ಮೇಕೆದಾಟು ಬೆನ್ನುಬಿಡದ ಡಿಕೆಶಿ: ಯೋಜನೆಗೆ ಆದ್ಯತೆ ನೀಡಲು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕಟ್ಟಪ್ಪಣೆ
ಬೆಂಗಳೂರಿ, ಮೇ 30: ಜಲಸಂಪನ್ಮೂಲ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಂಗಳವಾರ ನೀರಾವರಿ ಇಲಾಖೆಯ ಸಭೆಯನ್ನು ಕರೆಯುವುದರೊಂದಿಗೆ ಮತ್ತೆ ಗಮನ ಸೆಳೆದರು. ಈ ಸಭೆಯಲ್ಲಿ ಮೇಕೆದಾಟು ಯೋಜನೆಗೆ ಆಧ್ಯತೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು. ಚುನಾವಣೆಗೂ ಮುನ್ನ ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಡಿಕೆಶಿ, ಈಗ ಮತ್ತೆ ಯೋಜನೆಯ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ.
ಬೆಂಗಳೂರು ಅಭಿವೃದ್ಧಿ ಖಾತೆಯನ್ನೂ ಹೊಂದಿರುವ ಅವರು ಮೇಕೆದಾಟು ಯೋಜನೆಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ ಎನ್ನಲಾಗಿದೆ. ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ಬೆಂಗಳೂರಿನ ನೀರಿನ ಬವಣೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಮೊದಲ ಸಭೆಯಲ್ಲೇ ಮೇಕೆದಾಟು ಯೋಜನೆಯ ಕುರಿತು ಪ್ರಸ್ತಾಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು ಯೋಜನೆ ವಿರುದ್ಧ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯುಎಂಎ) ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದೆ.
ಈ ಯೋಜನೆಗೆ ರೂ 9,000 ಕೋಟಿ (2019 ದರಗಳು) ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
'ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ' ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಕರ್ನಾಟಕಕ್ಕೆ ಹಂಚಿಕೆಯಾದ ಹೆಚ್ಚುವರಿ 4.75 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಲು ಈ ಯೋಜನೆ ಅನುಕೂಲ ಮಾಡಿಕೊಡಲಿದೆ.
ಕರ್ನಾಟಕವು ತಮಿಳುನಾಡಿಗೆ ನೀರು ಹರಿಸುವುದನ್ನು ನಿಯಂತ್ರಿಸಲು ಮತ್ತು ಸುಪ್ರೀಂ ಕೋರ್ಟ್‌ನ 2018 ರ ನಿರ್ದೇಶನದಂತೆ ನೀರಿನ ಹಂಚಿಕೆ ಮಾಡಲು ಪ್ರಯತ್ನಿಸುತ್ತಿದೆ.

67.16 ಟಿಎಂಸಿ ಅಡಿ ನೀರನ್ನು ಸಂಗ್ರಹಿಸಲು ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲಾಗುತ್ತದೆ. 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಯುನಿಟ್‌ಗಳನ್ನು ನಿರ್ಮಿಸಬೇಕಿದೆ. ಇತರ ಮೂಲಸೌಕರ್ಯಗಳು, ನೀರನ್ನು ಎತ್ತುವ ಜಾಕ್‌ವೆಲ್-ಕಮ್-ಪಂಪ್‌ಹೌಸ್‌ಗಳ ನಿರ್ಮಾನ ಯೋಜನೆಯ ಪ್ರಮುಖ ಅಂಶಗಳಾಗಿವೆ.
ಯೋಜನೆಗೆ ಒಟ್ಟು 12,979 ಎಕರೆ ಅಗತ್ಯವಿದ್ದು, ಇದರಲ್ಲಿ 12,345.4 ಎಕರೆ ಮುಳುಗಡೆಯಾಗಲಿದೆ. 500 ಎಕರೆ ಕಂದಾಯ ಭೂಮಿಯನ್ನು ಉಳಿಸಿಕೊಳ್ಳಲಾಗುತ್ತದೆ. ನೀರು ಪಾಲಾಗುವ ಉಳಿದ ಜಮೀನು ಪರಿಸರ ಸೂಕ್ಷ್ಮ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಸುತ್ತಮುತ್ತಲಿನ ಅರಣ್ಯಗಳಿಗೆ ಸೇರಿದೆ.
ವನ್ಯಜೀವಿಗಳ ಆವಾಸಸ್ಥಾನವು ಕುಗ್ಗುತ್ತಿರುವ ಸಮಯದಲ್ಲಿ ಸಂರಕ್ಷಿತ ಪ್ರದೇಶದ ದೊಡ್ಡ ಪ್ರದೇಶಗಳನ್ನು ಮುಳುಗಿಸುವುದು ವನ್ಯಜೀವಿ ಸಂಕುಲಕ್ಕೆ ಸಂಕಷ್ಟವನ್ನು ತಂದೊಡ್ಡಲಿದೆ ಎಂದು ಪರಿಸರ ಕಾರ್ಯಕರ್ತರು ಮತ್ತು ತಜ್ಞರು ಎಚ್ಚರಿಸಿದ್ದಾರೆ.

ಕರ್ನಾಟಕಕ್ಕೆ 284.75 ಟಿಎಂಸಿ ಅಡಿ ಹಂಚಿಕೆ ಮಾಡಬೇಕು. ಬಿಳಿಗುಂಡ್ಲು (ತಮಿಳುನಾಡು ಕಡೆಗೆ) ಹರಿವನ್ನು 192 ಟಿಎಂಸಿ ಅಡಿಯಿಂದ 177.25 ಟಿಎಂಸಿ ಅಡಿಗಳಿಗೆ ಇಳಿಸಿದ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಸ್ತಾವನೆ ಬಂದಿದೆ.
ಈಗ ಅಂತರ್ಜಲ ಮತ್ತು ಇತರ ಮೂಲಗಳನ್ನು ಅವಲಂಬಿಸಿರುವ ಬೆಂಗಳೂರಿನ ಶೇ 50ರಷ್ಟು ಜನಸಂಖ್ಯೆಗೆ ಕುಡಿಯುವ ನೀರು ಪೂರೈಸಲು ಈ ಯೋಜನೆಯು ನಿರ್ಣಾಯಕವಾಗಿದೆ ಎಂದು ಕರ್ನಾಟಕ ವಾದಿಸಿತ್ತು.
ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಶೀಘ್ರ ಮಂಜೂರಾತಿಗೆ ಮುಂದಾಗುವ ಸಾಧ್ಯತೆ ಇದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?










Click it and Unblock the Notifications