧಿ ಕ್ಷೇತ್ರಕ್ಕೆ 0.45 ಲಕ್ಷ ಕೋಟಿ ರೂ.ಗಳ ಹೂಡಿಕೆ ವಾಗ್ದಾನದಲ್ಲಿ 0.085 ಲಕ್ಷ ಕೋಟಿ ರೂ. ಹೂಡಿಕೆ ಬಂದಿದೆ. ಇದು ಕ್ರಮವಾಗಿ ಶೇ 58, ಶೇಕಡಾ 33 ಮತ್ತು ಶೇಕಡಾ 19ರ ಯಶಸ್ಸಿನ ದಾಖಲೆಯಾಗಿದೆ ಎಂದರು.
ಕರ್ನಾಟಕದಲ್ಲಿ ಹೂಡಿಕೆಗೆ ಮುಂದೆ ಬಂದ ಕಂಪನಿಗಳು ಪ್ರಸ್ತಾವನೆ ಸಲ್ಲಿಸುತ್ತಿದ್ದಂತೆ ಕೂಡಲೇ ಅರ್ಜಿ ಸಲ್ಲಿಕೆ, ಭೂಮಿ ಮತ್ತಿತರ ಮಂಜೂರಾತಿಗಳು, ಅನುಮೋದನೆಗಳನ್ನು ಡಿಜಿಟಲ್ ವೇದಿಕೆಯಾಗಿರುವ ಏಕಗವಾಕ್ಷಿ ವ್ಯವಸ್ಥೆ ಮೂಲಕ ಒದಗಿಸುತ್ತಿದ್ದೇವೆ. ಇದರಲ್ಲಿ 30ಕ್ಕೂ ಹೆಚ್ಚು ಇಲಾಖೆಗಳ 150ಕ್ಕೂ ಹೆಚ್ಚು ಸೇವೆಗಳು ಲಭ್ಯವಿದೆ. ಹೀಗಾಗಿ ತಯಾರಿಕೆ, ಇ.ಎಸ್.ಡಿ.ಎಂ, ಸೆಮಿಕಂಡಕ್ಟರ್, ಆಹಾರ ಸಂಸ್ಕರಣೆ ಕ್ಷೇತ್ರಗಳಿಗೆ ಹೆಚ್ಚಿನ ಬಂಡವಾಳ ಹರಿದು ಬರುತ್ತಿದೆ ಎಂದು ತಿಳಿಸಿದರು.
ಕೈಗಾರಿಕೆ ಸ್ನೇಹಿ ವಾತಾವರಣ
ರಾಜ್ಯದಲ್ಲಿ ಹೂಡಿಕೆ ಪ್ರಸ್ತಾವನೆಗಳು ಕಳೆದ ಒಂದು ವರ್ಷದಲ್ಲಿ ತ್ವರಿತವಾಗಿ ಜಾರಿಗೆ ಬರುವಂತೆ ಮಾಡಲಾಗಿದೆ. ಕೈಗಾರಿಕೆ ಸ್ನೇಹಿ ವಾತಾವರಣ ನಿರ್ಮಿಸಿದ್ದೇವೆ. ಒಟ್ಟು ಹೂಡಿಕೆ ಪ್ರಸ್ತಾವನೆಗಳ ಪೈಕಿ ಶೇ.50ರಷ್ಟು ಮತ್ತು ತಯಾರಿಕೆ ವಲಯದ ಹೂಡಿಕೆ ಆಗಿದೆ. ಶೇಕಡಾ 60ರಷ್ಟು 'ಕರ್ನಾಟಕ ಉದ್ಯೋಗ ಮಿತ್ರ'ದಲ್ಲಿ ಸಲ್ಲಿಕೆ ಆಗಿವೆ. ಇದೆಲ್ಲವು ರಾಜ್ಯ ಸರ್ಕಾರ ಜಾರಿಗೆ ತಂದ ನೀತಿ ನಿಯಮಗಳಿಗೆ ಸಿಕ್ಕ ಗೆಲುವಾಗಿದೆ. ಒಂದೇ ಒಂದು ಯೋಜನೆ ಒಪ್ಪಂದದ ಹಂತಕ್ಕೆ ನಿಲ್ಲದೇ ಮುಂದಕ್ಕೆ ಕೊಂಡ್ಯೊಯ್ದಿದ್ದೇವೆ ಎಂದು ಹೇಳಿದರು.
