ಕೋವಿಡ್ 3ನೇ ಅಲೆ ಎದುರಿಸಲು ಸರ್ಕಾರ ಸರ್ವಸನ್ನದ್ಧ: ಡಾ.ಕೆ.ಸುಧಾಕರ್
ಬೆಂಗಳೂರು, ಜನವರಿ 17: ಕೋವಿಡ್ ಲಸಿಕಾಕರಣದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗುವಂತೆ ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಒಂದು ವರ್ಷವಾಗಿದೆ. ಭಾರತ 156 ಕೋಟಿ ಡೋಸ್ ಲಸಿಕೆಗಳನ್ನು ನೀಡಿ, ಐತಿಹಾಸಿಕ ಸಾಧನೆ ಮಾಡಿದೆ. ಭಾರತೀಯನಾಗಿ, ಕರ್ನಾಟಕದ ಜನತೆಯ ಪರವಾಗಿ ಪ್ರಧಾನಿಗಳಿಗೆ ಅಭಿನಂದನೆಗಳು ಹಾಗೂ ಲಸಿಕೆಯನ್ನು ಕಂಡು ಹಿಡಿದ ವಿಜ್ಞಾನಿಗಳಿಗೆ ಹಾಗೂ ಸಂಸ್ಥೆಗಳಿಗೂ ಕೃತಜ್ಞತೆಗಳು ಎಂದು ಹೇಳಿದರು.
ಲಸಿಕಾ ಕಾರ್ಯಕ್ರಮದ ಯಶಸ್ಸಿಗೆ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿಯ ಕೊಡುಗೆಯೂ ಇದೆ. ಮುಂಚೂಣಿ ಕಾರ್ಯಕರ್ತರು ಮತ್ತು ಅಧಿಕಾರಿಗಳು ಕೂಡ ಈ ಲಸಿಕಾಕರಣದ ಯಶಸ್ಸಿನ ಭಾಗವಾಗಿದ್ದಾರೆ. ಜನರು ಲಸಿಕೆ ಪಡೆದುಕೊಂಡು ಸರ್ಕಾರದ ಹೋರಾಟದ ಜೊತೆ ಕೈ ಜೋಡಿಸಿದ್ದಾರೆ ಎಂದು ಹೇಳಿದರು.

36 ದೇಶಗಳಲ್ಲಿ ಇನ್ನೂ 10% ರಷ್ಟು ಲಸಿಕೆ ನೀಡಲು ಸಾಧ್ಯವಾಗಿಲ್ಲ. ಕರ್ನಾಟಕದಲ್ಲಿ 99% ರಷ್ಟು ಜನರು ಮೊದಲ ಡೋಸ್ ತೆಗೆದುಕೊಂಡಿದ್ದರೆ, 83% ಜನರು ಎರಡೂ ಡೋಸ್ ತೆಗೆದುಕೊಂಡಿದ್ದಾರೆ. ಪ್ರಧಾನಿಗಳು ನಮ್ಮ ದೇಶಕ್ಕೆ ಮಾತ್ರವಲ್ಲ, ವಿಶ್ವದ ಬಡ ರಾಷ್ಟ್ರಗಳಿಗೂ ಲಸಿಕೆ ಸರಬರಾಜು ಮಾಡಿ, ಕೊರೊನಾ ಹೋರಾಟದಲ್ಲಿ ಭಾರತ ದೊಡ್ಡಣ್ಣನ ಪಾತ್ರ ನಿರ್ವಹಿಸುವಂತೆ ಮಾಡಿದ್ದಾರೆ ಎಂದು ಹೇಳಿದರು.

