Jobs: ಕನ್ನಡ ಮಾತೃಭಾಷೆ ಎಂಬ ಕಾರಣಕ್ಕೆ ಉದ್ಯೋಗ ನಿರಾಕರಿಸಿದ್ರೆ ಕ್ರಮ; ಶಿವರಾಜ್ ತಂಗಡಗಿ ಎಚ್ಚರಿಕೆ

ಬೆಂಗಳೂರು: ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ಗುರುತಿಸಿಕೊಂಡಿದೆ. ಈ ಹೆಗ್ಗಳಿಕೆಯ ಹಿಂದೆ ಕನ್ನಡಿಗರ ಪರಿಶ್ರಮ, ಪ್ರತಿಭೆ, ಬೌದ್ಧಿಕ ಸಾಮರ್ಥ್ಯ ಮತ್ತು ಉದ್ಯಮಶೀಲತೆಯ ಮಹತ್ವದ ಕೊಡುಗೆಯಿದೆ. ಅವರ ಉದ್ಯೊಗ ಹಕ್ಕುಗಳ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವೆಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ರಾಜಧಾನಿ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಕನ್ನಡಿಗರ ಅಪಾರ ಶ್ರಮವಿದೆ. ಅಂಥದರಲ್ಲಿ ಇತ್ತೀಚಿಗೆ ಖಾಸಗಿ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದವು. ಇದರ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್ ಮತ್ತು ಡಿಸಿಎಂ ಡಾ.ಜಿ.ಪಮರೇಶ್ವರ್ ಆದಿಯಾಗಿ ನಾಯಕರು ಪ್ರತಿಕ್ರಿಯಿಸಿದ್ದಾರೆ.

Kannadigas Employment Rights

ಸ್ವಾಭಿಮಾನದ ವಿಚಾರದಲ್ಲಿ ರಾಜಿ ಇಲ್ಲ

ಇದೀಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಎಕ್ಸ್ ಪೋಸ್‌ ಮೂಲಕ ಪ್ರತಿಕ್ರಿಯಿಸಿದ್ದು, 'ಕನ್ನಡಿಗರ ಉದ್ಯೋಗದ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಕನ್ನಡಿಗರ ಸ್ವಾಭಿಮಾನದ ವಿಚಾರದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ' ಎಂದಿದ್ದಾರೆ.

ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ಗುರುತಿಸಿಕೊಂಡಿದೆ. ಈ ಹೆಗ್ಗಳಿಕೆಯ ಹಿಂದೆ ಕನ್ನಡಿಗರ ಪರಿಶ್ರಮ, ಪ್ರತಿಭೆ, ಬೌದ್ಧಿಕ ಸಾಮರ್ಥ್ಯ ಮತ್ತು ಉದ್ಯಮಶೀಲತೆಯ ಮಹತ್ವದ ಕೊಡುಗೆಯಿದೆ. ಇಂತಹ ಕನ್ನಡಿಗರ ನೆಲದಲ್ಲಿ ಕನ್ನಡಿಗರಿಗೆ‌ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ. ಸ್ಥಳೀಯ ಪ್ರತಿಭೆಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ಕಳವಳಕಾರಿ ಸಂಗತಿ ಎಂದು ಅವರು ವಿಷಾದಿಸಿದರು.

ಕನ್ನಡ ಮಾತೃ ಭಾಷೆ ಎಂದು ಉದ್ಯೋಗ ನಿರಾಕರಿಸುವಂತಿಲ್ಲ!

ಅರ್ಹತೆ ಇಲ್ಲದೆ ಉದ್ಯೋಗ ತಿರಸ್ಕರಿಸುವುದು ಬೇರೆ, ಮಾತೃ ಭಾಷೆ ಕನ್ನಡ ಎಂಬ ಕಾರಣಕ್ಕೆ ಉದ್ಯೋಗ ನಿರಾಕರಿಸುವುದು ಬೇರೆ. ಕನ್ನಡ ಮಾತೃ ಭಾಷೆ ಎಂಬ ಕಾರಣಕ್ಕೆ ಉದ್ಯೋಗ ನಿರಾಕರಿಸುವ ಉದ್ಧಟತನವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಈ ವಿಷಯವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ಗಂಭೀರವಾಗಿ ಪರಿಗಣಿಸಿದ್ದಾರೆ. ಕರ್ನಾಟಕದ ನೆಲದಲ್ಲಿ ಕಾರ್ಯನಿರ್ವಹಿಸುವ ಯಾವುದೇ ಸಂಸ್ಥೆಯು ಕನ್ನಡಿಗರ ಪ್ರತಿಭೆ ಮತ್ತು ಸಾಮರ್ಥ್ಯವನ್ನು ನಿರ್ಲಕ್ಷ್ಯ ಮಾಡಬಾರದು ಎಂದು ತಿಳಿಸಿದ್ದಾರೆಂದು ಹೇಳಿದರು.

ಕನ್ನಡಿಗರಿಗೆ ನ್ಯಾಯಯುತ ಉದ್ಯೋಗಾವಕಾಶಗಳು ದೊರೆಯಬೇಕು. ಅರ್ಹತೆ, ಕೌಶಲ್ಯ ಮತ್ತು ಪ್ರತಿಭೆಗೆ ತಕ್ಕ ಮನ್ನಣೆ ಸಿಗಬೇಕು. ಕನ್ನಡ ಮಾತೃ ಭಾಷೆ ಎಂಬ ಕಾರಣಕ್ಕೆ ಯಾವುದೇ ಕಂಪೆನಿ ಉದ್ಯೋಗ ನಿರಾಕರಿಸಿದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ.

ಬೆಂಗಳೂರಿನಲ್ಲಿರುವ ಯಾವುದೇ ಕಂಪೆನಿಯು ನಿಜವಾಗಿಯೂ ಈ ರೀತಿ ನಡೆದುಕೊಂಡರೆ ಕನ್ನಡಿಗರು ನೀವು ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಸಬಹುದು. ಕನ್ನಡದ ನೆಲದಲ್ಲಿ ಕನ್ನಡಿಗರ ಪ್ರತಿಭೆಗೆ ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂದು ಹೇಳಿದರು.

ಡಿಸಿಎಂ ಪರಮೇಶ್ವರ್ ಹೇಳಿದ್ದೇನು?

ರಾಜ್ಯ ಸರ್ಕಾರದ ಸಹಕಾರದೊಂದಿಗೆ ಇಲ್ಲಿನ ನೀರು, ವಿದ್ಯುತ್, ಜಾಗ ಪಡೆದುಕೊಂಡು ಕೈಗಾರಿಕೆಗಳನ್ನು ನಿರ್ಮಿಸುವ ಮಾಲೀಕರು, ಕಂಪನಿಗಳು ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಅರ್ಹ ಕನ್ನಡಿಗರಿಗೆ ಉದ್ಯೋಗ ಕೊಡುವುದು ಉದ್ಯಮಿಗಳ ಜವಾಬ್ದಾರಿಯಾಗಿದೆ. ಇದನ್ನು ಅರಿತು ನಡೆಯಬೇಕು. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ಸೋಮವಾರ ಪ್ರತಿಕ್ರಿಯಿಸಿದ್ದಾರೆ.2

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+