ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೆ ಗಮನಿಸಿ; ಮರುಮೌಲ್ಯಮಾಪನದಲ್ಲಿ ಮಹತ್ತರ ಬದಲಾವಣೆ ಮಾಡಿದ ಸರ್ಕಾರ
'ಕರ್ನಾಟಕ ಪದವಿ ಪೂರ್ವ ಶಿಕ್ಷಣ ರಾಜ್ಯ ಮಟ್ಟದ ಸಾರ್ವಜನಿಕ ಪರೀಕ್ಷಾ ನಿಯಮಗಳು-1997'ಗೆ ತಿದ್ದುಪಡಿ ತರಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರು, ಫೆಬ್ರವರಿ. 10: ರಾಜ್ಯ ಸರ್ಕಾರವು 2023 ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹೊಸ ಮರುಮೌಲ್ಯಮಾಪನ ಮಾನದಂಡವನ್ನು ಪರಿಚಯಿಸಿದೆ. ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದೆ. ಇದನ್ನು ವಿದ್ಯಾರ್ಥಿ ಸ್ನೇಹಿ ಮಾನದಂಡ ಎಂದು ಸರ್ಕಾರ ಹೇಳಿಕೊಂಡಿದೆ.
ಈ ಬಗ್ಗೆ ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೊಸ ಘೋಷಣೆ ಮಾಡಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೇವಲ ಒಂದು ಅಂಕ ಗಳಿಸಿದ್ದರೂ ಸಹ ಫಲಿತಾಂಶಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು.
ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
— B.C Nagesh (@BCNagesh_bjp) February 9, 2023
2023ರ ಮಾರ್ಚ್‌ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ. (1/3)
'ಕರ್ನಾಟಕ ಪದವಿ ಪೂರ್ವ ಶಿಕ್ಷಣ ರಾಜ್ಯ ಮಟ್ಟದ ಸಾರ್ವಜನಿಕ ಪರೀಕ್ಷಾ ನಿಯಮಗಳು-1997'ಗೆ ತಿದ್ದುಪಡಿ ತರಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

"ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 'ಒಂದು ಅಂಕ' ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023ರ ಮಾರ್ಚ್‌ನಲ್ಲಿ ನಡೆಯುವ 'ವಾರ್ಷಿಕ ಪರೀಕ್ಷೆ'ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ" ಎಂದು ಟ್ವೀಟ್ ಮಾಡಿದ್ದಾರೆ..
" ಪ್ರಸ್ತುತ ಹಾಲಿ ಇರುವ ನಿಯಮದ ಪ್ರಕಾರ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗೆ ಪತ್ರಿಕೆಯ ಒಟ್ಟು ಅಂಕದ ಶೇ.6 ರಷ್ಟು ಅಂಕ ಅಥವಾ ಅದಕ್ಕಿಂತ ಹೆಚ್ಚು ಅಂಕಗಳು ಬಂದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಶೇ.6 ಕ್ಕಿಂತ ಕಡಿಮೆ ಅಂಕಗಳು ಬಂದಲ್ಲಿ ಪರಿಗಣಿಸುತ್ತಿರಲಿಲ್ಲ" ಎಂದು ತಿಳಿಸಿದ್ದಾರೆ.
"ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಅಂಕವು ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ 'ಒಂದು ಅಂಕ'ವನ್ನೂ ಪರಿಗಣಿಸುವ 'ವಿದ್ಯಾರ್ಥಿ ಸ್ನೇಹಿ' ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಈ ಸಂಬಂಧ ಶೀಘ್ರದಲ್ಲೇ 'ಕರ್ನಾಟಕ ಪದವಿಪೂರ್ವ ಶಿಕ್ಷಣ ರಾಜ್ಯ ಮಟ್ಟದ ಪಬ್ಲಿಕ್ ಪರೀಕ್ಷೆ ನಿಯಮಗಳು-1997'ಕ್ಕೆ ತಿದ್ದುಪಡಿ ತರಲಾಗುತ್ತದೆ." ಎಂದು ಮಾಹಿತಿ ನೀಡಿದ್ದಾರೆ.
ಈ ಹೊಸ ಮಾನದಂಡವು ಮಾರ್ಚ್‌ನಲ್ಲಿ ನಿಗದಿಪಡಿಸಲಾದ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೂ ಅನ್ವಯಿಸುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಪಿಯುಸಿ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಪರೀಕ್ಷಾ ವೇಳಾಪಟ್ಟಿ ಪ್ರಕಾರ, ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 9, 2023 ರಿಂದ ಮಾರ್ಚ್ 29, 2023 ರವರೆಗೆ ನಡೆಯಲಿವೆ.












Click it and Unblock the Notifications