"ಇಂಥ ಸಂಸದರನ್ನು ಆಯ್ಕೆ ಮಾಡಿದ್ದಕ್ಕೆ ಚಪ್ಪಲಿಯಲ್ಲಿ ಹೊಡೆದುಕೊಳ್ಳಬೇಕು"
ಬೆಂಗಳೂರು, ಅಕ್ಟೋಬರ್ 3: "ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನರಿಗೆ ಸಹಾಯ ಮಾಡಲು ಮುಂದಾಗದೇ ಇರುವಂತಹ ಸಂಸದರನ್ನು ಆಯ್ಕೆ ಮಾಡಿದ್ದಕ್ಕೆ ನಮ್ಮ ನಾವೇ ಚಪ್ಪಲಿ ತಗೆದುಕೊಂಡು ಹೊಡೆದುಕೊಳ್ಳಬೇಕು" ಎಂದು ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದಶಕ ಶಂಕರ ಬಿದರಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಗರದ ಭಾಷ್ಯಂ ಸರ್ಕಲ್ ನಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಳೆದ 70 ವರ್ಷಗಳಲ್ಲಿ ಈ ರೀತಿಯ ಪ್ರವಾಹ ಯಾವತ್ತೂ ಆಗಿಲ್ಲ. ಉತ್ತರ ಕರ್ನಾಟಕ ಜನರ ಪ್ರವಾಹದಿಂದ ನಲುಗಿಹೋಗಿದ್ದಾರೆ. ಪ್ರವಾಹವಾಗಿ 60 ದಿನಗಳು ಕಳೆದರೂ ಕೇಂದ್ರದಿಂದ ಯಾವುದೇ ಪರಿಹಾರ ಬಂದಿಲ್ಲ. ಇಷ್ಟು ದಿನಗಳು ಕಳೆದರೂ ಪರಿಹಾರ ನೀಡದೆ ಕೇಂದ್ರ ಸರಕಾರ ಏನು ಮಾಡುತ್ತಿದೆ? ನಮ್ಮ ಸಂಸದರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಉತ್ತರ ಕರ್ನಾಟಕದ ಜನರು ಮುಗ್ದರು. ಕಳೆದ 20 ವರ್ಷಗಳಿಂದ ಒಂದು ಪಕ್ಷಕ್ಕೆ ತಮ್ಮ ನಿಷ್ಟೆಯನ್ನು ತೋರಿಸುತ್ತಾ ಬಂದಿದ್ದಾರೆ. ಆದರೆ, ಇಂತಹ ಆಪತ್ತಿನ ಸಮಯದಲ್ಲಿ ಯಾವುದೇ ಸಹಾಯವನ್ನು ಮಾಡದ ಸಂಸದರನ್ನು ಆಯ್ಕೆ ಮಾಡಿದ್ದು ನಮ್ಮ ತಪ್ಪಾಗಿ ಪರಿಣಮಿಸಿದೆ. ಇಂತಹ ಸಂಸದರನ್ನು ಆಯ್ಕೆ ಮಾಡಿದ್ದಕ್ಕೆ ನಾವೇ ನಮ್ಮ ಚಪ್ಪಲಿಯಲ್ಲಿ ಹೊಡೆದುಕೊಳ್ಳುವಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ
ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ - ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಬದುಕು ಬರ್ಬರವಾಗಿದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ. ಆದರೆ ಉತ್ತರ ಭಾರತದ ಬಿಹಾರದಲ್ಲಿ ಉಂಟಾದ ಪ್ರವಾಹಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದೆ. ನೆರವು ನೀಡುವ ಭರವಸೆಯನ್ನು ನೀಡಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ನೈತಿಕ ಬೆಂಬಲ ನೀಡಿದ್ದಾರೆ. ಆದರೆ ಕರ್ನಾಟಕವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ.

ಸರ್ಕಾರದ ಈ ಮಲತಾಯಿ ಧೋರಣೆ
ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸುತ್ತದೆ. ಈ ಧೋರಣೆ ವಿರೋಧಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ತಿಳಿಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ತಮ್ಮ ಆಕ್ರೋವ್ಯಕ್ತಪಡಿಸಿದರು. ರಾಜಾಜಿನಗರ ಗ್ರೌಂಡ್ ನಿಂದ ಹೊರಟ ಪ್ರತಿಭಟನಾಕಾರರು ಪ್ರೀಡಂ ಪಾರ್ಕನಲ್ಲಿ ತಮ್ಮ ಪ್ರತಿಭಟನೆಯನ್ನು ಸಮಾಪ್ತಿಗೊಳಿಸಿದರು.

ಕರ್ನಾಟಕ ಮರೆತಿರುವ ಮೋದಿ
ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ - ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಬದುಕು ಬರ್ಬರವಾಗಿದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ.
ಆದರೆ ಉತ್ತರ ಭಾರತದ ಬಿಹಾರದಲ್ಲಿ ಉಂಟಾದ ಪ್ರವಾಹಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದೆ. ನೆರವು ನೀಡುವ ಭರವಸೆಯನ್ನು ನೀಡಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ನೈತಿಕ ಬೆಂಬಲ ನೀಡಿದ್ದಾರೆ. ಆದರೆ ಕರ್ನಾಟಕವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ.

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳು
ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸಿ, 9.30ಕ್ಕೆ ರಾಜಾಜಿನಗರದ ಬಾಷ್ಯಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಲ್ಲಿಂದ ರಾಮಮಂದಿರ ಮಾರ್ಗವಾಗಿ ಫ್ರೀಡಂ ಪಾರ್ಕವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಶಂಕರ್ ಬಿದರಿ ಚಾಲನೆ ನೀಡಿದರು. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಹಲವಾರು ಸಂಘ ಸಂಸ್ಥೆಗಳ ಸಾವಿರಾರು ಜನ ಸದಸ್ಯರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications