ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ನಿವಾಸ ಸೀಲ್ ಡೌನ್

|
Google Oneindia Kannada News

ಬೆಂಗಳೂರು, ಜೂನ್ 24: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರ ಸದಾಶಿವ ನಗರದ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ. ಅವರ ತಂದೆ, ಪತ್ನಿ ಹಾಗೂ ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ.

Recommended Video

SSLC Exam:ಪರೀಕ್ಷೆ ಬರೆಯುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಂದೇಶ ಕೊಟ್ಟ ಕುಮಾರಸ್ವಾಮಿ. | Kumarswamy

ಸ್ವತಃ ಸಚಿವರೇ ಹೋಂ ಕ್ವಾರಂಟೈನ್‍ ನಲ್ಲಿ ಇರುವುದಾಗಿ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಸುಧಾಕರ್, ಹೋಂ ಕ್ವಾರಂಟೈನ್ ಗೆ ಒಳಗಾಗುತ್ತಿರುವುದು ಇದು ಎರಡನೇ ಬಾರಿ.

ಒಬ್ಬ ವಿದ್ಯಾರ್ಥಿಗೂ ಸೋಂಕು ತಗುಲದಂತೆ ಎಚ್ಚರವಹಿಸಿ : ಸುಧಾಕರ್‌ಒಬ್ಬ ವಿದ್ಯಾರ್ಥಿಗೂ ಸೋಂಕು ತಗುಲದಂತೆ ಎಚ್ಚರವಹಿಸಿ : ಸುಧಾಕರ್‌

"ನಾಳೆಯಿಂದ ನಡೆಯಲಿರುವ SSLC ಪರೀಕ್ಷೆಗಳ ಸಿದ್ಧತೆ ಕುರಿತಂತೆ ಇಂದು ಶಿಕ್ಷಣ ಸಚಿವ ಶ್ರೀ @nimmasuresh ಅವರೊಂದಿಗೆ, ಶಿಕ್ಷಣ, ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆಗಳ ಕಾರ್ಯದರ್ಶಿಗಳು, ಬಿಬಿಎಂಪಿ ವಿಶೇಷ ಆಯುಕ್ತರು, ಸಾರ್ವಜನಿಕ ಆರೋಗ್ಯ ತಜ್ಞರು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಚರ್ಚೆ ನಡೆಸಿದೆವು" ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

Coronavirus: Karnataka Medical Education Minister Dr. Sudhakar House Seal Down

"ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. "ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ" ಎಂದು ಸಚಿವರು ಟ್ವೀಟ್ ಮಾಡಿದ್ದರು.

"ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಧಾಕರ್‌ಗೆ ಕರೆ ಮಾಡಿದ ಸಿದ್ಧರಾಮಯ್ಯ, ಪರಮೇಶ್ವರ್ಸುಧಾಕರ್‌ಗೆ ಕರೆ ಮಾಡಿದ ಸಿದ್ಧರಾಮಯ್ಯ, ಪರಮೇಶ್ವರ್

"ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ"ಎಂದು ಸಚಿವ ಸುಧಾಕರ್ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದರು.

English summary
Coronavirus: Karnataka Medical Education Minister Dr. Sudhakar House Seal Down.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X