ಹೃದಯಾಘಾತದಿಂದ ವಿಧಾನಪರಿಷತ್ ಸದಸ್ಯ ಅಪ್ಸರ್ ಅಗಾ ನಿಧನ
Recommended Video

ಬೆಂಗಳೂರು, ಜೂನ್ 09: ವಿಧಾನಪರಿಷತ್ ಸದ್ಯ ಸಯ್ಯದ್ ಮುದೀರ್ ಅಗಾ(ಅಪ್ಸರ್ ಅಗಾ)(67) ಹೃದಯಾಘಾತದಿಂದ ಜೂನ್ 08 ರ ಮಧ್ಯರಾತ್ರಿ ನಿಧನರಾಗಿದ್ದಾರೆ.
ನಿನ್ನೆ ರಾತ್ರಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾದರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ರಾಮನಗರದ ದೊಡ್ಡ ಮಸೀದಿ ನಿವಾಸಿಯಾಗಿದ್ದ ಇವರು, ಜೆಡಿಎಸ್ ನಿಂದ ವಿಧಾನಪರಿಷತ್ತಿಗೆ 2012 ಜೂನ್ 18 ರಂದು ಆಯ್ಕೆಯಾಗಿದ್ದರು. ಜೆಡಿಎಸ್ನ ಟಿ.ಎ. ಶರವಣ ಅವರೊಂದಿಗೆ ಎಂಎಲ್ಸಿಯಾಗಿ ಆಯ್ಕೆಯಾಗಿದ್ದ ಅವರ ಅಧಿಕಾರಾವಧಿ ಇದೇ ಜೂನ್ 17 ರಂದು ಮುಕ್ತಾಯವಾಗುತ್ತಿತ್ತು.
ಅವರ ನಿಧನಕ್ಕೆ ನಾಡಿನ ಗಣ್ಯ ವರ್ಗ ಕಂಬನಿ ಮಿಡಿದಿದೆ. ಇಂದು ಮಧ್ಯಾಹ್ನ 3 ಗಂಟೆಗೆ ರಾಮನಗರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸೇರಿದಂತೆ ಹಲವು ನಾಯಕರು ಅಂತಿಮ ದರ್ಶನದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ









Click it and Unblock the Notifications