125ಕ್ಕೂ ಹೆಚ್ಚು ಸ್ಥಾನ ಪಡೆದು ಸ್ಪಷ್ಟ ಬಹುಮತ ಪಡೆಯುತ್ತೇವೆ: ರಾಮಲಿಂಗಾ ರೆಡ್ಡಿ

ಬೆಂಗಳೂರು , ಮೇ. 10: ರಾಜ್ಯದಲ್ಲಿ ಪಕ್ಷಗಳ ಭವಿಷ್ಯ ನಿರ್ಧರಿಸಲಿರುವ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಈವರೆಗೆ ಶೇ. 8.15 ರಷ್ಟು ಮತದಾನ ದಾಖಲಾಗಿದೆ. ಮತದಾನಕ್ಕೆ ಉತ್ತಮ ಸ್ಪಂದನೆ ಸಿಗುತ್ತಿದ್ದು, ರಾಜಕೀಯ ನಾಯಕರು, ಅಭ್ಯರ್ಥಿಗಳು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ವೋಟು ಚಲಾಯಿಸಿದ್ದಾರೆ. ಕಾಂಗ್ರೆಸ್ ನಾಯಕರು ಈ ಬಾರಿ ತಮ್ಮದೆ ಸರ್ಕಾರ ಎಂದು ಭಾರೀ ವಿಶ್ವಾಸ ಹೊಂದಿದ್ದಾರೆ.

ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಮತ ಚಲಾವಣೆ ಮಾಡಿ ಮಾತನಾಡಿರುವ ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ಈ ಬಾರಿ ತಮ್ಮದೇ ಸರ್ಕಾರ ಅಧಿಖಾರ ಬರುತ್ತದೆ ಎಮದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. "125ಕ್ಕೂ ಹೆಚ್ಚು ಸ್ಥಾನ ಪಡೆದು ಸ್ಪಷ್ಟ ಬಹುಮತ ಪಡೆಯುತ್ತೇವೆ. ಸರ್ಕಾರ ರಚಿಸುತ್ತೇವೆ" ಎಮದು ಮತ ಹಾಕಿದ ಬೆರಳು ತೋರಿಸಿ ಮಾಧ್ಯಮದವರಿಗೆ ಫೋಸ್ ನೀಡಿದ್ದಾರೆ.

Ramalinga Reddy

ಮುಖ್ಯಮಂತ್ರಿ ಆಯ್ಕೆ ಬಗ್ಗೆ ಮಾತನಾಡಿರುವ ಅವರು, "ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ 2-3 ಜನರಿದ್ದಾರೆ. ಆದರೆ ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಹೈಕಮಾಂಡ್ ಮತ್ತು ಶಾಸಕರು ನಿರ್ಧರಿಸುತ್ತಾರೆ" ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ಮತ್ತೊಬ್ಬರು ಸಿಎಂ ಸ್ಥಾನದ ಆಕಾಂಕ್ಷಿ ಪಕ್ಷದಲ್ಲಿ ಇದ್ದಾರೆ ಎಂಬುದನ್ನು ರಾಮಲಿಂಗಾ ರೆಡ್ಡಿ ಒಪ್ಪಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+