ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ

|
Google Oneindia Kannada News

ಬೆಂಗಳೂರು, ಮೇ 28: ಕರ್ನಾಟಕದ 'ಸಿಂಗಂ' ಎಂದೇ ಖ್ಯಾತರಾಗಿರುವ ಖಡಕ್ ಪೊಲೀಸ್ ಅಣ್ಣಾಮಲೈ ಅವರು ಮಂಗಳವಾರದಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಅಣ್ಣಾಮಲೈ ಅವರು ಪೊಲೀಸ್ ಹುದ್ದೆ ತೊರೆದು ರಾಜಕೀಯ ಪ್ರವೇಶ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂಬ ಸುದ್ದಿಯಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ಅವರು ಜೂನ್ ಮೊದಲ ವಾರದಲ್ಲಿ ರಾಜೀನಾಮೆ ನೀಡಿ ರಾಜಕೀಯಕ್ಕೆ ಧುಮುಕಲಿದ್ದಾರೆ ಎನ್ನಲಾಗಿತ್ತು. ಆದರೆ, ಮೇ 28ರಂದು ಐಜಿ- ಡಿಜಿಪಿ ಹಿರಿಯ ಅಧಿಕಾರಿಗಳಿಗೆ ರಾಜೀನಾಮೆ ಪತ್ರ ಕಳಿಸಿದ್ದಾರೆ.

Karnataka IPS officer Annamalai resigns

2011ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರು ಕಾರ್ಕಳ, ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು.

ಬೆಂಗಳೂರು ದಕ್ಷಿಣ ನೂತನ ಡೆಪ್ಯೂಟಿ ಕಮಿಷನರ್, ಐಪಿಎಸ್, ಕೆ ಅಣ್ಣಾಮಲೈ ಸಂದರ್ಶನಬೆಂಗಳೂರು ದಕ್ಷಿಣ ನೂತನ ಡೆಪ್ಯೂಟಿ ಕಮಿಷನರ್, ಐಪಿಎಸ್, ಕೆ ಅಣ್ಣಾಮಲೈ ಸಂದರ್ಶನ

ಅಣ್ಣಾಮಲೈ ಅವರ ರಾಜೀನಾಮೆ ಬಗ್ಗೆ ಸೋಮವಾರ ರಾತ್ರಿಯಿಂದ ಸುದ್ದಿ ವಾಹಿನಿಗಳಲ್ಲಿ ಬ್ರೇಕಿಂಗ್ ನ್ಯೂಸ್ ಬರುತ್ತಿದ್ದಂತೆ, ಅಭಿಮಾನಿಗಳು ಅಣ್ಣಾಮಲೈ ಕಚೇರಿಯತ್ತ ಧಾವಿಸಿ, ರಾಜೀನಾಮೆ ನೀಡದಂತೆ ಒತ್ತಾಯಿಸಿದ್ದಾರೆ.

ಕರೂರು ಮೂಲದವರಾದ ಅಣ್ಣಾಮಲೈ ಅವರು ಪೊಲೀಸ್ ಹುದ್ದೆ ತೊರೆದ ಬಳಿಕ ಸ್ವಗ್ರಾಮಕ್ಕೆ ತೆರಳಲಿದ್ದು, ನಂತರ ಮುಂದಿನ ನಡೆ ಬಗ್ಗೆ ನಿರ್ಧರಿಸಲಿದ್ದಾರೆ ಎಂಬ ಸುದ್ದಿಯಿದೆ. ತಮಿಳುನಾಡಿನಿಂದ ರಾಜಕೀಯ ರಂಗಕ್ಕೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ. ಅಣ್ಣಾಮಲೈ ಅವರು ಡಿಎಂಕೆ ಪಕ್ಷ ಸೇರಲಿದ್ದಾರೆ ಎಂಬ ಮಾಹಿತಿಯೂ ಹಬ್ಬಿದೆ ಆದರೆ, ಯಾವುದೋ ಖಚಿತವಾಗಿಲ್ಲ. ಅಣ್ಣಾಮಲೈ ಅವರು ಈ ಬಗ್ಗೆ ಪ್ರತಿಕ್ರಿಯಿಸಿಲ್ಲ.

English summary
Karnataka IPS officer Annamalai, popularly known as 'Singham' of Karnataka police, has submitted resignation letter from his profession and he is likely to plunge into politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X