ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರದ್ಧಾಂಜಲಿ:ರಾಜ್ಯ ನಾಯಕರ ಮನದಲ್ಲಿ 'ಅನಂತ'ಭಾವ

|
Google Oneindia Kannada News

ಬೆಂಗಳೂರು, ನವೆಂಬರ್ 12: ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಎಚ್‌ಎನ್ ಅನಂತ ಕುಮಾರ್ ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಪಕ್ಷಾತೀತವಾಗಿ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.

Recommended Video

Ananth Kumar Demise : ಅನಂತ್ ಕುಮಾರ್ ನಿಧನಕ್ಕೆ ದೇಶದ ಸಿಎಂ ಕುಮಾರಸ್ವಾಮಿ ಸೇರಿದಂತೆ ಗಣ್ಯರು ಸಂತಾಪ

ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಲ್ಲದೆ ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರವರ್ಧಮಾನಕ್ಕೆ ಬರಲು ಕಾರಣರಾದ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿದ್ದ ಅನಂತ ಕುಮಾರ್ ವೈಯಕ್ತಿಕವಾಗಿಯೂ ಪಕ್ಷ ಬೇಧ ಮರೆತು ಎಲ್ಲರೊಂದಿಗೆ ಬೆರೆಯುತ್ತಿದ್ದ ಅವರ ಗುಣ ಅವರ ನಿಧನದ ಬಳಿಕ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದೆ.

ಕರ್ನಾಟಕದ ಜನಪ್ರಿಯ ನಾಯಕ ಅನಂತ್ ಕುಮಾರ್ (59) ವಿಧಿವಶ ಕರ್ನಾಟಕದ ಜನಪ್ರಿಯ ನಾಯಕ ಅನಂತ್ ಕುಮಾರ್ (59) ವಿಧಿವಶ

ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್-ಜೆಡಿಎಸ್ ನಲ್ಲಿರುವ ಅನೇಕ ಗಣ್ಯರು ಅನಂತ ಕುಮಾರ್ ಅವರ ಜತೆಗಿನ ವೈಯಕ್ತಿಕ ಒಡನಾಟ ಅವರ ಉದಾರ ಹಾಗೂ ಸ್ನೇಹ ಗುಣವನ್ನು ಮೆಚ್ಚಿ ಕೊಂಡಾಡಿದ್ದಾರೆ. ಕರ್ನಾಟಕ ಬಿಜೆಪಿಯ ಜೋಡೆತ್ತುಗಳೆಂದೇ ಹೆಸರಾಗಿದ್ದ ಅನಂತ್ ಕುಮಾರ್ ಹಾಗೂ ಯಡಿಯೂರಪ್ಪ ನಡುವೆ ಹಲವಾರು ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ವೈಯಕ್ತಿಕವಾಗಿ ಒಬ್ಬರಿಗೊಬ್ಬರು ತುಂಬಾ ಆತ್ಮೀಯರಾಗಿದ್ದರು.

ರಾಜಕಾರಣದಲ್ಲಿ ಎದುರಾದ ಹಲವು ಸಂದಿಗ್ದ ಸನ್ನಿವೇಶಗಳು ಅವರ ವೈಯಕ್ತಿಕ ಸಂಬಂಧದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿರಲಿಲ್ಲ,ಸ್ಪರ್ಧೆ ಪ್ರತಿಸ್ಪರ್ಧೆರಾಜಕೀಯ ಮೇಲಾಟಗಳಿದ್ದರೂ ಅಂತಿಮವಾಗಿ ಒಬ್ಬರಿಗೊಬ್ಬರು ಪಕ್ಷದ ಹಿತದೃಷ್ಟಿಯಿಂದ ಹೊಂದಿಕೊಂಡೇ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರು.

