• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಒತ್ತಡಕ್ಕೆ ಮಣಿದ ಸ್ಪೀಕರ್: ಗುರುವಾರಕ್ಕೆ ಕಲಾಪ ಮುಂದೂಡಿಕೆ

|

ಬೆಂಗಳೂರು, ಜುಲೈ 15: ವಿರೋಧಪಕ್ಷ ಬಿಜೆಪಿಯ ಒತ್ತಡಕ್ಕೆ ಮಣಿದ ಸ್ಪೀಕರ್ ರಮೇಶ್ ಕುಮಾರ್ ಅವರು ಗುರುವಾರದವರೆಗೂ ಅಧಿವೇಶನವನ್ನು ಮುಂದೂಡಿದ್ದಾರೆ.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ವಿಶ್ವಾಸಮತ ಯಾಚನೆ ಮಾಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಅಲ್ಲಿಯವರೆಗೂ ಕಲಾಪ ನಡೆಸದಂತೆ ಆಗ್ರಹಿಸಿದ್ದರು. ಒಂದು ವೇಳೆ ಕಲಾಪ ನಡೆಸಿದರೂ ತಾವು ಅದರಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಬೆದರಿಕೆ ಹಾಕಿದ್ದರು.

ಕರ್ನಾಟಕ ರಾಜಕೀಯ LIVE: ಜುಲೈ 18ಕ್ಕೆ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ

ಈ ಬಗ್ಗೆ ಮಧ್ಯಾಹ್ನ ಆರಂಭವಾದ ಕಲಾಪದ ವೇಳೆ ಪ್ರಸ್ತಾಪಿಸಿದ ಸ್ಪೀಕರ್ ರಮೇಶ್ ಕುಮಾರ್, ಪ್ರತಿಪಕ್ಷ ಇಲ್ಲದೆ ಕಲಾಪ ನಡೆಸುವುದು ಸರಿಯಲ್ಲ. ಹೀಗಾಗಿ ಗುರುವಾರದವರೆಗೂ ಕಲಾಪ ಮುಂದೂಡಲಾಗುತ್ತದೆ ಎಂದು ತಿಳಿಸಿದರು.

ಸಿಎಂ ಅವರಿಗೆ ಬಹುಮತ ಇದೆಯೆಂಬ ವಿಶ್ವಾಸ ಇಲ್ಲದಿರುವಾಗ ಅಧಿವೇಶನ ನಡೆಸುವುದು ಮತ್ತು ಸರ್ಕಾರಕ್ಕೆ ಸಂಬಂಧಿಸಿದ ತೀರ್ಮಾನಗಳನ್ನು ತೆಗೆದುಕೊಳ್ಳುವುದು ನೈತಿಕತೆ ಅಲ್ಲ. ವಿಶ್ವಾಸ ಮತ ಯಾಚನೆಯ ಕುರಿತು ಕಲಾಪ ಸಲಹಾ ಸಮಿತಿಯಲ್ಲಿ ತೀರ್ಮಾನ ತೆಗೆದುಕೊಂಡಿರುವುದಕ್ಕೆ ಒಪ್ಪಿಕೊಂಡಿದ್ದೇವೆ. ವಿಶ್ವಾಸಮತ ಯಾಚನೆ ಬಳಿಕ ಕಲಾಪ ನಡೆಸಲಿ ಅಲ್ಲಿವರೆಗೆ ಕಲಾಪ ನಡೆಸುವುದು ಬೇಡ. ಈ ಬಗ್ಗೆ ಸ್ಪೀಕರ್‌ಗೆ ತಿಳಿಸಿದ್ದೇವೆ ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ ಹೇಳಿದ್ದರು.

ಸ್ಪೀಕರ್ ಅವರ ನಿರ್ಧಾರವನ್ನು ಸ್ವಾಗತಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

English summary
Karnataka politics crisis: Speaker Ramesh Kumar has decided to adjourn the assembly session till Thursday when HD Kumaraswamy will go to floor test.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X