ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ದಿ ಕಾಶ್ಮೀರ್​ ಫೈಲ್ಸ್' ಚಿತ್ರ ವೀಕ್ಷಿಸಲು ಸಚಿವರು, ಶಾಸಕರಿಗೆ ಸ್ಪೀಕರ್ ಕಾಗೇರಿ ಆಹ್ವಾನ

|
Google Oneindia Kannada News

ಬೆಂಗಳೂರು, ಮಾರ್ಚ್ 14: ಸದ್ಯ ದೇಶದೆಲ್ಲೆಡೆ ಉತ್ತಮ​ ಪ್ರದರ್ಶನ ಕಾಣುತ್ತಿರುವ 'ದಿ ಕಾಶ್ಮೀರ್​ ಫೈಲ್ಸ್​' ಸಿನಿಮಾವನ್ನು ವೀಕ್ಷಿಸಲು ಕರ್ನಾಟಕದ ಸಚಿವರು, ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಈ ಬಗ್ಗೆ ಸದನದಲ್ಲಿ ಎಲ್ಲ ಸದಸ್ಯರಿಗೆ ಸ್ಪೀಕರ್ ಕಾಗೇರಿ ಆಹ್ವಾನ ನೀಡಿದ್ದಾರೆ.

ಮಂಗಳವಾರ (ಮಾ.15) ಸಂಜೆ 6.45ಕ್ಕೆ ಬೆಂಗಳೂರಿನ ಮಂತ್ರಿ ಮಾಲ್​ನಲ್ಲಿ ಸಚಿವರು, ಶಾಸಕರು 'ದಿ ಕಾಶ್ಮೀರ್​ ಫೈಲ್ಸ್​' ಸಿನಿಮಾ ವೀಕ್ಷಿಸಲಿದ್ದು, ವಿಧಾನಸಭೆ ಸಚಿವಾಲಯದಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಸಿನಿಮಾ ನೋಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಅದಕ್ಕಾಗಿ ರಾಜ್ಯ ಸರ್ಕಾರಕ್ಕೆ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ ಸಲ್ಲಿಸಿದ್ದಾರೆ.

Karnataka Legislators to Watch The Kashmir Files Movie at Mantri Mall on 15 March Evening

ವಿಪಕ್ಷ ಶಾಸಕರನ್ನು ಕೂಡ 'ದಿ ಕಾಶ್ಮೀರ್​ ಫೈಲ್ಸ್' ಚಿತ್ರ ವೀಕ್ಷಣೆಗೆ ಆಹ್ವಾನಿಸುವ ಮೂಲಕ ಸ್ಪೀಕರ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಈ ಸಿನಿಮಾದ ಬಗ್ಗೆ ದೇಶದಲ್ಲಿ ಪರ ಮತ್ತು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಡೆ ಭಾರೀ ಅಚ್ಚರಿಗೆ ಕಾರಣವಾಗಿದೆ. ನೆನ್ನೆಯಷ್ಟೇ ಈ ಸಿನಿಮಾವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಕೆಲವು ಮಂತ್ರಿಗಳು ವೀಕ್ಷಿಸಿದ್ದರು.

Karnataka Legislators to Watch The Kashmir Files Movie at Mantri Mall on 15 March Evening

'ದಿ ಕಾಶ್ಮೀರ್​ ಫೈಲ್ಸ್' ಸಿನಿಮಾ ವೀಕ್ಷಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, "ಚಿತ್ರದ ಬಗ್ಗೆ ತಕ್ಷಣವೇ ಮಾತನಾಡಲು ಸಾಧ್ಯವಾಗುತ್ತಿಲ್ಲ, ತುಂಬಾ ಭಾವುಕನಾಗಿದ್ದೇನೆ. ಕಾಶ್ಮೀರದಲ್ಲಿ ಪಂಡಿತರ ಮೇಲೆ ಯಾವ ರೀತಿ ದಾಳಿ ನಡೆಯಿತು ಎಂದು ತೋರಿಸಿದ್ದಾರೆ,'' ಎಂದಿದ್ದರು. ಆನಂತರ ರಾಜ್ಯದಲ್ಲ ತೆರಿಗೆ ವಿನಾಯತಿ ಘೋಷಣೆ ಮಾಡಿದರು.

Recommended Video

China ಬಳಿ ಡ್ರೋನ್ ಸಹಾಯ ಕೇಳಿದ Russia | Oneindia Kannada

English summary
Speaker Vishweshwar Hegde Kageri has made a special arrangement for the legislators and ministers of Karnataka to watch the movie "The Kashmir Files' on 15th March, Evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X