ನಂದಿನಿ ಬ್ರಾಂಡ್ ಅಮೂಲ್‌ಗೆ ಸವಾಲಾಗಿ ನಿಲ್ಲಲಿದೆ: ಕಾಂಗ್ರೆಸ್ ಬೇಡದ ವಿಚಾರಕ್ಕಾಗಿ ವಾದಿಸುತ್ತಿದೆ: ಸಿಎಂ ಬೊಮ್ಮಾಯಿ
ಬೆಂಗಳೂರು, ಏಪ್ರಿಲ್ 23: ರಾಜ್ಯದಲ್ಲಿ ನಾನು ಸಿಎಂ ಆದ ಮೇಲೆ ಎರಡು ಮೆಗಾ ಹಾಲಿನ ಡೈರಿ ಸ್ಥಾಪನೆ ಮಾಡಿದ್ದೇನೆ. ಬಿಜೆಪಿ ಕಾರ್ಯಗಳಿಂದಲೇ ಕರ್ನಾಟಕದ 'ನಂದಿನಿ' ಬ್ರಾಂಡ್ ಗುಜರಾತಿನ 'ಅಮುಲ್' ಗೆ ಸವಾಲಾಗಿ ನಿಲ್ಲಲಿದೆ. ಹೀಗಿದ್ದರೂ ವಿರೋಧ ಪಕ್ಷದವರು ಜನರಿಗೆ ಬೇಡದ ವಿಷಯಗಳನ್ನು ಮುಂದಿಟ್ಟುಕೊಂಡು ವಾದ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಂದಿನಿಯು ಅಮುಲ್ ಅನ್ನು ಮೀರಿಸುತ್ತದೆ. ಕಾಂಗ್ರೆಸ್ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕಾಲದಲ್ಲಿ 65 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು, ನಮ್ಮ ಅವಧಿಯಲ್ಲಿ 85 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದೆ.

ಅಮುಲ್ ಗೆ ವಿರೋಧ ಮಾಡಿದವರು ಸಿದ್ದರಾಮಯ್ಯ. ಅವರ ಅವಧಿಯಲ್ಲಿ ಅಮುಲ್ ಇದ್ದಾಗ ಯಾವುದೇ ವಿರೋಧ ಮಾಡಲಿಲ್ಲ. ಕೆಲವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರು ನೀರು, ಹಾಲು ಸೇರಿದಂತೆ ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದು, ಹತಾಶಾರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮೇ 13ರಂದು ಜನ ಬಿಜೆಪಿಗೆ ಆಶೀರ್ವಾದ
ರಾಜ್ಯದ ನಾಡಿಮಿಡಿತವನ್ನು ಅರಿತ ಬಿಜೆಪಿ ಬಹುಮತದಿಂದ ಗೆದ್ದು ಬರಲಿದೆ. ಬಿಜೆಪಿ ಸರ್ಕಾರ ಸಾಮಾಜಿಕ ಆರ್ಥಿಕ ಬದಲಾವಣೆಯ ಪ್ರಯತ್ನ ಮಾಡಿದ್ದೇವೆ. ಕರ್ನಾಟಕಕ್ಕೆ ನವ ರೂಪ ನೀಡುವ ಚಿಂತನೆ ಬಿಜೆಪಿಗೆ ಇದೆ. ಥೀಮ್ ಸಿಟಿಗಳು, ಮಾದರಿ ಗ್ರಾಮಗಳು, ಡಿಜಿಟಲೈಸೇಷನ್, ಜನರ ಸುತ್ತ ಅಭಿವೃದ್ಧಿ ಆಗುತ್ತಿದೆ ಹಾಗೂ ಜನರು ಖುಷಿಯಾಗಿರುವಂತೆ ನೋಡಿಕೊಳ್ಳಲಾಗುವುದು ಎಂದರು.
ಮೂವತ್ತು ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಸಣ್ಣ ಪುಟ್ಟ ಚುನಾವಣೆಗಳನ್ನು ಎದುರಿಸಿದ್ದೇನೆ. ಮೇ 13 ರಂದು ಎಲ್ಲರೂ ನಮಗೆ ಅಭಿನಂದನೆ ಸಲ್ಲಿಸುತ್ತಾರೆ. ಕೋವಿಡ್ ಸಂದರ್ಭದಿಂದ ಹಿಡಿದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಎಂದು ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

40% ಭ್ರಷ್ಟಾಚಾರ ಆರೋಪ: ವಿಪಕ್ಷಗಳ ಕೈವಾಡ
ಬಿಜೆಪಿ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ತಂದಿದೆ. 40ಪರ್ಸೆಂಟ್ ಬಗ್ಗೆ ಆರೋಪ ಮಾಡಿರುವ ಗುತ್ತಿಗೆ ಸಂಘದವರು ಯಾವುದೇ ದಾಖಲೆ ಕೊಡಲಿಲ್ಲ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯಾಗಿ ಜೈಲಿಗೆ ಹೋಗಿ ಬಂದರು. ಅವರ ಹಿಂದೆ ಪ್ರತಿಪಕ್ಷದ ಕೈವಾಡ ಇದೆ. ನಾವು ಟೆಂಡರ್ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ತಂದಿದ್ದೇವೆ.
ಸಿದ್ದರಾಮಯ್ಯವರಿದ್ದಾಗ ಅಂದಿನ ಸರ್ಕಾರದಲ್ಲಿ ಶೇಕಡಾ 60ಪರ್ಸೆಂಟ್ ಕಾಮಗಾರಿಗೆ ಒಪ್ಪಿಗೆ ನೀಡುತ್ತಿದ್ದರು. ಅದರ ಅರ್ಥ ಏನು? ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ಪ್ರಕರಣಗಳು ನಡೆದವು, ಆದರೆ, ಅದನ್ನು ಎಸಿಬಿಯಲ್ಲಿ ಹಾಕಿ ಎಲ್ಲದಕ್ಕೂ ಬಿ ರಿಪೋರ್ಟ್ ಪಡೆದರು. ಆಗ ಲೊಕಾಯುಕ್ತ ಇದ್ದಿದ್ದರೆ, ಅವಾಗಲೇ ಪ್ರಕರಣಗಳು ಅವರ ವಿರುದ್ದ ದಾಖಲಾಗುತ್ತಿದ್ದವು ಎಂದು ವಿವರಿಸಿದರು.
ನಾನು ಮಾಡಾಳು ವಿರುಪಾಕ್ಷಪ್ಪ ಪ್ರಕರಣವನ್ನು ಸಮರ್ಥಿಸಿಕೊಳ್ಳುತ್ತಿಲ್ಲ. ನಾವು ಲೋಕಾಯುಕ್ತವನ್ನು ಬಲಗೊಳಿಸಿದ್ದೇವೆ. ಬಿಜೆಪಿಯ ಮಾಜಿ ಸಿಎಂ ಮತ್ತು ಮಾಜಿ ಡಿಸಿಎಂ ಪಕ್ಷ ತೊರೆದಿದ್ದು ದುರ್ದೈವ. ಅವರಿಗೆ ಪಕ್ಷ ಬೇರೆ ಅವಕಾಶ ಕಲ್ಪಿಸುವ ಭರವಸೆ ನೀಡಿಲಾಗಿತ್ತು. ನಾವು ಎರಡೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದರು.
ಸಿಎಂ ಯಾರೆಂಬುದು ಹೈ ಕಮಾಂಡ್ಗೆ ಬಿಟ್ಟದ್ದು
ಈ ಬಾರಿ ಲಿಂಗಾಯತರ ಜೊತೆಗೆ ಬೇರೆ ಸಮುದಾಯಗಳ ಮತಗಳನ್ನೂ ಹೆಚ್ಚಿಗೆ ಪಡೆಯುತ್ತೇವೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಿಎಂ ಯಾರು ಆಗುತ್ತಾರೆ ಎಂದು ನಮ್ಮ ಹೈ ಕಮಾಂಡ್ ನಿರ್ಧರಿಸುತ್ತದೆ. ನನ್ನ ಕೆಲಸ ಪಕ್ಷವನ್ನು ಅಧಿಕಾರಕ್ಕೆ ತರುವುದು. ಕಾಂಗ್ರೆಸ್ ನಲ್ಲಿ ತೀರ್ಮಾನಗಳನ್ನು ಕುಟುಂಬದಿಂದ ತೆಗೆದುಕೊಳ್ಳುತ್ತಾರೆ. ಪಕ್ಷದಿಂದ ಅಲ್ಲ. ಇಂದಿರಾಗಾಂಧಿ ಕಾಲದಿಂದ ದೆಹಲಿಯಲ್ಲಿಯೇ ನಿರ್ಧಾರ ಆಗುತ್ತಿತ್ತು. ನಮ್ಮದು ಪ್ರಜಾಪ್ರಭುತ್ವ ಮಾದರಿಯಲ್ಲಿ ಎಲ್ಲವೂ ನಿರ್ಧಾರವಾಗುತ್ತದೆ ಎಂದು ತಿಳಿಸಿದರು.
