ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಬಿಎಸ್‌ವೈ ಬದಲಾವಣೆ ಗುಸುಗುಸು: ಹೈಕಮಾಂಡ್ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಬಿ.ಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಕೆಲವು ಸಚಿವರೂ ಸೇರಿದಂತೆ ಹಲವು ಶಾಸಕರು ತೀವ್ರ ಲಾಬಿ ಮಾಡುತ್ತಿದ್ದಾರೆ.

ಬಿ.ಎಸ್ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ತಮ್ಮ ಸಂಪುಟದ ಸಚಿವರೇ ಎದ್ದು ನಿಂತಿದ್ದು, ಪ್ರಮುಖವಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್, ಮುರುಗೇಶ್ ನಿರಾಣಿ ಸೇರಿದಂತೆ ಹಿರಿಯ ಶಾಸಕರಾದ ಬಸನಗೌಡ ಪಾಟೀಲ್, ಅರವಿಂದ ಬೆಲ್ಲದ್ ಈ ಬಣದಲ್ಲಿ ಗುರುತಿಸಿಕೊಂಡಿದ್ದಾರೆ.

ಬಿಜೆಪಿ ಹೈಕಮಾಂಡ್‌ನ್ನು ಭೇಟಿಯಾಗಿದ್ದಾರೆ ಎನ್ನಲಾದ ಸಚಿವ ಸಿ.ಪಿ ಯೋಗೇಶ್ವರ್, ಮುರುಗೇಶ್ ನಿರಾಣಿ ನೇತೃತ್ವದ ನಿಯೋಗಕ್ಕೆ ಬಿಜೆಪಿ ಪ್ರಮುಖರು ಯಾವುದೇ ಕಿಮ್ಮತ್ತು ನೀಡಿಲ್ಲ ಎನ್ನಲಾಗಿದೆ.

Karnataka Leadership Change: Is CP Yogeshwar behind BS Yediyurappa Leadership change

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರನ್ನು ಕೆಳಗಿಳಿಸಲು ದೆಹಲಿಯಲ್ಲಿ ಬೀಡು ಬಿಟ್ಟು, ಹೈಕಮಾಂಡ್ ಭೇಟಿ ಮಾಡಿದ್ದ ಅತೃಪ್ತರ ನಿಯೋಗಕ್ಕೆ ಬಿಜೆಪಿ ಪ್ರಮುಖರು ಬುದ್ಧಿಮಾತು ಹೇಳಿ ಕಳಿಸಿದ್ದಾರೆ ಎನ್ನಲಾಗಿದೆ. ಕೊರೊನಾ ಕಾಲದಲ್ಲಿ ಇಂತಹ ವಿಚಾರಗಳನ್ನು ದೆಹಲಿಯವರೆಗೂ ತರಬೇಡಿ, ಕ್ಷೇತ್ರದಲ್ಲಿ ಮೊದಲು ಕೊರೊನಾ ಸೋಂಕು ನಿಯಂತ್ರಿಸಿ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಹೈಕಮಾಂಡ್‌ನ ಬೆಂಬಲ ಬಿ.ಎಸ್ ಯಡಿಯೂರಪ್ಪರ ಮೇಲೆ ಇರುವವರೆಗೂ ಯಾರು, ಎಷ್ಟೇ ಪ್ರಯತ್ನ ಮಾಡಿದರೂ ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾದ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಸಿಎಂ ಯಡಿಯೂರಪ್ಪ ಬದಲಾವಣೆಗೆ ನಿರ್ದಿಷ್ಟ ಕಾರಣವಿಲ್ಲದಿದ್ದರೂ, ತೆರೆಮರೆಯಲ್ಲಿ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಸ್ವಪಕ್ಷದ ಕೆಲವು ಶಾಸಕರು ಪ್ರಯತ್ನಿಸುತ್ತಿದ್ದಾರೆ.

Karnataka Leadership Change: Is CP Yogeshwar behind BS Yediyurappa Leadership change


ಇನ್ನು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸೋತರೂ ಬಿಎಸ್‌ವೈ ಕೃಪಾಕಟಾಕ್ಷದಿಂದ ಸಚಿವ ಸ್ಥಾನ ಪಡೆದಿರುವ ಸಿ.ಪಿ ಯೋಗೇಶ್ವರ್ ಈ ಬಣದ ನೇತೃತ್ವ ವಹಿಸಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಮೂಲ ಬಿಜೆಪಿಗರ ತೀವ್ರ ವಿರೋಧದ ನಡುವೆಯೂ ಸಿಪಿವೈ ಸಚಿವ ಸ್ಥಾನ ಪಡೆದಿದ್ದರು.

ಇನ್ನು ಈ ವಿಚಾರದ ಕುರಿತು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ, ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮೆಗಾಸಿಟಿ ಕಳ್ಳ ಎಂದು ಆರೋಪಿಸಿದ್ದಾರೆ.

ಸಂಪುಟ ಸಭೆಗೆ ಹಾಜರಾಗ್ತಾರಾ ಸಿಪಿವೈ

ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ಪ್ರಮುಖ ಆಡಳಿತಾತ್ಮಕ ವಿಷಯಗಳು ಚರ್ಚೆಗೆ ಬರಲಿವೆ.

ಇನ್ನು ಮುಖ್ಯಮಂತ್ರಿ ಬದಲಾವಣೆಯ ನೇತೃತ್ವ ವಹಿಸಿಕೊಂಡಿರುವ ಸಚಿವ ಸಿ.ಪಿ ಯೋಗೇಶ್ವರ್ ಸಚಿವ ಸಂಪುಟ ಸಭೆಗೆ ಹಾಜರಾಗುತ್ತಾರಾ ಎಂಬ ಪ್ರಶ್ನೆ ಮೂಡಿದೆ.

English summary
A delegation led by Minister CP Yogeshwar has met the BJP High Command for a change of chief minister in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X