• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವೀರೇನ್ ಖನ್ನಾ ಮನೆಯಲ್ಲಿ ಪೊಲೀಸ್ ಸಮವಸ್ತ್ರ ಪತ್ತೆ!

|

ಬೆಂಗಳೂರು, ಸೆಪ್ಟೆಂಬರ್ 08: ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಆರೋಪಿ ವೀರೇನ್ ಖನ್ನಾ ಮನೆ ಮೇಲೆ ದಾಳಿ ಮಾಡಿದ್ದಾರೆ. ದೆಹಲಿಯಲ್ಲಿ ಬಂಧಿತನಾದ ವೀರೇನ್ ಖನ್ನಾ ಸಿಸಿಬಿ ಪೊಲೀಸರ ವಶದಲ್ಲಿದ್ದಾನೆ.

   IPL 2020 ಈ ಬಾರಿ ಭಾರತದ ಆಟಗಾರರಿಗೆ ಕೊಂಚ ಕಷ್ಟವಾಗಲಿದೆ | Oneindia Kannada

   ಮದ್ಯ, ಮಾದಕ ವಸ್ತುಗಳು ಹಾನಿಕಾರಕ ಹೌದೋ? ಅಲ್ಲವೋ?

   ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದಾರೆ. "ನ್ಯಾಯಾಲಯದಿಂದ ಅನುಮತಿ ಪಡೆದು ಮಂಗಳವಾರ ನಟಿ ಸಂಜನಾ ಗಲ್ರಾನಿ ಮತ್ತು ವೀರೇನ್ ಖನ್ನಾ ನಿವಾಸದ ಮೇಲೆ ದಾಳಿ ಮಾಡಲಾಗಿದೆ" ಎಂದು ಹೇಳಿದ್ದಾರೆ.

   ನಟಿ ಸಂಜನಾ ಗಲ್ರಾನಿ ಸಿಸಿಬಿ ಪೊಲೀಸರ ವಶಕ್ಕೆ

   "ವೀರೇನ್ ಖನ್ನಾ ಮನೆಯಲ್ಲಿ ಕರ್ನಾಟಕ ಪೊಲೀಸ್ ಸಮಸ್ತ್ರ ಸಿಕ್ಕಿದೆ. ಯಾವ ಕಾರಣಕ್ಕಾಗಿ ಅದನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಎಂದು ತನಿಖೆ ನಡೆಸಲಾಗುತ್ತಿದೆ" ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

   ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

   ನಟಿ ರಾಗಿಣಿ ಮತ್ತೆ 5 ದಿನ ಸಿಸಿಬಿ ಪೊಲೀಸರ ವಶಕ್ಕೆ

   "ಮನೆಯಲ್ಲಿ ಸಿಕ್ಕಿದ ಸಮವಸ್ತ್ರ ಯಾರದ್ದು? ಎಂದು ತನಿಖೆ ಮಾಡಲಾಗುತ್ತಿದೆ. ನಕಲಿ ಸಮವಸ್ತ್ರವೂ ಆಗಿರಬಹುದು. ಎಸಿಪಿಯೊಬ್ಬರ ಜೊತೆ ಅವರಿಗೆ ನಿಕಟ ಸಂಪರ್ಕವಿತ್ತು ಎಂಬ ಮಾಹಿತಿಯೂ ಇದೆ" ಎಂದರು.

   ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

   ಡ್ರಗ್ಸ್ ಜಾಲದ ತನಿಖೆ; ಉದ್ಯಮಿ ವಶಕ್ಕೆ ಪಡೆದ ಸಿಸಿಬಿ

   ಸೆ.4ರ ಶುಕ್ರವಾರ ವೀರೇನ್‌ ಖನ್ನಾರನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು. ಸಿಸಿಬಿ ಪೊಲೀಸರು ಆತನನ್ನು ಬೆಂಗಳೂರಿಗೆ ಕರೆತಂದು ವಿಚಾರಣೆ ಮಾಡುತ್ತಿದ್ದಾರೆ. ಬೆಂಗಳೂರು ಮೂಲದ ಈತ ಟೆಕ್ಕಿ.

   ಸೆಲೆಬ್ರಿಟಿಗಳಿಗೆ ಪಾರ್ಟಿ ಆಯೋಜನೆ ಮಾಡುವ ಕೆಲಸವನ್ನು ಈತ ಮಾಡುತ್ತಿದ್ದ ಎಂಬ ಮಾಹಿತಿ ಇದೆ. ಈ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆಯಾಗುತ್ತಿತ್ತು ಎಂಬ ಮಾಹಿತಿ ಪೊಲೀಸರಿಗೆ ಇದ್ದು, ತನಿಖೆ ನಡೆಯುತ್ತಿದೆ.

   English summary
   Sandeep Patil joint commissioner of CCB said that Karnataka police uniform found in Viren Khanna house. He is arrested by police for her involvement in drug running.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X