ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೇ.30ರಷ್ಟು ಶುಲ್ಕ ಕಡಿತ ಆದೇಶ:ಫೆ.23 ರಂದು ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆ

|
Google Oneindia Kannada News

ಬೆಂಗಳೂರು,ಫೆಬ್ರವರಿ 10: ರಾಜ್ಯ ಸರ್ಕಾರವು ಖಾಸಗಿ ಶಾಲೆಗಳ ಶುಲ್ಕವನ್ನು ಶೇ.30ರಷ್ಟು ಕಡಿಮೆ ಮಾಡಿ ಆದೇಶ ಹೊರಡಿಸಿದ್ದು, ಇದನ್ನು ವಿರೋಧಿಸಿ ಖಾಸಗಿ ಶಾಲೆಗಳ ಒಕ್ಕೂಟ ಫೆ.23ರಂದು ಪ್ರತಿಭಟನೆ ಹಮ್ಮಿಕೊಂಡಿದೆ.

ಕ್ಯಾಮ್ಸ್,ಮಿಕ್ಸಾ,ಮಾಸ್, ಕುಸುಮ, ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲೆಗಳ ಒಕ್ಕೂಟ ಪ್ರತಿಭಟನೆಗೆ ನಿರ್ಧರಿಸಿವೆ.ಶಿಕ್ಷಣ ಇಲಾಖೆ ತೆಗೆದುಕೊಂಡ ನಿರ್ಧಾರವನ್ನು ಸ್ವಾಗತಿಸಿದ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ರುಪ್ಸಾದಲ್ಲಿ 13 ಸಾವಿರಕ್ಕೂ ಹೆಚ್ಚು ಬಜೆಟ್ ಶಾಲೆಗಳಿವೆ. ಶೇ.30ರಷ್ಟು ಶುಲ್ಕ ಕಡಿತದ ಬಗ್ಗೆ ಯಾವುದೇ ತಕರಾರು ಇಲ್ಲ.ಹೀಗಾಗಿ ಫೆಬ್ರವರಿ 23 ರಂದು ಕರೆಕೊಟ್ಟಿರುವ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ ಎಂದಿದ್ದಾರೆ.

ಯಾವುದೇ ಅಭಿವೃದ್ಧಿ ಶುಲ್ಕವನ್ನು ಪಡೆಯುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ನೀಡಿದ್ದರು.

 Karnataka Private Schools Federation Decided To Protest Against Fee Reduce On February 23 At Bengaluru

ಆದರೆ ಇದಕ್ಕೆ ಸಂಬಂಧಿಸಿದ ಆದೇಶವನ್ನು ಪುನರ್ ಪರಿಶೀಲಲನೆ ಮಾಡಬೇಕೆಂದು ಆಗ್ರಹಿಸಿ ಇದೇ 23 ರಂದು ಬೆಂಗಳೂರಿನಲ್ಲಿ ಪ್ರತಿಭಟನೆಯನ್ನು ನಡೆಸಲು ಶಾಲೆಗಳ ಒಕ್ಕೂಟ ಕರೆ ನೀಡಿದೆ.

Recommended Video

11.02.2021 ರಂದು ಮಕರ ರಾಶಿಯಲಿ ಆರು ಗ್ರಹಗಳ ಸಂಚಾರ | Oneindia Kannada

ರಾಜ್ಯ ಸರ್ಕಾರ ಶೇ.30ರಷ್ಟು ಕಡಿತ ಎಂದು ಹೇಳಿದೆ, ಆದರೆ ಆದೇಶದಲ್ಲಿ ಶೇ.55ರಿಂದ ಶೇ.65ರಷ್ಟು ಶುಲ್ಕ ಕಡಿತವಾಗುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮತ್ತು ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗೆ ಅನುದಾನ ನೀಡಬೇಕು. ಕಟ್ಟಡ ಸುರಕ್ಷಿತ ಪ್ರಮಾಣ ಪತ್ರ ಹಿಂದಿನ ಶಾಲೆಗಳಿಗೆ ಕೈ ಬಿಡಬೇಕು ಎಂದು ನಿರ್ಧರಿಸಲಾಗಿದೆ.

English summary
Karnataka Private Schools Federation Decided To Protest Against Fee Reduce On February 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X