ಶಾಶ್ವತವಾಗಿ ನಮ್ಮನ್ನಗಲಿದ ಸ್ನೇಹ ಜೀವಿ, ಜನಾನುರಾಗಿ ಅನಂತ್ ಕುಮಾರ್ಶಾಶ್ವತವಾಗಿ ನಮ್ಮನ್ನಗಲಿದ ಸ್ನೇಹ ಜೀವಿ, ಜನಾನುರಾಗಿ ಅನಂತ್ ಕುಮಾರ್

ಜೋಡೆತ್ತುಗಳ ಪೈಕಿ ಅನಂತ ಕುಮಾರ್ ಅಗಲಿರುವುದರಿಂದ ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಜರ್ಜರಿತರಾಗಿದ್ದಾರೆ ಈ ಕುರಿತು ಹೇಳಿಕೆ ನೀಡಿದ್ದಾರೆ.

ಕುಮಾರಸ್ವಾಮಿ ಕಂಬನಿ

ಅನಂತಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಅವರು ಜನರ ನಾಯಕರಾಗಿದ್ದರು, ಉತ್ತಮ ರಾಜಕಾರಣಿ, ದೇಶಕ್ಕೆ ಅವರ ಸೇವೆ ಅಪಾರ ಅವರ ಅಗಲುವಿಕೆ ನನಗೆ ನೋವು ತಂದಿದೆ ಎಂದು ಸಿಎಂ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

Array

ಪರಮೇಶ್ವರ ಶೋಕ ಸಂದೇಶ

ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿಧನದ ಸುದ್ದಿ ನೋವು ತರಿಸಿದೆ. ಬೆಂಗಳೂರು ದಕ್ಷಿಣದಿಂದ ಸತತವಾಗಿ ಲೋಕಸಭೆಗೆ ಆಯ್ಕೆಯಾಗಿದ್ದ ಹಿರಿಯ ರಾಜಕಾರಣಿ ಅನಂತ ಕುಮಾರ್ ಅವರು ಉತ್ತಮ ಸಂಸದೀಯ ಪಟು. ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಅನಂತ ಕುಮಾರ್ ಯಶಸ್ವಿ ರಾಜಕಾರಣಿಯಾಗಿದ್ದರು. ಇವರ ನಿಧನದ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಉಪಮುಖ್ಯಮಂತ್ರಿ ಜಿ ಪರಮೇಶ್ವರ ಕಂಬನಿ ಮಿಡಿದಿದ್ದಾರೆ.

ಅನಂತ್ ಕುಮಾರ್ ಕುಮಾರ್ ಅಗಲಿಕೆಗೆ ಮೋದಿ ಭಾವುಕ ಶ್ರದ್ಧಾಂಜಲಿ ಅನಂತ್ ಕುಮಾರ್ ಕುಮಾರ್ ಅಗಲಿಕೆಗೆ ಮೋದಿ ಭಾವುಕ ಶ್ರದ್ಧಾಂಜಲಿ

ಅನಂತಕುಮಾರ್ ಅವರ ನಿಧನಕ್ಕೆ ದೇವೇಗೌಡ ಸಂತಾಪ

ಅನಂತಕುಮಾರ್ ಅವರ ನಿಧನಕ್ಕೆ ದೇವೇಗೌಡ ಸಂತಾಪ

ಅನಂತ ಕುಮಾರ್ ನಿಧನಕ್ಕೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅನಂತ ಕುಮಾರ್ ನಾನು ಪ್ರಧಾನಿಯಾದ ಸಂದರ್ಭದಲ್ಲಿ ಮೊದಲ ಬಾರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸದಸ್ಯರಾಗಿ ಆಯ್ಕೆಯಾಗಿ ಅಂದಿನಿಂದ ಇಂದಿನವರೆಗೂ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿದ್ದರು. ನಾವೆಲ್ಲ ಒಬ್ಬ ಸೃಜನಶೀಲ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಅನಂತಕುಮಾರ್ ನಿಧನಕ್ಕೆ ಬಿಎಸ್‌ವೈ ಕಂಬನಿ

ಹಿರಿಯ ನೇತಾರ ,ನಮ್ಮ ಜೊತೆಗಾರ ಶ್ರೀ ಅನಂತಕುಮಾರ್ ಅವರ ನಿಧನವು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಆದ ಭಾರೀ ನಷ್ಟ.ಅವರನ್ನು ಕಳೆದುಕೊಂಡು ಪಕ್ಷ,ನಾಡು,ದೇಶ ಬಡವಾಗಿದೆ. ಪ್ರತಿನಿತ್ಯ ಪಕ್ಷದ ಸಂಘಟನೆಯನ್ನು ಬೆಳೆಸಲು ನಾವು ಸಮಾಲೋಚನೆ ಮಾಡುತ್ತಿದ್ದುದನ್ನು ಮರೆಯಲಾಗದು.

ರಾಜಕೀಯ ವಾಗಿ ಬಹಳ ಬೇಗ ಉನ್ನತ ಸ್ಥಾನದ ವರೆಗೂ ಏರಿದ ಅವರು ರಾಜಕೀಯವಾಗಿ ಬಹಳಷ್ಟು ಕ್ಲಿಷ್ಟ ಸಂದರ್ಭಗಳಲ್ಲಿ ಉತ್ತಮ ಸಲಹೆಗಳನ್ನು ನೀಡಿ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದರು.ಒಮ್ಮೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೂ ಅವರು ಪಕ್ಷದ ಬೆಳವಣಿಗೆಗೆ ಕಾರಣರಾಗಿದ್ದ ಅನಂತಕುಮಾರ್ ಅವರ ಕೊಡುಗೆಯನ್ನು ಮರೆಯಲಾಗದು. ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ.ಅವರ ಕುಟುಂಬಕ್ಕೆ ದುಃಖ ಭರಿಸಲು ದೇವರು ಶಕ್ತಿ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಅನಂತ ನನ್ನ ಸೋದರ, ಸ್ನೇಹಿತ, ನನ್ನ ಮಾರ್ಗದರ್ಶಿ:ರಾಜೀವ್

ಇಂದು ನನಗೆ ಅತ್ಯಂತ ದುಃಖದ ದಿನ ನನ್ನ ಸೋದರ, ಸ್ನೇಹಿತ, ಮಾರ್ಗದರ್ಶಿಯನ್ನು ನಾನು ಕಳೆದುಕೊಂಡಿದ್ದೇನೆ, ಅನಂತ ಕುಮಾರ್ ಅವರು ಇನ್ನಿಲ್ಲ, ನನ್ನ ಸಾರ್ವಜನಿಕ ಜೀವನದ ಕೆಲವೇ ಮಿತ್ರರಲ್ಲಿ ಒಬ್ಬರಾಗಿದ್ದರು ಮತ್ತು ಸಹೃದಯೀ ವ್ಯಕ್ತಿಯಾಗಿದ್ದರು. ಅವರ ಅಗಲಿಕೆ ತುಂಬಲಾರದ ನಷ್ಟ ಎಂದು ಸಂಸದ ರಾಜೀವ್ ಚಂದ್ರಶೇಖರ್ ಅನಂತ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಅನಂತ ಕುಮಾರ್ ನಿಧನಕ್ಕೆ ಅಶ್ವತ್ಥನಾರಾಯಣ ಸಂತಾಪ

ಅನಂತ ಕುಮಾರ್ ನಿಧನಕ್ಕೆ ಅಶ್ವತ್ಥನಾರಾಯಣ ಸಂತಾಪ

ಸಾರ್ವಜನಿಕ ಜೀವನದಲ್ಲಿ ಎಲ್ಲರಿಗೆ ಮಾದರಿಯಾಗಿ ಬದುಕಿದ ನಮ್ಮ ನಾಯಕರಾದ ಶ್ರೀ ಅನಂತ್ ಕುಮಾರ್ ರವರು ವಿಧಿವಶರಾಗಿರುವುದು ತೀವ್ರ ದುಃಖ ತಂದಿದೆ. ನಾವಿಂದು ಉತ್ತಮ ನಾಯಕ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಡಾ. ಸಿ ಅಶ್ವತ್ಥ ನಾರಾಯಣ.

English summary
Including former prime minister H.D.Devegowda several leaders of the state have condoled sad demise of union minister Ananth Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X