2018ರಲ್ಲಿ ಫಲಿತಾಂಶಕ್ಕು ಮುನ್ನ ಕಾಂಗ್ರೆಸ್ ನವರು ದೇವೇಗೌಡರ ಮನೆಯ ಬಾಗಿಲಿಗೆ ಹೋಗಿದ್ದರು. ನಾವು ಯಾರ ಜೊತೆಗೂ ಹೊಂದಾಣಿಕೆ ಮಾಡುವುದಿಲ್ಲ. ಕಾಂಗ್ರೆಸ್ ಜೊತೆಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಪ್ರತಿ ದಿನ ಇಬ್ಬರೂ ಬಿಜೆಪಿಯನ್ನು ಟಾರ್ಗೆಟ್ ಮಾಡುತ್ತಾರೆ. ಕಾಂಗ್ರೆಸ್ ನ ಮೂಲ ಮತದಾರರು ಬಿಜೆಪಿ ಕಡೆಗೆ ವಾಲುತ್ತಾರೆ. ಎಸ್ಸಿ ಎಸ್ಟಿ, ಒಬಿಸಿ ಬಿಜೆಪಿ ಕಡೆ ಒಲವು ತೋರಿಸುತ್ತಿದ್ದಾರೆ.
ಹಲಾಲ್-ಹಿಜಾಬ್ ಚುನಾವಣೆ ವಿಷಯವೇ ಅಲ್ಲ
ಕಾಂಗ್ರೆಸ್ ಕಳೆದ ಐವತ್ತು ವರ್ಷದಿಂದ ಯಾವುದೇ ಲಿಂಗಾಯತರನ್ನು ಸಿಎಂ ಮಾಡಲಿಲ್ಲ. ವೀರೇಂದ್ರ ಪಾಟೀಲರನ್ನು ಯಾವುದೇ ಗೌರವ ನೀಡದೆ ಅವರನ್ನು ಸಿಎಂ ಸ್ಥಾನದಿಂದ ತೆಗೆದು ಹಾಕಿದರು. ಚುನಾವಣೆ ಬಂದಾಗ ಕಾಂಗ್ರೆಸ್ ಲಿಂಗಾಯತರ ಜಪ ಮಾಡುತ್ತಾರೆ. ಅನೇಕ ರಾಜ್ಯಗಳಲ್ಲಿ ಹೀಗೆ ಮಾಡಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಕೆಲವು ಲಿಂಗಾಯತ ನಾಯಕರು ಶಿಕ್ಷಣ ಕ್ಷೇತ್ರದಲ್ಲಿ ಇದ್ದಾರೆ ಎನ್ನುವ ಕಾರಣಕ್ಕೆ ಅವಕಾಶ ಕಲ್ಪಿಸಿದ್ದಾರೆ ಎಂದರು.
ಹಲಾಲ್, ಹಿಜಾಬ್, ಈಗ ಚುನಾವಣಾ ವಿಷಯವೇ ಅಲ್ಲ. ಈಗ ಎಲ್ಲವೂ ಮುಗಿದು ಹೊಗಿದೆ ರಾಜ್ಯದ ಜನರೇ ಅದನ್ನು ಮರೆತಿದ್ದಾರೆ. ಕರ್ನಾಟಕದಲ್ಲಿ ಎಲ್ಲ ಸಮುದಾಯಗಳು ಸೌಹಾರ್ದತೆಯಿಂದ ಇವೆ. ನಾವು ರಾಜ್ಯದಲ್ಲಿ ಆರು ಹೊಸ ನಗರಗಳ ನಿರ್ಮಾಣ ಮಾಡಲು ತೀರ್ಮಾನಿಸಿದ್ದೇವೆ. ಎಂದು ಬಿಜೆಪಿ ಕಾರ್ಯಸಾಧನೆ ಬಗ್ಗೆ ಅವರು ಹೇಳಿದರು.
-
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications