karnataka Legislative Council Election: ಪರಿಷತ್ ಚುನಾವಣೆ: ಇಂದು ಸಿಎಂ ಡಿಸಿಎಂ ದೆಹಲಿಗೆ- ವಿಮಾನದಲ್ಲೇ ಮೀಟಿಂಗ್!
ಬೆಂಗಳೂರು ಮೇ 28: ಮೇಲ್ಮನೆ ಅಭ್ಯರ್ಥಿ ಘೋಷಣೆಗೆ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ವಿಮಾನದಲ್ಲೇ ಸಭೆ ನಡೆಯುವ ಸಾಧ್ಯತೆ ಇದೆ.
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ಇಂದು ಬೆಳಗ್ಗೆ 11ಕ್ಕೆ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ.

ಜೂನ್ 13 ರಂದು ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಥಾನದ ಬಲದ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ಏಳು ಮಂದಿಯನ್ನು ಆಯ್ಕೆ ಮಾಡಲು ಅವಕಾಶವಿದೆ.
ಈ ಏಳು ಸ್ಥಾನಗಳಿಗೆ ಆಕಾಂಕ್ಷಿಗಳ ಸಂಖ್ಯೆ ವಿಪರೀತವಾಗಿರುವುದರಿಂದ ಸಂಭಾವ್ಯರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳದೆ ಉಭಯ ನಾಯಕರು ವಿಮಾನ ಹತ್ತಲಿದ್ದಾರೆ ಮತ್ತು ವಿಮಾನದಲ್ಲೇ ಈ ಬಗ್ಗೆ ಮೊದಲ ಬಾರಿಗೆ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಆಕಾಂಕ್ಷಿಗಳ ಸಂಖ್ಯೆ ಶತಕವನ್ನು ದಾಟಿದೆ. ಹೀಗಾಗಿ ಯಾವ ಯಾವ ಸಮುದಾಯಕ್ಕೆ ಹುದ್ದೆ ನೀಡಬೇಕು ಎಂಬುದನ್ನು ಮಾತ್ರ ಸಿದ್ದಪಡಿಸಿಕೊಂಡು ಉಭಯ ನಾಯಕರು ದೆಹಲಿಗೆ ತೆರಳಿದ್ದಾರೆ. ನೂರಕ್ಕೂ ಹೆಚ್ಚಿರುವ ಆಕಾಂಕ್ಷಿಗಳ ಸಂಖ್ಯೆಯನ್ನು ಜರಡಿ ಮಾಡಿ ಅಂತಿಮವಾಗಿ ಹೈಕಮಾಂಡ್ ಮುಂದೆ ಚರ್ಚೆ ಮಾಡುವ ವೇಳೆಗೆ 15 ರಿಂದ 20ರ ಪಟ್ಟಿ ಸಿದ್ಧಪಡಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಈ ಪಟ್ಟಿಯೊಂದಿಗೆ ಮಂಗಳವಾರ ಸಂಜೆ ಅಥವಾ ರಾತ್ರಿ ಹೈಕಮಾಂಡ್‌ನ ನಾಯಕರೊಂದಿಗೆ ಸಂಭವನೀಯ ಆಯ್ಕೆ ಬಗ್ಗೆ ಉಭಯ ನಾಯಕರು ಚರ್ಚಿಸುವರು ಎಂದು ಮೂಲಗಳು ಹೇಳಿವೆ.
ಯಾರೆಲ್ಲಾ ಪಕ್ಕಾ?
ಸಂಭವನೀಯರ ಪೈಕಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸಚಿವ ಬೋಸರಾಜು ಮತ್ತು ಒಕ್ಕಲಿಗರ ಪೈಕಿ ಕೆ.ಗೋವಿಂದರಾಜು ಅಥವಾ ವಿನಯ ಕಾರ್ತಿಕ್ ಅವರ ಹೆಸರು ಮಾತ್ರ ಗಟ್ಟಿಯಾಗಿ ಕೇಳಿಬರುತ್ತಿದೆ.
ಈ ಪೈಕಿ ಯತೀಂದ್ರ ಹಾಗೂ ಬೋಸರಾಜು ಅವರ ಹೆಸರು ಪಕ್ಕಾ ಎನ್ನಲಾಗುತ್ತಿದೆ. ಇನ್ನು ಒಕ್ಕಲಿಗರಲ್ಲಿ ಕೆ. ಗೋವಿಂದರಾಜು ಹಾಗೂ ವಿನಯ ಕಾರ್ತಿಕ್ ಹೆಸರು ಇದ್ದರೂ ದೆಹಲಿ ಮಟ್ಟದಲ್ಲಿ ಕೆ.ಗೋವಿಂದ ರಾಜು ಅವರು ಹೊಂದಿರುವ ಪ್ರಭಾವದ ಹಿನ್ನೆಲೆಯಲ್ಲಿ ಅವರ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ.
ಜಾತಿ ಲೆಕ್ಕಾಚಾರದ ಪ್ರಕಾರ ಹಿಂದುಳಿದವರಿಗೆ ಎರಡು, ಒಕ್ಕಲಿಗ, ಮುಸ್ಲಿಂ, ಕ್ರಿಶ್ಚಿಯನ್, ಎಸ್ಸಿ, ಎಸ್ಟಿ ಸಮುದಾಯಗಳಿಗೆ ತಲಾ ಒಂದು ಸ್ಥಾನ ದೊರೆಯಲಿದೆ. ಲಿಂಗಾಯತರಿಗೂ ಒಂದು ಸ್ಥಾನ ದೊರೆಯಲಿದೆ. ಆದರೆ ಅದು ಈಗ ಅಲ್ಲ.
ಬದಲಾಗಿ ಜಗದೀಶ್ ಶೆಟ್ಟರ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಶೀಘ್ರದಲ್ಲೇ ನಡೆಯುವ ಪ್ರತ್ಯೇಕ ಚುನಾವಣೆ ವೇಳೆ ಆ ಸ್ಥಾನವನ್ನು ಲಿಂಗಾಯತರಿಗೆ ನೀಡಲಾಗುವುದು ಎಂದು ಮೂಲಗಳು ಹೇಳಿವೆ.
ಇನ್ನೂ ಏಳು ಸ್ಥಾನಗಳ ಪೈಕಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್‌ನ ಪ್ರಮುಖ ನಾಯಕರು ಸೂಚಿಸುವ ಹೆಸರುಗಳಿಗೆ ಆಧ್ಯತೆ ದೊರೆಯಲಿದೆ. ಹೀಗಾಗಿ ಈ ನಾಯಕರು ತಮ್ಮ ಕೋಟಾ ಹೊಂದಿದ್ದಾರೆ ಎನ್ನಲಾಗುತ್ತಿದೆ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್











Click it and Unblock the Notifications