Zameer Ahmed vs Bhaskar Rao: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಲೀಸಲ್ಲ ಜಮೀರ್ ಗೆಲುವು- ಇನ್‌ಸೈಡ್ ಸ್ಟೋರಿ
ಬೆಂಗಳೂರು, ಏಪ್ರಿಲ್ 23: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ರಂಗು ಪಡೆದುಕೊಂಡಿದೆ. ಅದರಲ್ಲೂ ಬೆಂಗಳೂರಿನ ಹೃದಯ ಭಾಗದಲ್ಲಿರುವ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಗಮನ ಸೆಳೆಯುತ್ತಿದೆ. ಕೊಳಗೇರಿ ಹಾಗೂ ಶ್ರೀಮಂತ ಪ್ರದೇಶಗಳ ಮಿಶ್ರ ಸಂಯೋಜನೆಯನ್ನು ಹೊಂದಿರುವ ಕ್ಷೇತ್ರವು ಅನೇಕ ಸಮಸ್ಯೆಗಳಿಂದ ಬಳಲುತ್ತಿದೆ.
ಚಾಮರಾಜಪೇಟೆಯಲ್ಲಿ ನಾಗರಿಕ ಸೌಲಭ್ಯಗಳ ಕೊರತೆ, ಈಗ್ದಾ ಮೈದಾನಕ್ಕೆ ಸಂಬಂಧಿಸಿದ ವ್ಯಾಜ್ಯಗಳು ಮತ್ತು ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಸಂಬಂಧಿಸಿದಂತೆ ಹಲವಾರು ವಿವಾದಗಳು ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿವೆ.

2005 ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್‌ನ ಜಮೀರ್ ಅಹಮದ್ ಖಾನ್ ಅವರು ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ. ಅವರ ವಿರುದ್ಧ ಬಿಜೆಪಿ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಕಣಕ್ಕಿಳಿಸಿದೆ. ಇವರು ಈ ಬಾರಿ ಜಮೀರ್‌ಗೆ ಪೈಪೋಟಿ ಒಡ್ಡುವ ಲಕ್ಷಣಗಳು ಕಾಣುತ್ತಿವೆ.
ಚಾಮರಾಜಪೇಟೆಯಲ್ಲಿರುವ ಅಂಜನಪ್ಪ ಗಾರ್ಡನ್ ನಿವಾಸಿ ಪುರುಷೋತ್ತಮನ್ ಅವರು ' ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್' ಮಾತನಾಡಿದ್ದಾರೆ. 'ಕ್ಷೇತ್ರದ ಅರ್ಧ ಭಾಗವು ಸ್ಲಂ ಗಳನ್ನು ಒಳಗೊಂಡಿದೆ, ಅಂಜನಪ್ಪ ಗಾರ್ಡನ್, ಸಿದ್ದಾರ್ಥನಗರ, ಛಲವಾದಿಪಾಳ್ಯ, ಗೋರಿಪಾಳ್ಯ, ಜಗಜೀವನರಾಮ್ ನಗರಗಳನ್ನು ಕ್ಷೇತ್ರ ಒಳಗೊಂಡಿದೆ. ಈ ಪ್ರದೇಶಗಳಲ್ಲಿ ತುಂಬಿ ಹರಿಯುವ ಚರಂಡಿಗಳು ಮತ್ತು ಕಸದ ತೊಟ್ಟಿಗಳನ್ನು ಕಾಣಬಹುದು. ನಮಗೆ ಕೊಳಚೆ ಮಿಶ್ರಿತ ನೀರು ಪೈಪ್‌ಲೈನ್‌ನಲ್ಲಿ ಸಿಗುತ್ತದೆ. ಈ ಬಗ್ಗೆ ಪದೇ ಪದೇ ದೂರು ನೀಡಿದರು ವ್ಯರ್ಥವಾಗಿದೆ' ಎಂದು ಹೇಳಿದ್ದಾರೆ.
ನಿರುದ್ಯೋಗಿ ಯುವಕರು ಕುಡಿತದ ಅಮಲಿನಲ್ಲಿ ರಾತ್ರಿ ವೇಳೆ ರಸ್ತೆಗಿಳಿದು ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋಗುತ್ತಾರೆ. ರಾತ್ರಿ ವೇಳೆಯಲ್ಲಿ ಇಲ್ಲಿ ಓಡಾಡಲು ಜನರು ಹೆದರುತ್ತಿದ್ದಾರೆ' ಎಂದು ಹಳೇ ಗುಡ್ಡದಹಳ್ಳಿ ನಿವಾಸಿ ಶರತ್‌ಕುಮಾರ್ ಕೆ.ಪಿ ಹೇಳಿದ್ದಾರೆ. ಪೊಲೀಸರು ಇಲ್ಲಿ ಹೆಚ್ಚಿನ ಗಸ್ತು ತಿರುಗಬೇಕು. ಕೋಮು ಸೌಹಾರ್ದತೆ ಕಾಪಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಮೀರ್ ಅವರು ಜನರ ಆರೋಗ್ಯ, ಶಿಕ್ಷಣ ಮತ್ತು ಇತರ ಅಗತ್ಯಗಳಿಗಾಗಿ ಅಗತ್ಯವಿರುವವರಿಗೆ ಹಣವನ್ನು ನೀಡುತ್ತಾರೆ. ಆದರೆ ಕ್ಷೇತ್ರದಲ್ಲಿ ಸಾವಿರಾರು ಬಡವರಿದ್ದು, ಅವರೆಲ್ಲ ಹಣಕ್ಕಾಗಿ ಅವರ ಮನೆ ಮುಂದೆ ಹೋಗಿ ನಿಲ್ಲುವಂತಿಲ್ಲ ಎಂದು ಅವರು ಇನ್ನೊಬ್ಬ ನಿವಾಸಿ ಹೇಳಿದ್ದಾರೆ.
