ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಸಚಿವ ಜಾರ್ಜ್
ಬೆಂಗಳೂರು, ಜುಲೈ 27 : ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಪತ್ರಕರ್ತ ಅರ್ನಬ್ ಗೋಸ್ವಾಮಿ ಹಾಗೂ 'ಟೈಮ್ಸ್ ನೌ'ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಬುಧವಾರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಐಎಎಸ್ ಅಧಿಕಾರಿ ಡಿ.ಕೆ.ರವಿ ಸಾವು ಪ್ರಕರಣದಲ್ಲಿ ಆಧಾರರಹಿತವಾಗಿ ಸುದ್ದಿ ಪ್ರಕಟಿಸಿ ನನ್ನ ಘನತೆ ಹಾಗೂ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಮೆಯೋಹಾಲ್ ನಲ್ಲಿರುವ 10ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.

ಜಾರ್ಜ್ ಅವರ ಅರ್ಜಿ ಪರಿಶೀಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್ 19ಕ್ಕೆ ಮುಂದೂಡಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, 'ಈ ಹಿಂದೆ ನಾನು ಗೃಹ ಸಚಿವನಾಗಿದ್ದೆ. ಡಿ.ಕೆ. ರವಿ ಸಾವಿನ ಪ್ರಕರಣದಲ್ಲಿ ನನ್ನ ಕೈವಾಡ ಇದೆ ಎಂದು ಅರ್ನಬ್ ಗೋಸ್ವಾಮಿ ಅವರು 'ಟೈಮ್ಸ್ ನೌ' ವಾಹಿನಿಯಲ್ಲಿ ಸುಳ್ಳು ಸುದ್ದಿ ಪ್ರಕಟಿಸಿದ್ದರು' ಎಂದರು.












Click it and Unblock the Notifications