• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೈಗಾರಿಕೆ ಆಸ್ತಿಗಳ ಏಕರೂಪ ತೆರಿಗೆ ಸಂಗ್ರಹ: ಸಚಿವ ಶೆಟ್ಟರ್‌

|

ಬೆಂಗಳೂರು ಡಿಸೆಂಬರ್‌ 21: ಕೈಗಾರಿಕೋದ್ಯಮಿಗಳ ಹಾಗೂ ಕೈಗಾರಿಕಾ ಸಂಸ್ಥೆಗಳ ಪ್ರಮುಖ ಬೇಡಿಕೆಯಾಗಿದ್ದ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಕ್ರಮದ ಬಗ್ಗೆ ರಾಜ್ಯ ಸರಕಾರ ಮಹತ್ವ ನಿರ್ಧಾರ ಕೈಗೊಂಡಿದೆ.

ವರ್ಷಾಂತ್ಯಕ್ಕೆ ಹೊಸ ಕೈಗಾರಿಕಾ ನೀತಿ ಗಿಫ್ಟ್ ಕೊಡಲಿದ್ದಾರೆ ಶೆಟ್ಟರ್

ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿವರಣೆ ನೀಡಿದ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರು, ನಗರಪ್ರದೇಶಗಳಿಂದ ಗ್ರಾಮಪಂಚಾಯ್ತಿಯ ವ್ಯಾಪ್ತಿಯಲ್ಲಿನ ಎಲ್ಲಾ ಕೈಗಾರಿಕೆಗಳಿಗೆ ಏಕರೂಪದ ತೆರಿಗೆ ಸಂಗ್ರಹಣೆಯ ಮಾಡುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸಲಾಗುವುದು ಎಂದು ಪ್ರಕಟಿಸಿದರು.

ಖನಿಜ ಭವನದ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ದಿ, ನಗರಾಭಿವೃದ್ದಿ, ಕೈಗಾರಿಕಾ ಇಲಾಖೆ ಹಾಗೂ ಇನ್ನಿತರೆ ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಿದ ಅವರು ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿಯನ್ನು ನೀಡಿದರು.

ನಗರಸಭೆ, ಪುರ ಸಭೆ, ಕಾರ್ಪೋರೇಷನ್‌ಗಳು, ಗ್ರಾಮಪಂಚಾಯ್ತಿ ಇವುಗಳ ಮೂಲಕ ತೆರಿಗೆ ಸಂಗ್ರಹಕ್ಕೆ ಇರುವ ಕ್ರಮಗಳಲ್ಲಿ ಬಹಳಷ್ಟು ಗೊಂದಲಗಳು ಇದ್ದವು. ಇವುಗಳನ್ನು ಸರಿಪಡಿಸುವಂತೆ ಕೊರಿ ಬಹಳಷ್ಟು ಸಮಯದಲ್ಲಿ ಕೈಗಾರಿಕೋದ್ಯಮಿಗಳು ಹಾಗೂ ಕೈಗಾರಿಕಾ ಸಂಸ್ಥೆಗಳು ಮನವಿಯನ್ನು ನೀಡಿದ್ದವು. ಈ ಮನವಿಯ ಹಿನ್ನಲೆಯಲ್ಲಿ ಹಾಗೂ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ದಿಗೆ ಬೇಕಾಗಿರುವ ಸವಲತ್ತುಗಳನ್ನು ನೀಡುವ ದೃಷ್ಟಿಯಿಂದ ರಾಜ್ಯಾದ್ಯಂತ ಏಕರೂಪದ ತೆರಿಗೆ ಸಂಗ್ರಹಣೆಗೆ ಅಗತ್ಯವಿರುವ ನೀತಿಯನ್ನು ರೂಪಿಸಲು ರಾಜ್ಯ ಸರಕಾರ ಮುಂದಾಗಿದೆ.

English summary
Karnataka Industry Minister Jagadish Shettar Says About Industry Tax. Industry Tax Collection next it will be Uniformity.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X