'ಶಾಸಕರಾಗಿ, ಅವರ ಗಮನವು ತಾತ್ಕಾಲಿಕ ಪರಿಹಾರವಾದ ಹಣವನ್ನು ನೀಡುವ ಬದಲು ಬಡತನವನ್ನು ತೊಡೆದುಹಾಕುವತ್ತ ಇರಬೇಕು. ಅಲ್ಲದೆ, ಆರ್ಥಿಕ ನೆರವು ಪಡೆದವರು ಎಂದಿಗೂ ಶಾಸಕರ ವಿರುದ್ಧ ಮಾತನಾಡುವುದಿಲ್ಲ. ಅಥವಾ ಕ್ಷೇತ್ರದ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವುದಿಲ್ಲ' ಎಂದು ಅವರು ಹೇಳಿದ್ದಾರೆ.
ಐತಿಹಾಸಿಕ ಕೆ.ಆರ್.ಮಾರುಕಟ್ಟೆ ಇದೇ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತಿದ್ದು, ಪ್ರತಿನಿತ್ಯ ಲಕ್ಷಾಂತರ ಜನರು ಭೇಟಿ ನೀಡಿತ್ತಾರೆ. ಇಲ್ಲಿ ಕಳಪೆ ನಿರ್ವಹಣೆ ಮಾಡಲಾಗುತ್ತಿದೆ. ಮಾರುಕಟ್ಟೆ ದೊಡ್ಡ ಕಸದ ರಾಶಿಗಳಿಂದ ಕೂಡಿದ್ದು, ದುರ್ವಾಸನೆ ಬೀರುತ್ತಿದೆ ಎಂದು ಜನರು ಅರೋಪಿಸಿದ್ದಾರೆ.
ಚಾಮರಾಜಪೇಟೆ ಬದಲಾವಣೆ ಮಾಡಲು ಸಿದ್ಧ ಎಂದು ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ಹೇಳಿದ್ದಾರೆ.
'2005 ರಿಂದ, ನಗರದ ಹೃದಯಭಾಗದಲ್ಲಿರುವ ಕ್ಷೇತ್ರವು ಬಡತನ, ತುಂಬಿ ಹರಿಯುವ ಒಳಚರಂಡಿ ಮತ್ತು ಅಪರಾಧ ಕೃತ್ಯಗಳಿಂದ ಕೂಡಿದೆ. ಎಲ್ಲ ಮೂಲ ಸೌಕರ್ಯಗಳ ಕೊರತೆ ಈ ಕ್ಷೇತ್ರದಲ್ಲಿ ಇದೆ. ದೂರದ ಹಳ್ಳಿಗಳಲ್ಲಿಯೂ ಚಾಮರಾಜಪೇಟೆಗಿಂತ ಉತ್ತಮ ಸರ್ಕಾರಿ ಶಾಲೆಗಳು ಮತ್ತು ಆಸ್ಪತ್ರೆಗಳು ಇರಬಹುದು. ಅಪರಾಧವು ಬಡತನದೊಂದಿಗೆ ನಿಕಟ ಸಂಪರ್ಕ ಹೊಂದಿದೆ' ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ.
'ನಾನು ಕ್ಷೇತ್ರದ ಬಗ್ಗೆ ದೂರದೃಷ್ಟಿ ಹೊಂದಿದ್ದೇನೆ. ಆಯ್ಕೆಯಾದರೆ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ಸುಧಾರಿಸುತ್ತೇನೆ. ಅದರ ಹೊರತಾಗಿ ನೈರ್ಮಲ್ಯವನ್ನು ಸುಧಾರಿಸುವುದು ಮತ್ತು ಶುದ್ಧ ಕುಡಿಯುವ ನೀರು ಒದಗಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಜನರು ಬಿಜೆಪಿಯನ್ನು ಆಯ್ಕೆ ಮಾಡುವ ಮೂಲಕ ಚಾಲ್ತಿಯಲ್ಲಿರುವ ದುರಾಡಳಿತವನ್ನು ಕೊನೆಗೊಳಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications