Karnataka Rain: ಕೊನೆಗೂ ಮಳೆ ಬರುವ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ, ಎಲ್ಲೆಲ್ಲಿ?

ಬೆಂಗಳೂರು, ಏಪ್ರಿಲ್.06: ಬರದಿಂದ ತತ್ತರಿಸುತ್ತಿರುವ, ಬಿಸಿಲಿನ ಶಾಖದಿಂದ ಸುಸ್ತಾಗಿರುವ ಜನ ಬಿಟ್ಟ ಕಣ್ಣು ಬಿಟ್ಟಂತೆ ಅಕಾಶ ನೋಡುತ್ತಿದ್ದಾರೆ. ಯಾವಾಗ ಮಳೆ ಬರುವುದೋ ಎಂದು ಕಾಯುತ್ತಿದ್ದಾರೆ. ಇದೇ ಬಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಹೊಸ ಅಪ್‌ಡೇಟ್ ಹಂಚಿಕೊಂಡಿದ್ದು, ಇಂದಿನಿಂದ ಏಪ್ರಿಲ್ 12ರ ವರೆಗೆ ಹಗುರ ಮಳೆಯ ಭವಿಷ್ಯ ನುಡಿದಿದೆ.

ಹವಾಮಾನ ಇಲಾಖೆ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಒಣಹವೆ ಮತ್ತು ಶಾಖದ ಅಲೆ ಜೋರಾಗಿಯೇ ಇರಲಿದೆ. ಮುಂದಿನ 24 ಘಂಟೆಗಳು ಯಾವುದೇ ಗುಡುಗು ಮಳೆಯಾಗುವ ಬಗ್ಗೆ ಮುನ್ನೆಚ್ಚರಿಕೆ ನೀಡಿಲ್ಲ. ಮೀನುಗಾರರಿಗೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿಲ್ಲ. ಹಗುರದಿಂದ ಸಾಧಾರಣ ಮಳೆಯ ಸೂಚನೆ ನೀಡಿದೆ.

Karnataka Rain Met Centre Bengaluru shares State Rainfall Forecast

ಮಳೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ

06ನೇ ಏಪ್ರಿಲ್ 2024 : ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

07ನೇ ಏಪ್ರಿಲ್ 2024: ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

08ನೇ ಏಪ್ರಿಲ್ 2024: ಬೀದರ್, ಕಲಬುರಗಿ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

Karnataka Rain Met Centre Bengaluru shares State Rainfall Forecast

09ನೇ ಏಪ್ರಿಲ್ 2024 : ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು.ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

10ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು ಮತ್ತು ತುಮಕೂರು ಜಿಲ್ಲೆಗಳು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

11ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಚಿಕ್ಕಮಗಳೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

12ನೇ ಏಪ್ರಿಲ್ 2024: ದಕ್ಷಿಣ ಕನ್ನಡ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ: ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆದ್ರ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು ಮುಂದಿನ 2 ದಿನಗಳಲ್ಲಿ ಕರ್ನಾಟಕದ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಸುಮಾರು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ನಂತರದ 3 ದಿನಗಳ ಕಾಲ ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕ್ರಮೇಣ 2 ಡಿಗ್ರಿ ಸೆಲ್ಸಿಯಸ್ ಇಳಿಕೆಯಗುವ ಸಾಧ್ಯತೆಯಿದೆ. ಮುಂದಿನ 2 ದಿನಗಳಲ್ಲಿ ಬೆಳಗಾವಿ, ಬೀದರ್, ಬಾಗಲಕೋಟೆ. ರಾಯಚೂರು ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ರಾತ್ರಿಯ ವಾತಾವರಣವು ಬಿಸಿಯಾಗಿರಲಿದೆ.

ಶಾಖದ ಅಲೆಯ ಎಚ್ಚರಿಕೆ:

ಏಪ್ರಿಲ್ 6 ರಿಂದ ಏಪ್ರಿಲ್ 07ರ ವರೆಗೆ ಎರಡು ದಿನ ಬೀದರ್, ಬಾಗಲಕೋಟೆ, ಗದಗ, ಗುಲ್ಬರ್ಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

08ನೇ ಏಪ್ರಿಲ್ 2024 ರ ಬೆಳಗ್ಗೆವರೆಗಿನ ಬೆಂಗಳೂರು ನಗರದಲ್ಲಿ ಭಾಗಶಃ ಮೋಡವಿರಲಿದ್ದು, ಮಧ್ಯಾಹ್ನ/ಸಂಜೆಯ ಹೊತ್ತಿಗೆ ಮುಖ್ಯವಾಗಿ ತಿಳಿ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 38 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+