ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಸೇರುವ ಬಗ್ಗೆ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಜುಲೈ 08: "ನಾನು ಬಿಜೆಪಿ ಸೇರಿದರೆ ತಪ್ಪೇನು? ಬಿಜೆಪಿ ಸಹ ಒಂದು ರಾಜಕೀಯ ಪಕ್ಷ" ಎಂದು ಅತೃಪ್ತ ಶಾಸಕ ರೋಷನ್ ಬೇಗ್ ಹೇಳಿದ್ದಾರೆ.

'ರಾಜೀನಾಮೆ ಕೊಟ್ಟ ಶಾಸಕರಿಗೆ ಕ್ಯಾಕರಿಸಿ ಕ್ಯಾಕರಿಸಿ ಉಗೀರಿ''ರಾಜೀನಾಮೆ ಕೊಟ್ಟ ಶಾಸಕರಿಗೆ ಕ್ಯಾಕರಿಸಿ ಕ್ಯಾಕರಿಸಿ ಉಗೀರಿ'

ರಾಜೀನಾಮೆ ನೀಡಿರುವ ಅವರು, ತಾವು ಬಿಜೆಪಿ ಸೇರುವ ಕುರಿತ ವರದಿಗೆ ಪ್ರತಿಕ್ರಿಯೆ ನೀಡಿದರು. 'ನನ್ನನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಮತ್ತು ಸತ್ಯವನ್ನು ಹೇಳಿದ್ದಕ್ಕಾಗಿ ನನ್ನನ್ನು ಅಮಾನತು ಮಾಡಿದ ಕ್ರಮ ನನಗೆ ತೀರಾ ನೋವು ತಂದಿದೆ. ರಾಜ್ಯ ರಾಜ್ಯದಲ್ಲಿ ಪಕ್ಷಕ್ಕೆ ನಾಯಕತ್ವವಿಲ್ಲ, ಅದು ಸಂಪೂರ್ಣ ವಿಫಲವಾಗಿದೆ. ನಾನು ಮುಂಬೈಗಾಗಲೀ, ಗೋವಾಕ್ಕಾಗಲೀ ಹೋಗುವುದಿಲ್ಲ. ಬೆಂಗಳೂರಿನಲ್ಲೇ ಇರುತ್ತೇನೆ. ಆದರೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ' ಎಂದು ರೋಷನ್ ಬೇಗ್ ಹೇಳಿದರು.

ಕಾಂಗ್ರೆಸ್ ನಾಯಕರಿಗೆ 24 ಗಂಟೆಯ ಗಡುವು ಕೊಟ್ಟ ಕುಮಾರಣ್ಣ!ಕಾಂಗ್ರೆಸ್ ನಾಯಕರಿಗೆ 24 ಗಂಟೆಯ ಗಡುವು ಕೊಟ್ಟ ಕುಮಾರಣ್ಣ!

ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ನ ಒಟ್ಟು 14 ಶಾಸಕರು ರಾಜೀನಾಮೆ ನೀಡಿದ್ದು, ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಅತೃಪ್ತರ ಮನವೊಲಿಸಿ, ವಾಪಸ್ ಕರೆತರಲು ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ 24 ಗಂಟೆಗಳ ಗಡುವು ನೀಡಿದ್ದಾರೆ.

Karnataka political crisis: Congress MLA Roshan Baig may join BJP

ಇತ್ತ ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದು, ಹೈಕಮಾಂಡ್ ಜೊತೆ ರಾಜ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

English summary
Roshan Baig: I'm hurt by the way Congress has treated me and suspended me as I spoke bitter truth.The state leadership has failed,there is no accountability. I am not going to either Mumbai or Goa, I am in Bengaluru. I am going to resign from MLA post.They (BJP) are in touch with me.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X