ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರೋನಾ ವೈರಸ್ ಕುರಿತು ತೀವ್ರ ನಿಗಾ: ಮುಖ್ಯಮಂತ್ರಿ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಮಾರ್ಚ್ 10: 'ರಾಜ್ಯ ಸರ್ಕಾರವು ಕೊರೊನಾ ವೈರಸ್ ವಿಷಯದ ಕುರಿತು ತೀವ್ರ ನಿಗಾ ವಹಿಸಿದ್ದು, ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ' ಎಂದು ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ವಿದೇಶಗಳಲ್ಲಿ ಮೃತ್ಯನರ್ತನ ಮಾಡಿದ್ದ ಕೊರೊನಾ ಭಾರತಕ್ಕೂ ಕಾಲಿಟ್ಟಿತ್ತು. ಈಗ ಕರ್ನಾಟಕದಲ್ಲಿ ಕೊರೊನಾ ಕೇಸ್ ಪತ್ತೆಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಸಚಿವ ಡಾ ಸುಧಾಕರ್ ಹಲವು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಮೊದಲ ಕೊರೊನಾವೈರಸ್ ಕೇಸ್ ಪತ್ತೆಕರ್ನಾಟಕದಲ್ಲಿ ಮೊದಲ ಕೊರೊನಾವೈರಸ್ ಕೇಸ್ ಪತ್ತೆ

ಇದೀಗ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಟ್ವೀಟ್ ಮಾಡಿ ಜನರು ಊಹಾಪೋಹಗಳಿಂದ ದೂರವಿರಬೇಕು ಎಂದಿದ್ದಾರೆ. ''ಕೊರೊನಾ ವೈರಸ್ ವಿಷಯವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಸಲಹೆಗಳನ್ನು ತಪ್ಪದೆ ಪಾಲಿಸಿ, ಊಹಾಪೋಹಗಳು ಮತ್ತು ತಪ್ಪು‌ ಮಾಹಿತಿಗಳಿಂದ ದೂರವಿರಿ ಎಂದು ಮನವಿ ಮಾಡಿರುವ ಮುಖ್ಯಮಂತ್ರಿಗಳು, ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಸಮೀಪದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆಯುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ'.

CM Yediyurappa Reaction About Coronavirus

ಭಾರತದಲ್ಲಿ ಸುಮಾರು 47ಕ್ಕೂ ಅಧಿಕ ಕೊರೊನಾ ಕೇಸ್ ದಾಖಲಾಗಿದ್ದು, ಕರ್ನಾಟಕದಲ್ಲಿ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಅಮೆರಿಕಾದಿಂದ ಬೆಂಗಳೂರಿಗೆ ಬಂದಿದ್ದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಭಾರತದಲ್ಲಿ ಕೊರೊನಾ ಪೀಡಿತ ದಂಪತಿ ಮೇಲೆ anti-HIV ಡ್ರಗ್ಸ್ ಪ್ರಯೋಗ ಭಾರತದಲ್ಲಿ ಕೊರೊನಾ ಪೀಡಿತ ದಂಪತಿ ಮೇಲೆ anti-HIV ಡ್ರಗ್ಸ್ ಪ್ರಯೋಗ

40 ವರ್ಷದ ಟೆಕ್ಕಿಯಲ್ಲಿ ಕೊರೊನಾ ಖಚಿತವಾಗುತ್ತಿದ್ದಂತೆ, ಆತನ ಪತ್ನಿ ಮತ್ತು ಮಗು ಹಾಗೂ ಕಾರು ಚಾಲಕನ್ನು ಪ್ರತ್ಯೇಕ ಕೊಠಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಇನ್ನು ಕರ್ನಾಟಕದಲ್ಲಿ 982ಕ್ಕೂ ಹೆಚ್ಚು ಜನರಿಗೆ ಕೊರೊನಾ ತಪಾಸಣೆ ಮಾಡಲಾಗಿದ್ದು, 12 ಜನರ ಮೇಲೆ ತೀವ್ರ ನಿಗಾವಹಿಸಲಾಗಿದೆ.

English summary
Karnataka chief minister BS Yediyurappa said 'state government is already taken all precautions against coronavirus'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X