ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುಪ್ತಚರ ಇಲಾಖಾ ವರದಿ: ವಿಧಾನಸೌಧದ ಸುತ್ತಮುತ್ತ ಸೆಕ್ಷನ್ 144

|
Google Oneindia Kannada News

ಬೆಂಗಳೂರು, ಜುಲೈ 11: ರಾಜ್ಯ ರಾಜಕಾರಣದ ಇತ್ತೀಚಿನ ವಿದ್ಯಮಾನಗಳಿಂದಾಗಿ 11-07-2019 ರಿಂದ 14-07-2019 ರವರೆಗೆ ವಿಧಾನಸೌಧದ ಸುತ್ತಮುತ್ತ ಪ್ರತಿಬಂಧಕಾಜ್ಞೆ (ಸೆಕ್ಷನ್ 144) ಜಾರಿಗೊಳಿಸಿ, ಬೆಂಗಳೂರು ನಗರ ಆಯುಕ್ತ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಕಮಿಷನರ್ ಕಚೇರಿಯಿಂದ ಹೊರಡಿಸಲಾದ ಪತ್ರಿಕಾ ಪ್ರಕಟಣೆ ಇಂತಿದೆ:

'ವಿಧಾನಸೌಧದ ಒಳ ಮತ್ತು ಹೊರ ಭಾಗಗಳಲ್ಲಿ ರಾಜಕೀಯ ಪಕ್ಷಗಳ ಮುಂಖಂಡರುಗಳು, ಅವರ ಅನುಯಾಯಿಗಳು ಮತ್ತು ಕಾರ್ಯಕರ್ತರುಗಳಿಂದ ಪ್ರತಿಭಟನೆ, ಧರಣಿ ಸತ್ಯಾಗ್ರಹಗಳಂತಹ ಕಾರ್ಯಕ್ರಮಗಳು ಮತ್ತು ಕಾರ್ಯಕರ್ತರುಗಳ ಮಧ್ಯೆ ಘರ್ಷಣೆಗಳು ಉಂಟಾಗುವ ಸಂಭವ ಇರುತ್ತದೆ'.

ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರ ಶೇಮ್..ಶೇಮ್ ವರ್ತನೆವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರ ಶೇಮ್..ಶೇಮ್ ವರ್ತನೆ

'ಇದರಿಂದ ವಿಧಾನಸೌಧದ ಕಛೇರಿಗಳ ದೈನಂದಿನ ಕಾರ್ಯಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೆ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗಬಹುದಾದ ಸಾಧ್ಯತೆಗಳು ಇರುವುದಾಗಿ ಗುಪ್ತವಾರ್ತಾ ಮಾಹಿತಿಯಿಂದ ತಿಳಿದುಬಂದಿರುತ್ತದೆ'.

Karnataka political development section 144 imposed sourrounding Vidhana Soudha, Bengaluru

'ಈ ನಿಟ್ಟಿನಲ್ಲಿ ನಾನು ಈ ಮೇಲ್ಕಂಡ ಮಾಹಿತಿಗಳ ಬಗ್ಗೆ ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾಗಿ ಸಂಗ್ರಹಿಸಿದ ಮಾಹಿತಿಯಿಂದ ಹಾಗೂ ಗುಪ್ತವಾರ್ತಾ ವಿಭಾಗದ ಮಾಹಿತಿಯಲ್ಲಿ ಸಾಕಷ್ಟು ಸತ್ಯಾಂಶವಿದೆಯೆಂದು ತಿಳಿದು ಬಂದಿರುವುದರಿಂದ, ವಿಧಾನಸೌಧದ ಕಛೇರಿಗಳ ದೈನಂದಿನ ಕಾರ್ಯಕಲಾಪಗಳು ಸುಗಮವಾಗಿ ನಡೆಯುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕೆಳಕಂಡಂತೆ ಪ್ರತಿಬಂಧಕಾಜ್ಞೆಯನ್ನು ಹೊರಡಿಸಿರುತ್ತೇವೆ'.

'ಈ ದಿಸೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ದಂಡ ಪ್ರಕ್ರಿಯಾ ಸಂಹಿತೆಯ ಕಲಂ 144ನೇ ಪ್ರಕರಣದ ಅನ್ವಯ ಪ್ರದತ್ತವಾದ ಅಧಿಕಾರವನ್ನು ಉಪಯೋಗಿಸಿ, ದಿನಾಂಕ: 11-07-2019 ರಿಂದ 14-07-2019 ರವರೆಗೆ ಬೆಳಿಗ್ಗೆ 06-00 ಗಂಟೆಯಿಂದ ಮಧ್ಯರಾತ್ರಿ 12-00 ಗಂಟೆಯವರೆಗೆ ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಈ ಕೆಳಕಂಡ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ವಿಧಿಸಿರುತ್ತೇವೆ'.

ಹೈಡ್ರಾಮ : ವಿಧಾನಸೌಧಕ್ಕೆ ಪ್ರವೇಶ ನಿಷೇಧ, ಎಲ್ಲಾ ಗೇಟ್‌ ಬಂದ್ ಹೈಡ್ರಾಮ : ವಿಧಾನಸೌಧಕ್ಕೆ ಪ್ರವೇಶ ನಿಷೇಧ, ಎಲ್ಲಾ ಗೇಟ್‌ ಬಂದ್

1. ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು,
2. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು,
3. ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು,
4. ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು,
5. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.

English summary
Karnataka political development section 144 imposed sourrounding Vidhana Soudha, Bengaluru from 6AM 11.07.2019 to 12 midnight of 14th July.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X