ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ರಿಗೆ ಕೊವಿಡ್-19

|
Google Oneindia Kannada News

ಬೆಂಗಳೂರು, ಸಪ್ಟೆಂಬರ್.14: ಕರ್ನಾಟಕದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಬೆಂಗಳೂರಿನ ಹೆಬ್ಬಾಳ ರಸ್ತೆಯಲ್ಲಿರುವ ಕೊಲಿಂಬಿಯಾ ಏಷಿಯಾ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.

ನಾಲ್ಕು ದಿನಗಳಿಂದ ಸಚಿವ ಬೈರತಿ ಬಸವರಾಜ್ ಅವರು ರಾಯಚೂರು ಪ್ರವಾಸ ಮಾಡಿದ್ದರು. ಸೋಮವಾರ ಬೆಳಗ್ಗೆ ಅವರಿಗೆ ಮೈಕೆ ನೋವು ಕಾಣಿಸಿಕೊಂಡ ಹಿನ್ನೆಲೆ ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಗಾಗಿದ್ದರು. ಕೊವಿಡ್-19 ಸೋಂಕು ತಪಾಸಣೆ ವೇಳೆಯಲ್ಲಿ ಸಚಿವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅನಂತಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಕೊರೊನಾ ವೈರಸ್ ಪಾಸಿಟಿವ್ಅನಂತಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಕೊರೊನಾ ವೈರಸ್ ಪಾಸಿಟಿವ್

ಕಳೆದ 24 ಗಂಟೆಗಳಲ್ಲೇ ಕರ್ನಾಟಕದಲ್ಲಿ 8244 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 467689ಕ್ಕೆ ಏರಿಕೆಯಾಗಿದ್ದು, ಒಂದೇ ದಿನ 8865 ಸೋಂಕಿತರು ಗುಣಮುಖರಾಗಿದ್ದಾರೆ.

Karnataka Minister Bairati Basavaraj Tests Positive For Coronavirus

Recommended Video

ಗಡಿಯಲ್ಲಿ ಕೆಣಕಿದ್ದಕ್ಕೆ ತಕ್ಕ ಉತ್ತರಕೊಟ್ಟ ಭಾರತದ | Oneindia Kannada

ಮಹಾಮಾರಿಗೆ ಒಂದೇ ದಿನ 119 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆಯು 7384ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೂ 361823 ಸೋಂಕಿತರು ಗುಣಮುಖರಾಗಿದ್ದು, 98463 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ.

English summary
Karnataka Urban Development Minister Bairati Basavaraj Tests Positive For Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X