3ನೇ ಅಲೆಯನ್ನು ಎದುರಿಸಲು ಸಿದ್ಧತೆ
ರಾಜ್ಯ ಸರ್ಕಾರ ಕೋವಿಡ್ 3ನೇ ಅಲೆಯನ್ನು ಎದುರಿಸಲು ಸಿದ್ಧತೆ ಮಾಡಿಕೊಂಡಿದೆ. 10 ಸಾವಿರ ಗೃಹ ವೈದ್ಯರ ಜೊತೆ ವೀಡಿಯೊ ಕಾನ್ಫರೆನ್ಸ್ ಮಾಡಿ, ಹೋಮ್ ಐಸೋಲೇಷನ್ ನಲ್ಲಿದ್ದಾಗ ಯಾವ ರೀತಿ ಆರೈಕೆ ಮಾಡಬೇಕು , ಟೆಲಿ ಟ್ರಯಾಜಿಂಕ್ ಹೇಗೆ ಮಾಡಬೇಕು, ಅವರಿಗೆ ನೀಡಬೇಕಾಗಿರುವ ಸಲಹೆ, ಸೂಚನೆಗಳೇನು ಎಂದು ವಿವರಿಸಲಾಗಿದೆ. ಕೆಲವೇ ದಿನಗಳಲ್ಲಿ ಅಂತಿಮ ವರ್ಷದ ವೈದ್ಯಕೀಯ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ಕೆ ಸೇರಿಕೊಳ್ಳಲಿದ್ದಾರೆ. ಎಷ್ಟೇ ಜನರಿಗೆ ಸೋಂಕು ತಗುಲಿದರೂ ಮನೆಯಲ್ಲೇ ಪರಿಣಾಮಕಾರಿ ಚಿಕಿತ್ಸೆ ಸಿಗುವ ಹಾಗೆ, ತಂತ್ರಜ್ಞಾನ ಹಾಗೂ ದತ್ತಾಂಶಗಳನ್ನು ಉಪಯೋಗ ಮಾಡಿಕೊಂಡು ವಿನೂತನವಾಗಿ 3ನೇ ಅಲೆಯನ್ನು ನಿಯಂತ್ರಣ ಮಾಡುತ್ತೇವೆ ಎಂದು ಹೇಳಿದರು.
ಕೋವಿಡ್ ವಿಚಾರದಲ್ಲಿ ಸ್ವಂತ ಆರೈಕೆ, ಪರೀಕ್ಷೆ ಅಥವಾ ಚಿಕಿತ್ಸೆ ಮಾಡಿಕೊಳ್ಳುವುದು ಕಾನೂನಾತ್ಮಕವಾಗಿ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಸಚಿವರು ಹೇಳಿದರು.

ಅಬಲಾಶ್ರಮ ಕಾರ್ಯಕ್ಕೆ ಮೆಚ್ಚುಗೆ
ಬಸವನಗುಡಿಯ ಅಬಲಾಶ್ರಮದಲ್ಲಿ 'ಸ್ವಾಸ್ಥ್ಯ' ಆರೋಗ್ಯ ಸೇವೆಗಳ ಉಪಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು ಸಂಸ್ಥೆಯ ಸೇವಾ ಕಾರ್ಯಗಳು, ಸುವ್ಯಸ್ಥಿತ ನಿರ್ವಹಣೆ ಪ್ರೇರಣಾದಯಾಕ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಅವರು ಕೂಡ ಪುರುಷರಷ್ಟೇ ಸಮಾನ ಅನ್ನುವುದನ್ನು ಬಿಂಬಿಸಲು ಅಬಲಾಶ್ರಮ ಕೆಲಸ ಮಾಡುತ್ತಿದೆ. ಮಹಿಳೆಯರಿಗೆ ಅವಕಾಶ ಕೊಟ್ಟು ಅವರನ್ನು ಸೇರಿಸಿಕೊಂಡು ದೇಶಕಟ್ಟುವ ಪ್ರಯತ್ನ ಮಾಡಿದಾಗ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ ಅನ್ನುವ ಮಾತನ್ನು ಅಬಲಾಶ್ರಮ ಪಾಲಿಸುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.
ಆರ್‌ಎಸ್‌ಎಸ್‌ನ ಕ್ಷೇತ್ರೀಯ ಕಾರ್ಯವಾಹರಾದ ನಾ.ತಿಪ್ಪೇಸ್ವಾಮಿ, ಅಬಲಾಶ್ರಮದ ಅಧ್ಯಕ್ಷರಾದ ಡಾ.ವಿಜಯಲಕ್ಷ್ಮಿ ದೇಶ್ಮಾನೆ, ಕಾರ್ಯದರ್ಶಿ ಶೇಷಾಜಿ, ಮಾಜಿ ಮೇಯರ್ ಬಿ.ಎಸ್.ಸತ್ಯನಾರಾಯಣ ಉಪಸ್ಥಿತರಿದ್ದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications