• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ಇಂಥ ಸಂಸದರನ್ನು ಆಯ್ಕೆ ಮಾಡಿದ್ದಕ್ಕೆ ಚಪ್ಪಲಿಯಲ್ಲಿ ಹೊಡೆದುಕೊಳ್ಳಬೇಕು"

|

ಬೆಂಗಳೂರು, ಅಕ್ಟೋಬರ್‌ 3: "ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನರಿಗೆ ಸಹಾಯ ಮಾಡಲು ಮುಂದಾಗದೇ ಇರುವಂತಹ ಸಂಸದರನ್ನು ಆಯ್ಕೆ ಮಾಡಿದ್ದಕ್ಕೆ ನಮ್ಮ ನಾವೇ ಚಪ್ಪಲಿ ತಗೆದುಕೊಂಡು ಹೊಡೆದುಕೊಳ್ಳಬೇಕು" ಎಂದು ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದಶಕ ಶಂಕರ ಬಿದರಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದ ಭಾಷ್ಯಂ ಸರ್ಕಲ್‌ ನಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸಿ ಆಯೋಜಿಸಿದ್ದ ಬೃಹತ್‌ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿಶೇಷ: ಕೃಷಿಕರಿಗೆ, ನಾಗರಿಕರಿಗೆ ಜಲತಜ್ಞ ದೇವರಾಜ್ ಕೊಟ್ಟ ಎಚ್ಚರಿಕೆ

ಕಳೆದ 70 ವರ್ಷಗಳಲ್ಲಿ ಈ ರೀತಿಯ ಪ್ರವಾಹ ಯಾವತ್ತೂ ಆಗಿಲ್ಲ. ಉತ್ತರ ಕರ್ನಾಟಕ ಜನರ ಪ್ರವಾಹದಿಂದ ನಲುಗಿಹೋಗಿದ್ದಾರೆ. ಪ್ರವಾಹವಾಗಿ 60 ದಿನಗಳು ಕಳೆದರೂ ಕೇಂದ್ರದಿಂದ ಯಾವುದೇ ಪರಿಹಾರ ಬಂದಿಲ್ಲ. ಇಷ್ಟು ದಿನಗಳು ಕಳೆದರೂ ಪರಿಹಾರ ನೀಡದೆ ಕೇಂದ್ರ ಸರಕಾರ ಏನು ಮಾಡುತ್ತಿದೆ? ನಮ್ಮ ಸಂಸದರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

Exclusive: 'ಪ್ರಧಾನಿ ನಿಧಿ'ಯೇ ಖೋತಾ ಆಗಿರುವಾಗ ಪ್ರವಾಹ ಪರಿಹಾರ ನೀಡೋಕೆ ಹೇಗೆ ಸಾಧ್ಯ?

ಉತ್ತರ ಕರ್ನಾಟಕದ ಜನರು ಮುಗ್ದರು. ಕಳೆದ 20 ವರ್ಷಗಳಿಂದ ಒಂದು ಪಕ್ಷಕ್ಕೆ ತಮ್ಮ ನಿಷ್ಟೆಯನ್ನು ತೋರಿಸುತ್ತಾ ಬಂದಿದ್ದಾರೆ. ಆದರೆ, ಇಂತಹ ಆಪತ್ತಿನ ಸಮಯದಲ್ಲಿ ಯಾವುದೇ ಸಹಾಯವನ್ನು ಮಾಡದ ಸಂಸದರನ್ನು ಆಯ್ಕೆ ಮಾಡಿದ್ದು ನಮ್ಮ ತಪ್ಪಾಗಿ ಪರಿಣಮಿಸಿದೆ. ಇಂತಹ ಸಂಸದರನ್ನು ಆಯ್ಕೆ ಮಾಡಿದ್ದಕ್ಕೆ ನಾವೇ ನಮ್ಮ ಚಪ್ಪಲಿಯಲ್ಲಿ ಹೊಡೆದುಕೊಳ್ಳುವಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ

ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ

ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ - ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಬದುಕು ಬರ್ಬರವಾಗಿದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ. ಆದರೆ ಉತ್ತರ ಭಾರತದ ಬಿಹಾರದಲ್ಲಿ ಉಂಟಾದ ಪ್ರವಾಹಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದೆ. ನೆರವು ನೀಡುವ ಭರವಸೆಯನ್ನು ನೀಡಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ನೈತಿಕ ಬೆಂಬಲ ನೀಡಿದ್ದಾರೆ. ಆದರೆ ಕರ್ನಾಟಕವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ.

ಸರ್ಕಾರದ ಈ ಮಲತಾಯಿ ಧೋರಣೆ

ಸರ್ಕಾರದ ಈ ಮಲತಾಯಿ ಧೋರಣೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸುತ್ತದೆ. ಈ ಧೋರಣೆ ವಿರೋಧಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ತಿಳಿಸಿದರು. ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ತಮ್ಮ ಆಕ್ರೋವ್ಯಕ್ತಪಡಿಸಿದರು. ರಾಜಾಜಿನಗರ ಗ್ರೌಂಡ್‌ ನಿಂದ ಹೊರಟ ಪ್ರತಿಭಟನಾಕಾರರು ಪ್ರೀಡಂ ಪಾರ್ಕನಲ್ಲಿ ತಮ್ಮ ಪ್ರತಿಭಟನೆಯನ್ನು ಸಮಾಪ್ತಿಗೊಳಿಸಿದರು.

ಪರಿಹಾರ ಸಿಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಮೂಡಿಗೆರೆ ರೈತ

ಕರ್ನಾಟಕ ಮರೆತಿರುವ ಮೋದಿ

ಕರ್ನಾಟಕ ಮರೆತಿರುವ ಮೋದಿ

ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಮನೆ - ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಬದುಕು ಬರ್ಬರವಾಗಿದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ.

ಆದರೆ ಉತ್ತರ ಭಾರತದ ಬಿಹಾರದಲ್ಲಿ ಉಂಟಾದ ಪ್ರವಾಹಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದೆ. ನೆರವು ನೀಡುವ ಭರವಸೆಯನ್ನು ನೀಡಿದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ನೈತಿಕ ಬೆಂಬಲ ನೀಡಿದ್ದಾರೆ. ಆದರೆ ಕರ್ನಾಟಕವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ.

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳು

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳು

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸಿ, 9.30ಕ್ಕೆ ರಾಜಾಜಿನಗರದ ಬಾಷ್ಯಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಲ್ಲಿಂದ ರಾಮಮಂದಿರ ಮಾರ್ಗವಾಗಿ ಫ್ರೀಡಂ ಪಾರ್ಕವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಶಂಕರ್ ಬಿದರಿ ಚಾಲನೆ ನೀಡಿದರು. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಹಲವಾರು ಸಂಘ ಸಂಸ್ಥೆಗಳ ಸಾವಿರಾರು ಜನ ಸದಸ್ಯರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಳಂಬ; ಅ.3ಕ್ಕೆ ಪ್ರತಿಭಟನೆ

English summary
"Karnataka MPs fail to bring Flood relief fund to Flood hit Karnataka especially North Karnataka region, Public who elected them should be ashmed of themselves" said Former Police Commissioner Shankar Bidari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X