Karnataka Rain Alert: ಡಿಸೆಂಬರ್ 7ರವರೆಗೆ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ!
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 7ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ಮಂಗಳವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.
ಮಂಗಳವಾರ ಬೀದರ್ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಉಳಿದಂತೆ ದಾವಣಗೆರೆ, ವಿಜಯಪುರ, ಗದಗ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಕೂಡ ಉತ್ತಮ ಮಳೆಯಾಗಿದೆ.

ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಿದೆ. ಉಳಿದಂತೆ ಹಾವೇರಿ, ಕಲಬುರಗಿ, ವಿಜಯನಗರ, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಚಾಮರಾಜನಗರ, ಕೋಲಾರ, ಕೊಪ್ಪಳ, ಚಿತ್ರದುರ್ಗ, ತುಮಕೂರು, ರಾಮನಗರ, ಉಡುಪಿ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.
ಡಿಸೆಂಬರ್ 7ರವರೆಗೆ ಉತ್ತಮ ಮಳೆ
ಡಿಸೆಂಬರ್ 29ರಂದು ರಾಜ್ಯದ ವಿಜಯಪುರ, ಧಾರವಾಡ, ದಕ್ಷಿಣ ಕನ್ನಡ, ಮೈಸೂರು, ಕೋಲಾರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ನವೆಂಬರ್ 30ರಂದು ವಿಜಯಪುರ, ರಾಯಚೂರು, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಮಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ ಎಂದು ವರದಿ ಹೇಳಿದೆ.
ಡಿಸೆಂಬರ್ 1ರಂದು ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ತುಮಕೂರು, ಬೆಂಗಳೂರು, ಕೋಲಾರ, ಚಾಮರಾಜನಗರ, ವಿಜಯಪುರ, ಬೆಳಗಾವಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಡಿಸೆಂಬರ್ 2 ಮತ್ತು 3ರಂದು ರಾಜ್ಯದಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 4 ಮತ್ತು 5ರಂದು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ವಿಜಯನಗರ, ಬೆಳಗಾವಿ, ಹೊಸಪೇಟೆ, ಕಲಬುರಗಿ, ಧಾರವಾಡ, ದಾವಣಗೆರೆ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.
ಡಿಸೆಂಬರ್ 6ರಂದು ಬಳ್ಳಾರಿ, ಹೊಸಪೇಟೆ, ರಾಯಚೂರು, ವಿಜಯಪುರ, ಕಲಬುರಗಿ, ಕೋಲಾರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಚದುರಿದಂತೆ ಉತ್ತಮ ಮಳೆಯಾಗಲಿದೆ. ಡಿಸೆಂಬರ್ 7ರಂದು ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.












Click it and Unblock the Notifications