ಎಮ್ವೀ ಎನರ್ಜಿ ಕಂಪನಿಯು ಬೆಂಗಳೂರಿನ ಐಟಿಐಆರ್ ಪ್ರದೇಶದಲ್ಲಿ ಸೌರಕೋಶ ಮತ್ತು ಮಾಡ್ಯೂಲ್ ತಯಾರಿಕೆ ವಿಸ್ತರಣೆಗೆ 5,495 ಕೋಟಿ ರೂ ಹೂಡಿಕೆ ಮಾಡಲಿದೆ. ತಯಾರಿಕಾ ವಲಯದ ಖ್ಯಾತ ಸಿಫ್ಲೆಕ್ಸ್ ಕಂಪನಿಯು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಮುಖ್ಯವಾಗಿರುವ ಸಿಲಿಕಾನ್ ಬಿಡಿಭಾಗಗಳನ್ನು ತಯಾರಿಸುವ ಸ್ಥಾವರ ಸ್ಥಾಪನೆಗೆ 9,300 ಕೋಟಿ ರೂ. ಮತ್ತು ಜಿಂದಾಲ್ ಸ್ಟೀಲ್ಸ್ ವಿಜಯನಗರದಲ್ಲಿ ಎಲೆಕ್ಟ್ರಿಕಲ್ ಸ್ಟೀಲ್ ಘಟಕ ಸ್ಥಾಪನೆಗೆ 7 ಸಾವಿರ ಕೋಟಿ ರೂ. ಹೂಡಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿವೆ ಎಂದು ತಿಳಿಸಿದರು.
ಎಲ್ಲೆಲ್ಲಿ ಎಷ್ಟು ಹೂಡಿಕೆ ಆಗಿದೆ?
ಕಲಬುರಗಿ ಜಿಲ್ಲೆಯಲ್ಲಿ ತಯಾರಿಕಾ ಘಟಕ ಸ್ಥಾಪನೆಗೆ ಅಲ್ಟ್ರಾ ಟೆಕ್ ಕಂಪನಿಯು 4,819 ಕೋಟಿ ರೂ, ದಾಲ್ಮಿಯಾ ಸಿಮೆಂಟ್ಸ್ ಬೆಳಗಾವಿಯ ಯಾದವಾಡದಲ್ಲಿ 3,000 ಕೋಟಿ ರೂ ಹಾಗೂ ವಿಸ್ತರಣೆಗೆ 3,020 ಕೋಟಿ ರೂ, ಮರುಬಳಕೆ ಇಂಧನ ಕ್ಷೇತ್ರದಲ್ಲಿ ಟಾಟಾ ಪವರ್ 8,134 ಕೋಟಿ ರೂ, ವೋಲ್ವೋ ತನ್ನ ಹೊಸಕೋಟೆ ಘಟಕದ ವಿಸ್ತರಣೆಗೆ 1,251 ಕೋಟಿ ರೂ, ವಿಜಯಪುರ ಜಿಲ್ಲೆಯಲ್ಲಿ ಸುಜ್ಲಾನ್ ಎನರ್ಜಿ ಲಿಮಿಟೆಡ್ 12,032 ಕೋಟಿ ರೂ, ಹ್ಯಾವೆಲ್ಸ್ ಇಂಡಿಯಾ ತನ್ನ ಉತ್ಪಾದನೆಯ ಹೆಚ್ಚಳ ಮತ್ತು ನೂತನ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ತುಮಕೂರು ಜಿಲ್ಲೆಯಲ್ಲಿ 710 ಕೋಟಿ ರೂ, ಬಾಲಾಜಿ ವೇಫರ್ಸ್ 550 ಕೋಟಿ ರೂ, ಎಎಸ್ಎಂ ಟೆಕ್ನಾಲಜೀಸ್ 490 ಕೋಟಿ ರೂ, ಹೂಡಿಕೆ ಮಾಡಲು ಕರ್ನಾಟಕ ಉದ್ಯೋಗ ಮಿತ್ರದಲ್ಲಿ ಪ್ರಸ್ತಾವನೆ ನೀಡಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ವೈದ್ಯಕೀಯ ಮತ್ತು ಸ್ಯಾನಿಟರಿ ಸಾಧನಗಳನ್ನು ತಯಾರಿಸುವ ಟಿಜೆಡ್ಎಂಒ ಇಂಡಿಯಾ 58 ಕೋಟಿ ರೂ, ಎಚ್125 ಮಾದರಿಯ ಏರ್-ಬಸ್ ಗೆ ಬೇಕಾಗುವ ಬಿಡಿಭಾಗಗಳ ತಯಾರಿಕೆ ಟಿಎಎಸ್ಎಲ್ ಕೋಲಾರದ ವೇಮಗಲ್ ನಲ್ಲಿ 500 ಕೋಟಿ ರೂ. ಹೂಡಿಕೆಗೆ ಮುಂದಾಗಿವೆ ಎಂದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications